ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಸೂಪರ್ 8 ಹಂತದಲ್ಲಿ ಭಾರತ ಹಾಗೂ ಜಿಂಬಾಬ್ವೆ ತಂಡಗಳು ಮುಖಾಮುಖಿಯಾಗಿವೆ.
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಬೌಲಿಂಗ್ ಆರಿಸಿಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಇನ್ನು ಭಾರತ ಹಾಗೂ ಜಿಂಬಾಬ್ವೆ ಎರಡೂ ತಂಡಗಳು ತಮ್ಮ ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ ಸೋಲನ್ನು ಕಂಡಿದ್ದು, ಈ ಪಂದ್ಯದಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ.
ಕಳೆದ ಪಂದ್ಯಕ್ಕೆ ಹೋಲಿಸಿದರೆ ಈ ಪಂದ್ಯದಲ್ಲಿ ಕಣಕ್ಕಿಳಿದಿರುವ ಭಾರತದ ಆಡುವ ಬಳಗದಲ್ಲಿ ಎರಡು ಬದಲಾವಣೆಗಳಾಗಿದ್ದು, ರಿಂಕು ಸಿಂಗ್ ಬದಲಾಗಿ ಸಂಜು ಸ್ಯಾಮ್ಸನ್ ತಂಡ ಸೇರಿದ್ದು, ವಾಷಿಂಗ್ಟನ್ ಸುಂದರ್ ಹೊರಬಿದ್ದಿದ್ದು, ಬದಲಿಗೆ ಅಕ್ಸರ್ ಪಟೇಲ್ ತಂಡಕ್ಕೆ ಮರಳಿದ್ದಾರೆ.
ಭಾರತದ ಆಡುವ ಬಳಗ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಈಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಮ್ ದುಬೆ, ಅಕ್ಷರ್ ಪಟೇಲ್, ಅರ್ಶದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ
ಜಿಂಬಾಬ್ವೆ ಆಡುವ ಬಳಗ: ತಡಿವನಾಶೆ ಮರುಮಾನಿ (ವಿಕೆಟ್ ಕೀಪರ್), ಬ್ರಯಾನ್ ಬೆನೆಟ್, ಡಯಾನ್ ಮಯರ್ಸ್, ರಯಾನ್ ಬರ್ಲ್, ಸಿಕಂದರ್ ರಜಾ (ನಾಯಕ), ಟೋನಿ ಮುನ್ಯೋಂಗಾ, ತಶಿಂಗಾ ಮುಸೆಕಿವಾ, ಬ್ರಾಡ್ ಎವಾನ್ಸ್, ಟಿನೋತೆಂಡಾ ಮಪೋಸಾ, ಬ್ಲೆಸಿಂಗ್ ಮುಜರಬಾನಿ, ರಿಚರ್ಡ್ ಎನ್ಗರಾವಾ

