HomeLatest NewsT20 World Cup 2026: ಪಾಕ್ ವಿರುದ್ಧದ ಪಂದ್ಯಕ್ಕೆ ಅಭಿಷೇಕ್ ಡೌಟ್; ಸ್ವತಃ ಆರೋಗ್ಯದ ಅಪ್‌ಡೇಟ್...

T20 World Cup 2026: ಪಾಕ್ ವಿರುದ್ಧದ ಪಂದ್ಯಕ್ಕೆ ಅಭಿಷೇಕ್ ಡೌಟ್; ಸ್ವತಃ ಆರೋಗ್ಯದ ಅಪ್‌ಡೇಟ್ ಹಂಚಿಕೊಂಡ ಶರ್ಮಾ

ಪ್ರಸ್ತುತ ನಡೆಯುತ್ತಿರುವ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಟೂರ್ನಿಯಲ್ಲಿ ಸೂಪರ್ 8 ಸುತ್ತಿಗೆ ಅರ್ಹತೆ ಗಿಟ್ಟಿಸಿಕೊಳ್ಳಲು ತಂಡಗಳ ನಡುವೆ ಪೈಪೋಟಿ ಶುರುವಾಗಿದೆ.

ಉದ್ಘಾಟನೆ ದಿನ ನಡೆದ ಟೂರ್ನಿಯ ಮೂರನೇ ಪಂದ್ಯದಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ವಿರುದ್ಧ ಗೆಲವು ಕಂಡು ಶುಭಾರಂಭ ಮಾಡಿದ್ದ ಭಾರತ ನಿನ್ನೆ ( ಫೆಬ್ರವರಿ 12 ) ನಡೆದ ನಮೀಬಿಯಾ ವಿರುದ್ಧದ ಪಂದ್ಯವನ್ನು ಗೆದ್ದು ಎ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಹೀಗೆ ಆಡಿದ ಮೊದಲೆರಡು ಪಂದ್ಯಗಳನ್ನು ಗೆದ್ದ ಭಾರತ ಭಾನುವಾರ ನಡೆಯಲಿರುವ ತನ್ನ ಮೂರನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯ ಆರಂಭವಾಗುವುದಕ್ಕೂ ಮುನ್ನ ತಂಡದ ಪ್ರಮುಖ ಆಟಗಾರ ಅಭಿಷೇಕ್ ಶರ್ಮಾ ಅಲಭ್ಯರಾಗಲಿದ್ದಾರೆ ಎನ್ನುವ ಸುದ್ದಿಗಳು ದೊಡ್ಡ ಮಟ್ಟದಲ್ಲಿ ಹರಿದಾಡುತ್ತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೌದು, ಯುಎಸ್‌ಎ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದು ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದ ಅಭಿಷೇಕ್ ಶರ್ಮಾ ನಂತರ ಫೀಲ್ಡಿಂಗ್‌ಗೂ ಕಣಕ್ಕಿಳಿದಿರಲಿಲ್ಲ. ಹೊಟ್ಟೆ ನೋವಿನಿಂದ ಬಳಲುತ್ತಿರುವ ಅಭೀಷೇಕ್ ಶರ್ಮಾ ನಿನ್ನೆ ನಮೀಬಿಯಾ ವಿರುದ್ಧ ನಡೆದ ಪಂದ್ಯಕ್ಕೆ ಅಲಭ್ಯರಾಗಿದ್ದರು.

ಈ ಕುರಿತು ನಮೀಬಿಯಾ ವಿರುದ್ಧದ ಪಂದ್ಯದ ಮುನ್ನ ಮಾತನಾಡಿದ್ದ ಸೂರ್ಯಕುಮಾರ್ ಯಾದವ್ ಸಹ ಅಭಿಷೇಕ್ ಶರ್ಮಾ ಇನ್ನೂ ಚೇತರಿಸಿಕೊಳ್ಳದ ಕಾರಣ ಒಂದು ಅಥವಾ ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯಲು ಸಾಧ್ಯವಿಲ್ಲ ಎಂದರು.

ಹೀಗೆ ಪಾಕ್ ವಿರುದ್ಧದ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಅಲಭ್ಯರಾಗಲಿದ್ದಾರೆ ಎನ್ನುವ ನಾಯಕನ ಹೇಳಿಕೆಯನ್ನು ಕೇಳಿ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದ್ದು, ಇದೀಗ ಸ್ವತಃ ಅಭಿಷೇಕ್ ಶರ್ಮಾ ವಿಡಿಯೊ ಮೂಲಕ ತಮ್ಮ ಆರೋಗ್ಯದ ಕುರಿತು ಅಪ್‌ಡೇಟ್ ಕೊಟ್ಟಿದ್ದಾರೆ.

ಭಾರತದ ವೇಗಿ ಅರ್ಷ್‌ದೀಪ್ ಸಿಂಗ್ ಸೆಲ್ಫಿ ವಿಡಿಯೊ ಮಾಡಿದ್ದು, ಈ ವಿಡಿಯೊದಲ್ಲಿ ಆರೋಗ್ಯ ಹೇಗಿದೆ ಎಂದು ಅಭಿಷೇಕ್ ಶರ್ಮಾಗೆ ಪ್ರಶ್ನೆ ಹಾಕಿದ್ದಾರೆ. ಇದಕ್ಕೆ ಉತ್ತರಿಸಿದ ಅಭಿಷೇಕ್ ಶರ್ಮಾ ಅನ್ನ ಹಾಗೂ ದಾಲ್ ಮಾತ್ರ ತಿನ್ನುತ್ತಿದ್ದು, ತಾನು ಚೆನ್ನಾಗಿದ್ದೇನೆ ಎಂದಿದ್ದಾರೆ. ಅಲ್ಲದೇ ಆಸ್ಪತ್ರೆಯಲ್ಲಿ ಎರಡು ಕೆಜಿ ಇಳಿದಿರುವುದಾಗಿ ಸಹ ಹೇಳಿಕೊಂಡಿದ್ದಾರೆ. ಅಭಿಷೇಕ್ ಶರ್ಮಾ ಇನ್ನೂ ಸುಧಾರಿಸಿಕೊಳ್ಳದೇ ಇರುವುದು ಅವರ ಮಾತಿನಲ್ಲಿಯೇ ಅರ್ಥವಾಗುತ್ತಿದ್ದು, ಪಾಕ್ ವಿರುದ್ಧದ ಪಂದ್ಯದೊತ್ತಿಗೆ. ಅದೂ ಸಹ ಶ್ರೀಲಂಕಾ ವಾತಾವರಣಕ್ಕೆ ಹೊಂದಿಕೊಳ್ತಾರಾ ಎಂಬ ಪ್ರಶ್ನೆ ಎದ್ದಿದೆ.

https://twitter.com/KannadaDuniaOfl/status/2022196747708314081?s=20

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular