ಪ್ರಸ್ತುತ ನಡೆಯುತ್ತಿರುವ ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಸೂಪರ್ 8 ಸುತ್ತಿನ ಕೊನೆಯ ಪಂದ್ಯದಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿವೆ.
ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಫೀಲ್ಡಿಂಗ್ ಆರಿಸಿಕೊಂಡು ವೆಸ್ಟ್ ಇಂಡೀಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡ ಸೆಮಿಫೈನಲ್ ಟಿಕೆಟ್ ಪಡೆದರೆ, ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ.
ಭಾರತದ ಆಡುವ ಬಳಗದಲ್ಲಿ ಯಾವುದೇ ಬದಲಾವಣೆಗಳನ್ನು ಇಲ್ಲ. ವೆಸ್ಟ್ ಇಂಡೀಸ್ ತಂಡದಲ್ಲಿ ಬ್ರಾಂಡನ್ ಕಿಂಗ್ ಹೊರುಗುಳಿದಿದ್ದು, ಅಖೆಲ್ ಹೊಸೈನ್ ತಂಡ ಸೇರಿಕೊಂಡಿದ್ದಾರೆ.
ಭಾರತದ ಆಡುವ ಬಳಗ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಈಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ತಿಲಕ್ ವರ್ಮಾ, ಶಿವಮ್ ದುಬೆ, ಅಕ್ಷರ್ ಪಟೇಲ್, ಅರ್ಶದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
ವೆಸ್ಟ್ ಇಂಡೀಸ್ ಆಡುವ ಬಳಗ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಈಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ತಿಲಕ್ ವರ್ಮಾ, ಶಿವಮ್ ದುಬೆ, ಅಕ್ಷರ್ ಪಟೇಲ್, ಅರ್ಶದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.

