ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸೂಪರ್ 8 ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆರಿಸಿಕೊಂಡಿದೆ.
ಇನ್ನು ಗ್ರೂಪ್ 2ರಲ್ಲಿ ಇಂಗ್ಲೆಂಡ್ ಈಗಾಗಲೇ ಸೆಮಿಫೈನಲ್ ಪ್ರವೇಶಿಸಿದ್ದು, ಇನ್ನೊಂದು ಸ್ಥಾನದ ಮೇಲೆ ನ್ಯೂಜಿಲೆಂಡ್ ಕಣ್ಣಿಟ್ಟಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆದ್ದರೆ ಸೆಮಿಫೈನಲ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳಲಿದೆ.
ಒಂದುವೇಳೆ ಈ ಪಂದ್ಯದಲ್ಲೇನಾದರೂ ಇಂಗ್ಲೆಂಡ್ ಗೆದ್ದರೆ ಪಾಕಿಸ್ತಾನದ ಸೆಮಿಫೈನಲ್ ಆಸೆ ಜೀವಂತವಾಗಿ ಉಳಿದುಕೊಳ್ಳಲಿದೆ. ಆದರೆ ಪಾಕಿಸ್ತಾನ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಕಡ್ಡಾಯವಾಗಿ ಗೆದ್ದು ನ್ಯೂಜಿಲೆಂಡ್ ತಂಡಕ್ಕಿಂತ ಹೆಚ್ಚಿನ ನೆಟ್ ರನ್‌ರೇಟ್ ಪಡೆದರೆ ಮಾತ್ರ ಸೆಮಿಫೈನಲ್ ಬಾಗಿಲು ತೆರೆಯಲಿದೆ.
ನ್ಯೂಜಿಲೆಂಡ್ ಆಡುವ ಬಳಗ: ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ಜೇಕಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಲಿಯಾಮ್ ಡಾಸನ್, ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಅದಿಲ್ ರಶೀದ್
ಇಂಗ್ಲೆಂಡ್ ಆಡುವ ಬಳಗ: ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಫಿನ್ ಅಲೆನ್, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಡ್ಯಾರಿಲ್ ಮಿಚೆಲ್, ಮಾರ್ಕ್ ಚಾಪ್‌ಮನ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕೋಲ್ ಮ್ಯಾಕ್‌ಕಾಂಚಿ, ಮ್ಯಾಟ್ ಹೆನ್ರಿ, ಇಶ್ ಸೋಧಿ, ಲಾಕಿ ಫರ್ಗ್ಯೂಸನ್

