HomeSportsT20 World Cup 2026: ಪಾಂಡ್ಯ, ಇಶಾನ್ ಕಿಶನ್ ಅರ್ಧಶತಕ, ಕೈಕೊಟ್ಟ ಕೆಳಕ್ರಮಾಂಕ; ನಮೀಬಿಯಾಗೆ ಕಠಿಣ...

T20 World Cup 2026: ಪಾಂಡ್ಯ, ಇಶಾನ್ ಕಿಶನ್ ಅರ್ಧಶತಕ, ಕೈಕೊಟ್ಟ ಕೆಳಕ್ರಮಾಂಕ; ನಮೀಬಿಯಾಗೆ ಕಠಿಣ ಗುರಿ

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಗ್ರೂಪ್ ಹಂತದ 18ನೇ ಪಂದ್ಯ ನಡೆಯುತ್ತಿದ್ದು, ಎ ಗುಂಪಿನ ಭಾರತ ಹಾಗೂ ನಮೀಬಿಯಾ ತಂಡಗಳು ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಗೆದ್ದ ನಮೀಬಿಯಾ ಫೀಲ್ಡಿಂಗ್ ಆರಿಸಿಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಭಾರತ ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ ಅರ್ಧಶತಕಗಳ ನೆರವಿನಿಂದ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 209 ರನ್ ಕಲೆಹಾಕಿ ನಮೀಬಿಯಾಗೆ 210 ರನ್‌ಗಳ ಗುರಿಯನ್ನು ನೀಡಿದೆ.

ಭಾರತದ ಪರ ಆರಂಭಿಕರಾಗಿ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಕಣಕ್ಕಿಳಿದರು. ವೇಗವಾಗಿ ಇನ್ನಿಂಗ್ಸ್ ಕಟ್ಟಲು ಆರಂಭಿಸಿದ ಸಂಜು ಸ್ಯಾಮ್ಸನ್ 8 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 22 ರನ್ ಬಾರಿಸಿ ಎರಡನೇ ಓವರ್‌ನಲ್ಲೇ ಪೆವಿಲಿಯನ್ ಸೇರಿಕೊಂಡರೆ, ಇಶಾನ್ ಕಿಶನ್ 24 ಎಸೆತಗಳಲ್ಲಿ 6 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 61 ರನ್ ಬಾರಿಸಿದರು. ಇನ್ನುಳಿದಂತೆ ತಿಲಕ್ ವರ್ಮಾ 25, ನಾಯಕ ಸೂರ್ಯಕುಮಾರ್ ಯಾದವ್ 12, ಹಾರ್ದಿಕ್ ಪಾಂಡ್ಯ 28 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 52 ರನ್ ಬಾರಿಸಿದರು. ಇನ್ನುಳಿದಂತೆ ಶಿವಮ್ ದುಬೆ 22 ರನ್‌ಗೆ ವಿಕೆಟ್ ಒಪ್ಪಿಸಿದರೆ, ರಿಂಕು ಸಿಂಗ್ ಕೇವಲ 1 ರನ್, ಅಕ್ಸರ್ ಪಟೇಲ್ ಡಕ್‌ಔಟ್, ಅರ್ಷ್‌ದೀಪ್ ಸಿಂಗ್ 2 ರನ್ ಹಾಗೂ ಯಾವುದೇ ರನ್ ಗಳಿಸದ ವರುಣ್ ಚಕ್ರವರ್ತಿ ಅಜೇಯರಾಗಿ ಉಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮೀಬಿಯಾ ಪರ ನಾಯಕ ಗೆರ್ಹಾರ್ಡ್ ಎರಾಸ್ಮನ್ ನಾಲ್ಕು ವಿಕೆಟ್, ಬೆನ್ ಶಿಕಾಂಗೋ, ಜೆಜೆ ಸ್ಮಿಟ್ ಹಾಗೂ ಬೆರ್ನಾರ್ಡ್ ಸ್ಕಾಲ್ಟ್ಜ್ ತಲಾ ಒಂದೊಂದು ವಿಕೆಟ್ ಪಡೆದರು.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular