HomeLatest NewsT20 World Cup 2026: ಪಾಕ್ ವಿರುದ್ಧದ ಪಂದ್ಯಕ್ಕೆ ಪ್ರಮುಖ ಆಟಗಾರನೇ ಇಲ್ಲ ಎಂದ ಸೂರ್ಯ;...

T20 World Cup 2026: ಪಾಕ್ ವಿರುದ್ಧದ ಪಂದ್ಯಕ್ಕೆ ಪ್ರಮುಖ ಆಟಗಾರನೇ ಇಲ್ಲ ಎಂದ ಸೂರ್ಯ; ಪಾಕ್ ತಂಡದಲ್ಲಿ ಸಂತಸ, ಅಭಿಮಾನಿಗಳಲ್ಲಿ ಆತಂಕ

ನಿನ್ನೆ ( ಫೆಬ್ರವರಿ 12 ) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ 2026ರ ಗ್ರೂಪ್ ಹಂತದ 18ನೇ ಪಂದ್ಯದಲ್ಲಿ ಭಾರತ ನಮೀಬಿಯಾ ವಿರುದ್ಧ 93 ರನ್‌ಗಳ ಗೆಲುವನ್ನು ದಾಖಲಿಸಿ ಟೂರ್ನಿಯಲ್ಲಿ ಸತತ ಎರಡನೇ ಗೆಲುವನ್ನು ದಾಖಲಿಸಿತು.

ಈ ಮೂಲಕ ಎರಡು ಅಂಕಗಳನ್ನು ಪಡೆದ ಭಾರತ ಅಷ್ಟೇ ಅಂಕ ಪಡೆದು ಎ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಪಾಕಿಸ್ತಾನವನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದೆ.

ಹೀಗೆ ಟೂರ್ನಿಯಲ್ಲಿ ಸತತ ಗೆಲುವು ಕಂಡಿರುವ ಭಾರತ ಇದೇ ಭಾನುವಾರ ( ಫೆಬ್ರವರಿ 15 ) ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಸೆಣಸಾಡಲಿದ್ದು, ಹ್ಯಾಟ್ರಿಕ್ ಜಯ ಸಾಧಿಸಿ ಸೂಪರ್ 8ರ ಹಾದಿಯನ್ನು ಭದ್ರಪಡಿಸಿಕೊಳ್ಳುವತ್ತ ಕಣ್ಣಿಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಈ ಪಂದ್ಯ ಆರಂಭಕ್ಕೂ ಮುನ್ನ ಭಾರತ ಕ್ರಿಕೆಟ್ ತಂಡದ ಅಭಿಮಾನಿಗಳಿಗೆ ನಾಯಕ ಸೂರ್ಯಕುಮಾರ್ ಯಾದವ್ ಬೇಸರದ ಸುದ್ದಿಯೊಂದನ್ನು ನೀಡಿದ್ದಾರೆ. ನಿನ್ನೆ ನಮೀಬಿಯಾ ವಿರುದ್ಧದ ಪಂದ್ಯದ ಟಾಸ್ ಬಳಿಕ ಮಾತನಾಡಿದ ಸೂರ್ಯಕುಮಾರ್ ಯಾದವ್ ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಇಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ, ಇನ್ನೂ ಚೇತರಿಸಿಕೊಳ್ಳದ ಅವರು ಒಂದು ಅಥವಾ ಎರಡು ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆಗಳಿವೆ ಎಂದಿದ್ದಾರೆ. ಈ ಮೂಲಕ ಅಭಿಷೇಕ್ ಶರ್ಮಾ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ ಎಂದು ಸೂರ್ಯ ತಿಳಿಸಿದ್ದಾರೆ. ಅತ್ತ ಕಳೆದ ಏಷ್ಯಾ ಕಪ್ ತಂಡದಲ್ಲಿ ತಂಡವನ್ನು ಕಾಡಿದ ಆಟಗಾರ ತಮ್ಮ ವಿರುದ್ಧ ಕಣಕ್ಕಿಳಿಯುವುದು ಅನುಮಾನ ಎಂದು ತಿಳಿದ ಪಾಕ್ ತಂಡದಲ್ಲಿ ಸಹಜವಾಗಿಯೇ ಸಂತಸ ಉಂಟಾಗಿರುವುದು ಸುಳ್ಳಲ್ಲ.

ಹೀಗೆ ಸೂರ್ಯಕುಮಾರ್ ಯಾದವ್ ನೀಡಿದ ಹೇಳಿಕೆ ಚರ್ಚೆಗೆ ಕಾರಣವಾಗಿದ್ದು, ಅಭಿಷೇಕ್ ಶರ್ಮಾ ಅನುಪಸ್ಥಿತಿ ಪಾಕ್ ವಿರುದ್ಧದ ಪಂದ್ಯದಲ್ಲಿ ತಂಡದ ಮೇಲೆ ಪರಿಣಾಮ ಬೀರಲಿದೆಯಾ ಎಂಬ ಪ್ರಶ್ನೆ ಎದ್ದಿದೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular