HomeLatest NewsT20 World Cup 2026: ಆಸ್ಟ್ರೇಲಿಯಾ vs ಲಂಕಾ ಹೈವೋಲ್ಟೇಜ್ ಪಂದ್ಯ ಆರಂಭ; ಸೋತರೆ ಕಾಂಗರೂಗಳು...

T20 World Cup 2026: ಆಸ್ಟ್ರೇಲಿಯಾ vs ಲಂಕಾ ಹೈವೋಲ್ಟೇಜ್ ಪಂದ್ಯ ಆರಂಭ; ಸೋತರೆ ಕಾಂಗರೂಗಳು ಟೂರ್ನಿಯಿಂದ ಔಟ್!

ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಗ್ರೂಪ್ ಹಂತದ 30ನೇ ಪಂದ್ಯ ನಡೆಯುತ್ತಿದ್ದು, ಬಿ ಗುಂಪಿನ ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ಫೀಲ್ಡಿಂಗ್ ಆರಿಸಿಕೊಂಡಿದ್ದು, ಆಸ್ಟ್ರೇಲಿಯಾ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.

ಟೂರ್ನಿಯಲ್ಲಿ ಇಲ್ಲಿಯವರೆಗೂ ಆಡಿರುವ ಎರಡು ಪಂದ್ಯಗಳಲ್ಲಿ ಗೆದ್ದಿರುವ ಶ್ರೀಲಂಕಾ ಬಿ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಎರಡು ಪಂದ್ಯಗಳನ್ನಾಡಿ ಒಂದರಲ್ಲಿ ಗೆದ್ದು ಜಿಂಬಾಬ್ವೆ ವಿರುದ್ಧ ಹೀನಾಯ ಸೋಲು ಕಂಡು ಮುಖಭಂಗ ಅನುಭವಿಸಿರುವ ಆಸ್ಟ್ರೇಲಿಯಾ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೀಗಾಗಿ ಈ ಪಂದ್ಯ ಆಸ್ಟ್ರೇಲಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಸೂಪರ್ 8 ಆಸೆಯನ್ನು ಜೀವಂತವಾಗಿರಿಸಿಕೊಳ್ಳಬೇಕೆಂದರೆ ಗೆಲ್ಲಲೇಬೇಕಿದೆ. ಒಂದುವೇಳೆ ಈ ಪಂದ್ಯದಲ್ಲಿ ಸೋತರೆ ಟೂರ್ನಿಯಿಂದ ಬಹುತೇಕ ಹೊರಬೀಳಲಿದೆ.

ಇನ್ನು ಕಳೆದ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದ ಮಿಚೆಲ್ ಮಾರ್ಷ್ ಈ ಪಂದ್ಯದಲ್ಲಿ ಮರಳಿದ್ದು, ಆಸ್ಟ್ರೇಲಿಯಾ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ.

ಆಸ್ಟ್ರೇಲಿಯಾ ಆಡುವ ಬಳಗ: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೋಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕೂಪರ್ ಕೊನ್ನೊಲಿ, ಜೇವಿಯರ್ ಬಾರ್ಟ್‌ಲೆಟ್, ನಾಥನ್ ಎಲಿಸ್, ಆಡಮ್ ಜಾಂಪಾ

ಶ್ರೀಲಂಕಾ ಆಡುವ ಬಳಗ: ಪಥುಮ್ ನಿಸ್ಸಂಕಾ, ಕುಸಲ್ ಪೆರೇರಾ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಪವನ್ ರತ್ನಾಯಕೆ, ದಸುನ್ ಶನಾಕಾ (ನಾಯಕ), ಕಮಿಂದು ಮೆಂಡಿಸ್, ದುಷಾನ್ ಹೇಮಂತ, ದುನಿತ್ ವೆಲ್ಲಾಲೇಜ್, ದುಷ್ಮಂತ ಚಮೀರಾ, ಮಹೀಶ್ ತೀಕ್ಷಣ, ಮಥೀಶ ಪತಿರಾನಾ

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular