HomeLatest Newsಟಿ-20 ವಿಶ್ವಕಪ್ 2024 : ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ಟೈಮ್ ಫಿಕ್ಸ್

ಟಿ-20 ವಿಶ್ವಕಪ್ 2024 : ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ಟೈಮ್ ಫಿಕ್ಸ್

ನವದೆಹಲಿ: ಜೂನ್ 9 ರಂದು ನ್ಯೂಯಾರ್ಕ್ನ ಐಸೆನ್ಹೋವರ್ ಪಾರ್ಕ್ನಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ 2024 ರಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಪ್ರಕಟಿಸಿದೆ.

ಟೀಂ ಇಂಡಿಯಾದ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಘಂಟೆ ಸುಮಾರಿಗೆ ಶುರು ಆಗಲಿದೆ. ಅಂದರೆ ಭಾರತದ ಪಂದ್ಯಗಳು ಯುಎಸ್​ಎನಲ್ಲಿ ಬೆಳಿಗ್ಗೆ 9.30 ಗಂಟೆಯಿಂದ ಆರಂಭವಾಗಲಿದ್ದು, ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ನೇರ ಪ್ರಸಾರವಾಗಲಿದೆ.

ಟಿ20 ವಿಶ್ವಕಪ್​ನ ಹೈವೊಲ್ಟೆಜ್ ಕದನ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಜೂನ್ 9 ರಂದು ನಡೆಯಲಿದೆ. ಭಾನುವಾರ ನಡೆಯಲಿರುವ ಈ ಪಂದ್ಯಕ್ಕೆ ನ್ಯೂಯಾರ್ಕ್​ನ ಹೊಸ ಸ್ಟೇಡಿಯಂ ಆತಿಥ್ಯವಹಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2024ರ ಟಿ20 ವಿಶ್ವಕಪ್ ಗೆ ಅರ್ಹತೆ ಪಡೆದ ತಂಡಗಳ ಪಟ್ಟಿ

ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಕೆನಡಾ, ಇಂಗ್ಲೆಂಡ್, ಭಾರತ, ಐರ್ಲೆಂಡ್, ನಮೀಬಿಯಾ, ನೇಪಾಳ, ನೆದರ್ಲ್ಯಾಂಡ್ಸ್, ನ್ಯೂಜಿಲೆಂಡ್, ಒಮಾನ್, ಪಾಕಿಸ್ತಾನ, ಪಪುವಾ ನ್ಯೂ ಗಿನಿಯಾ, ಸ್ಕಾಟ್ಲೆಂಡ್, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಉಗಾಂಡಾ, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಮತ್ತು ವೆಸ್ಟ್ ಇಂಡೀಸ್

For Latest News Updates, Join Our Whatsapp Community🚩
RELATED ARTICLES

Most Popular