HomeLatest NewsT20 World Cup 2026: ಇಂದು ಭಾರತ vs ದಕ್ಷಿಣ ಆಫ್ರಿಕಾ ಹಣಾಹಣಿ; ನೇರಪ್ರಸಾರ ಹಾಗೂ...

T20 World Cup 2026: ಇಂದು ಭಾರತ vs ದಕ್ಷಿಣ ಆಫ್ರಿಕಾ ಹಣಾಹಣಿ; ನೇರಪ್ರಸಾರ ಹಾಗೂ ಸಮಯದ ಮಾಹಿತಿ

ಇದೇ ತಿಂಗಳ 7ರಿಂದ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗುತ್ತಿದ್ದು, ಇದಕ್ಕೂ ಮುನ್ನ ತಂಡಗಳು ಅಭ್ಯಾಸ ಪಂದ್ಯಗಳನ್ನಾಡುವ ಮೂಲಕ ಟೂರ್ನಿಗೆ ಕೊನೆಯ ಹಂತದ ಸಿದ್ಧತೆಯಲ್ಲಿ ತೊಡಗಿಕೊಂಡಿವೆ.

ಲೀಗ್ ಹಂತದ ಪಂದ್ಯಗಳು ನಡೆಯುವುದಕ್ಕೂ ಮುನ್ನ ಒಟ್ಟು 16 ಅಭ್ಯಾಸ ಪಂದ್ಯಗಳು ಫೆಬ್ರವರಿ 2ರಿಂದ 6ರವರೆಗೆ ಆಯೋಜನೆಗೊಂಡಿವೆ. ಫೆಬ್ರವರಿ 2ರಂದು ನಡೆದ ಟೂರ್ನಿಯ ಎರಡನೇ ಪಂದ್ಯದಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ತಂಡದ ವಿರುದ್ಧ ಭಾರತ ಎ ತಂಡ 38 ರನ್‌ಗಳ ಗೆಲುವನ್ನು ಸಾಧಿಸುವುದರ ಮೂಲಕ ಶುಭಾರಂಭ ಮಾಡಿತ್ತು.

ಇದೀಗ ಇಂದು ( ಫೆಬ್ರವರಿ 4 ) ನಡೆಯಲಿರುವ ಟೂರ್ನಿಯ ಹತ್ತನೇ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಅಭ್ಯಾಸ ಪಂದ್ಯವನ್ನಾಡಲಿದೆ. ಈ ಪಂದ್ಯ ನವಿಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಂಜೆ 7 ಗಂಟೆಗೆ ಆರಂಭವಾಗಲಿದೆ. ಪಂದ್ಯದ ನೇರಪ್ರಸಾರ ಸ್ಟಾರ್ ಸ್ಪೋರ್ಟ್ಸ ಚಾನೆಲ್ ಹಾಗೂ ಒಟಿಟಿಯಲ್ಲಿ ಜಿಯೊ ಹಾಟ್‌ಸ್ಟಾರ್‌ನಲ್ಲಿ ಲಭ್ಯವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟೂರ್ನಿಗೆ ಪ್ರಕಟವಾಗಿರುವ ದಕ್ಷಿಣ ಆಫ್ರಿಕಾ ಸ್ಕ್ವಾಡ್: ಐಡನ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ರಯಾನ್ ರಿಕೆಲ್ಟನ್, ಜಾರ್ಜ್ ಲಿಂಡೆ, ಜೇಸನ್ ಸ್ಮಿತ್, ಟ್ರಿಸ್ಟನ್ ಸ್ಟಬ್ಸ್, ಕಾರ್ಬಿನ್ ಬೋಶ್, ಕೇಶವ್ ಮಹಾರಾಜ್, ಕ್ವೆನಾ ಮಫಾಕಾ, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ಟ್ಜೆ, ಮಾರ್ಕೊ ಜಾನ್ಸೆನ್, ಕಗಿಸೊ ರಬಾಡಾ, ಡೇವಿಡ್ ಮಿಲ್ಲರ್

ಟೂರ್ನಿಗೆ ಪ್ರಕಟವಾಗಿರುವ ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಮ್ ದುಬೆ, ಅಕ್ಷರ್ ಪಟೇಲ್, ಅರ್ಶದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲದೀಪ್ ಯಾದವ್

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

Most Popular