HomeLatest NewsT20 World Cup 2026: ಜಿಂಬಾಬ್ವೆ ವಿರುದ್ಧ ಗೆದ್ದ ಭಾರತದ ಸೆಮೀಸ್ ಆಸೆ ಜೀವಂತ; ಟೂರ್ನಿಯಿಂದ...

T20 World Cup 2026: ಜಿಂಬಾಬ್ವೆ ವಿರುದ್ಧ ಗೆದ್ದ ಭಾರತದ ಸೆಮೀಸ್ ಆಸೆ ಜೀವಂತ; ಟೂರ್ನಿಯಿಂದ ಹೊರಬಿದ್ದ ಜಿಂಬಾಬ್ವೆ

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಸೂಪರ್ 8 ಪಂದ್ಯದಲ್ಲಿ ಭಾರತ ಜಿಂಬಾಬ್ವೆ ವಿರುದ್ಧ 72 ರನ್‌ಗಳ ಗೆಲುವನ್ನು ಸಾಧಿಸಿ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಪಂದ್ಯದಲ್ಲಿ ಸೋತ ಜಿಂಬಾಬ್ವೆ ಟೂರ್ನಿಯಿಂದ ಹೊರಬಿದ್ದಿದೆ. ಭಾನುವಾರ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಗೆದ್ದರೆ ಭಾರತ ಸೆಮಿಫೈನಲ್‌ಗೆ ಲಗ್ಗೆ ಇಡಲಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಬೌಲಿಂಗ್ ಆರಿಸಿಕೊಂಡು ಭಾರತ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಭಾರತ ಒಟ್ಟಾರೆ ತಂಡದ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 256 ರನ್ ಕಲೆಹಾಕಿ ಜಿಂಬಾಬ್ವೆಗೆ 257 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಜಿಂಬಾಬ್ವೆ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 184 ರನ್ ಕಲೆಹಾಕಿತು.

ಭಾರತದ ಇನ್ನಿಂಗ್ಸ್: ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ ಬ್ಯಾಟ್‌ನಿಂದ ಶುರುವಾದ ಬೌಂಡರಿ ಹೊಳೆ ಪಂದ್ಯದುದ್ದಕ್ಕೂ ಹರಿದುಬಂದಿದ್ದು, ಫಾರ್ಮ್ ಕಳೆದುಕೊಂಡಿದ್ದ ಅಭಿಷೇಕ್ ಶರ್ಮಾ ಸಹ ಈ ಇನ್ನಿಂಗ್ಸ್‌ನಲ್ಲಿ ಕಂಬ್ಯಾಕ್ ಮಾಡಿದರು. ಇನ್ನು ಟೂರ್ನಿಯುದ್ದಕ್ಕೂ ಕಳಪೆ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ್ದ ತಿಲಕ್ ವರ್ಮಾ ಸಹ ಅಬ್ಬರಿಸಿದರು. ಸಂಜು ಸ್ಯಾಮ್ಸನ್ 24 (15) ರನ್ ಗಳಿಸಿದರೆ, ಅಭಿಷೇಕ್ ಶರ್ಮಾ 55(30), ಇಶಾನ್ ಕಿಶನ್ 38 (24), ಸೂರ್ಯಕುಮಾರ್ ಯಾದವ್ 33 (13), ಹಾರ್ದಿಕ್ ಪಾಂಡ್ಯ ಅಜೇಯ 50 (23) ರನ್ ಹಾಗೂ ತಿಲಕ್ ವರ್ಮಾ ಅಜೇಯ 44 (16) ರನ್ ಬಾರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಂಬಾಬ್ವೆ ಪರ ಸಿಕಂದರ್ ರಾಜಾ, ಮಪೋಸಾ, ಮುಜರ್‌ಬಾನಿ ಹಾಗೂ ಎನ್‌ಗವಾರಾ ತಲಾ ಒಂದೊಂದು ವಿಕೆಟ್ ಪಡೆದರು.

ಜಿಂಬಾಬ್ವೆ ಇನ್ನಿಂಗ್ಸ್: ತಂಡದ ಪರ ಮಾರುಮಾನಿ 20, ಡಿಯಾನ್ ಮೇಯರ್ಸ್ 6, ಸಿಕಂದರ್ ರಾಜಾ 31, ರಯಾನ್ ಬರ್ಲ್ ಡಕ್‌ಔಟ್, ಟೋನಿ ಮುನ್ಯೊಂಗ 11, ಮುಸೆಕಿವ 7, ಬ್ರಾಡ್ ಎವಿನ್ಸ್ ಅಜೇಯ 1 ರನ್ ಹಾಗೂ ಆರಂಭಿಕನಾಗಿ ಕಣಕ್ಕಿಳಿದು ಅಂತಿಮ ಹಂತದವರೆಗೂ ಕಣದಲ್ಲಿದ್ದ ಬ್ರಿಯಾನ್ ಬೆನೆಟ್ ಅಜೇಯ 97 ರನ್ ಬಾರಿಸಿದರು.

ಅರ್ಷ್‌ದೀಪ್ ಸಿಂಗ್ ಮೂರು ವಿಕೆಟ್, ವರುಣ್ ಚಕ್ರವರ್ತಿ, ಅಕ್ಸರ್ ಪಟೇಲ್ ಹಾಗೂ ಶಿವಮ್ ದುಬೆ ತಲಾ ಒಂದೊಂದು ವಿಕೆಟ್ ಪಡೆದರು.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular