HomeLatest Newsದ. ಆಫ್ರಿಕಾ ವಿರುದ್ಧ ವಿಂಡೀಸ್ ಗೆದ್ದರೆ ಭಾರತ ಜಿಂಬಾಬ್ವೆ ವಿರುದ್ಧ ಕಡ್ಡಾಯವಾಗಿ ಇಷ್ಟು ದೊಡ್ಡ ರನ್...

ದ. ಆಫ್ರಿಕಾ ವಿರುದ್ಧ ವಿಂಡೀಸ್ ಗೆದ್ದರೆ ಭಾರತ ಜಿಂಬಾಬ್ವೆ ವಿರುದ್ಧ ಕಡ್ಡಾಯವಾಗಿ ಇಷ್ಟು ದೊಡ್ಡ ರನ್ ಅಂತರದಿಂದ ಗೆಲ್ಲಲೇಬೇಕು!

ಪ್ರಸ್ತುತ ನಡೆಯುತ್ತಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರಲ್ಲಿ ಸೂಪರ್ 8ರ ಪಂದ್ಯಗಳು ಜರುಗುತ್ತಿದ್ದು, ಗ್ರೂಪ್ 1ರಿಂದ ಯಾವ ತಂಡಗಳು ಸೆಮಿ ಫೈನಲ್ ಪ್ರವೇಶಿಸಲಿವೆ ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಇಂದು ಈ ಗುಂಪಿನ ಎರಡು ಪಂದ್ಯಗಳು ನಡೆಯಲಿದ್ದು, ಮೊದಲಿಗೆ ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾದರೆ, ಎರಡನೇ ಪಂದ್ಯದಲ್ಲಿ ಭಾರತ ಹಾಗೂ ಜಿಂಬಾಬ್ವೆ ತಂಡಗಳು ಮುಖಾಮುಖಿಯಾಗಲಿವೆ.

ತಲಾ ಒಂದೊಂದು ಪಂದ್ಯದಲ್ಲಿ ಕಣಕ್ಕಿಳಿದಿರುವ ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಜಯ ಸಾಧಿಸಿ ಕ್ರಮವಾಗಿ ಅಂಕಪಟ್ಟಿಯಲ್ಲಿ ಒಂದನೇ ಹಾಗೂ ಎರಡನೇ ಸ್ಥಾನದಲ್ಲಿದ್ದರೆ, ಸೋತಿರುವ ಭಾರತ ಹಾಗೂ ಜಿಂಬಾಬ್ವೆ ಮೂರನೇ ಮತ್ತು ನಾಲ್ಕನೇ ಸ್ಥಾನದಲ್ಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೀಗೆ ಅಂಕಪಟ್ಟಿಯಲ್ಲಿರುವ ಎಲ್ಲಾ ನಾಲ್ಕು ತಂಡಗಳ ಪಂದ್ಯ ಇಂದು ನಡೆಯಲಿದ್ದು, ಭಾರತದ ಸೆಮಿ ಫೈನಲ್ ಭವಿಷ್ಯ ಈ ಪಂದ್ಯಗಳ ಮೂಲಕ ನಿರ್ಧಾರವಾಗಲಿದೆ. ಹಾಗಾದರೆ ಭಾರತ ಸೆಮಿ ಫೈನಲ್ ಪ್ರವೇಶಿಸಬೇಕೆಂದರೆ ಇಂದಿನ ಪಂದ್ಯಗಳಲ್ಲಿ ಯಾವ ರೀತಿಯ ಫಲಿತಾಂಶ ಹೊರಬರಬೇಕು ಹಾಗೂ ಮುಂದಿನ ಪಂದ್ಯಗಳಲ್ಲಿ ಭಾರತ ಮತ್ತು ಇತರೆ ತಂಡಗಳು ಹೇಗೆ ಗೆಲ್ಲಬೇಕು ಎಂಬುದರ ಕುರಿತಾದ ಮಾಹಿತಿ ಮುಂದಿದೆ.

  1. ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾ ಗೆದ್ದರೆ

ಇಂದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ದಕ್ಷಿಣ ಆಫ್ರಿಕಾ ಮಣಿಸಿದರೆ ಭಾರತ ತನ್ನ ಉಳಿದ ಜಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯಗಳನ್ನು ಗೆದ್ದರೆ ಸಾಕು ನೇರವಾಗಿ ಸೆಮಿ ಫೈನಲ್ ಪ್ರವೇಶಿಸಲಿದೆ.

  1. ದಕ್ಷಿಣ ಆಫ್ರಿಕಾ ವಿರುದ್ಧ ವೆಸ್ಟ್ ಇಂಡೀಸ್ ಗೆದ್ದರೆ

ದಕ್ಷಿಣ ಆಫ್ರಿಕಾ ತಂಡವನ್ನು ವೆಸ್ಟ್ ಇಂಡೀಸ್ ಮಣಿಸಿದರೆ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಭಾರತ ನೂರಕ್ಕೂ ಹೆಚ್ಚು ರನ್ ಅಂತರದಿಂದ ಗೆಲ್ಲಲೇಬೇಕು. ಅಲ್ಲದೆ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯವನ್ನು ಕಡ್ಡಾಯವಾಗಿ ಗೆದ್ದರೆ ಪೈಪೋಟಿ ನೀಡಬಹುದಾಗಿದೆ.

  1. ವೆಸ್ಟ್ ಇಂಡೀಸ್ ಗೆದ್ದರೆ ( ನೆಟ್ ರನ್ ರೇಟ್ ಲೆಕ್ಕಾಚಾರ )

ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾ ಸೋತರೆ ಹರಿಣಗಳು ತಮ್ಮ ಮುಂದಿನ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಸೋಲಬೇಕು ಅಥವಾ ಕಡಿಮೆ ಅಂತರದಲ್ಲಿ ಗೆಲ್ಲಬೇಕು. ಅದೇ ಸಮಯದಲ್ಲಿ ಭಾರತ ತನ್ನ ಉಳಿದ ಎರಡು ಪಂದ್ಯಗಳಲ್ಲಿ ದೊಡ್ಡ ಅಂತರದ ಗೆಲುವನ್ನು ಸಾಧಿಸಿ ನೆಟ್ ರನ್ ರೇಟ್ ಹೆಚ್ಚಳ ಮಾಡಿಕೊಳ್ಳಬೇಕು.

  1. ಸೌತ್ ಆಫ್ರಿಕಾ ಸೋತರೆ ಸಮಸ್ಯೆಯೇ ಇಲ್ಲ

ಸೌತ್ ಆಫ್ರಿಕಾ ಇಂದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಹಾಗೂ ಮುಂದಿನ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸೋತರೆ, ಭಾರತ ಜಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ವಿರುದ್ಧ ಗೆದ್ದರೆ ಭಾರತ ನೇರವಾಗಿ ಸೆಮಿ ಫೈನಲ್ ಪ್ರವೇಶಿಸಲಿದೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular