HomeSportsT20 World Cup 2026: ಭಾರತ vs ನೆದರ್ಲೆಂಡ್ಸ್ ಪಂದ್ಯ ಆರಂಭ; ಭಾರತ ತಂಡದಿಂದ ಇಬ್ಬರು...

T20 World Cup 2026: ಭಾರತ vs ನೆದರ್ಲೆಂಡ್ಸ್ ಪಂದ್ಯ ಆರಂಭ; ಭಾರತ ತಂಡದಿಂದ ಇಬ್ಬರು ಔಟ್

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಹಂತದ 36ನೇ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಭಾರತ ಹಾಗೂ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆರಿಸಿಕೊಂಡಿದ್ದು, ಕಳೆದ ಪಂದ್ಯಕ್ಕೆ ಹೋಲಿಸಿದರೆ ಈ ಪಂದ್ಯದಲ್ಲಿ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಿಕೊಂಡು ಕಣಕ್ಕಿಳಿದಿದೆ.

ಪಾಕ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕುಲ್‌ದೀಪ್ ಯಾದವ್ ಹೊರಗುಳಿದಿದ್ದು, ಅರ್ಷ್‌ದೀಪ್ ಸಿಂಗ್ ಅವರ ಸ್ಥಾನಕ್ಕೆ ಬಂದಿದ್ದಾರೆ ಹಾಗೂ ಅಕ್ಸರ್ ಪಟೇಲ್ ವಿಶ್ರಾಂತಿ ಪಡೆಯುತ್ತಿದ್ದು, ಅವರ ಸ್ಥಾನಕ್ಕೆ ವಾಷಿಂಗ್ಟನ್ ಸುಂದರ್ ಕಣಕ್ಕಿಳಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಟೀಮ್ ಇಂಡಿಯಾ ಈಗಾಗಲೇ ಸೂಪರ್ 8 ಪ್ರವೇಶಿಸಿದ್ದು, ಈ ಪಂದ್ಯದಲ್ಲಿ ಏನೇ ಫಲಿತಾಂಶ ಬಂದರೂ ಮುಂದಿನ ಸುತ್ತಿನ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ.

ಭಾರತದ ಆಡುವ ಬಳಗ: ಇಶಾನ್ ಕಿಶನ್(ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ಹಾರ್ದಿಕ್ ಪಾಂಡ್ಯ, ಶಿವಮ್ ದುಬೆ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅರ್ಶದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ

ನೆದರ್ಲೆಂಡ್ಸ್ ಆಡುವ ಬಳಗ: ಮೈಕೆಲ್ ಲೆವಿಟ್, ಮ್ಯಾಕ್ಸ್ ಓ’ಡೌಡ್, ಬಾಸ್ ಡಿ ಲೀಡೆ, ಕಾಲಿನ್ ಅಕರ್ಮನ್, ಸ್ಕಾಟ್ ಎಡ್ವರ್ಡ್ಸ್(ವಿಕೆಟ್ ಕೀಪರ್ ಹಾಗೂ ನಾಯಕ), ಜಾಚ್ ಲಯನ್-ಕ್ಯಾಶೆಟ್, ನೋಹ್ ಕ್ರೋಸ್, ರೂಲೋಫ್ ವಾನ್ ಡೆರ್ ಮೆರ್ವೆ, ಲೋಗನ್ ವಾನ್ ಬೀಕ್, ಆರ್ಯನ್ ದತ್ತ್, ಕೈಲ್ ಕ್ಲೈನ್

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular