ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಫೈನಲ್ ಪಂದ್ಯ ಆರಂಭವಾಗಿದ್ದು, ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆರಿಸಿಕೊಂಡಿದ್ದು, ಭಾರತ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಈ ಮೂಲಕ ಟಾಸ್‌ನಲ್ಲಿ ಭಾರತ ತಂಡಕ್ಕೆ ಹಿನ್ನಡೆಯುಂಟಾಗಿದೆ.
ಭಾರತದ ಆಡುವ ಬಳಗ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಈಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಮ್ ದುಬೆ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಅರ್ಶದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ
ನ್ಯೂಜಿಲೆಂಡ್ ಆಡುವ ಬಳಗ: ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಫಿನ್ ಅಲೆನ್, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಜೇಮ್ಸ್ ನೀಶಾಮ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮ್ಯಾಟ್ ಹೆನ್ರಿ, ಲಾಕಿ ಫರ್ಗ್ಯೂಸನ್, ಜೇಕಬ್ ಡಫಿ

