HomeSportsT20 World Cup 2026: ಆ ಆಟಗಾರರನ್ನು ಹೊರಹಾಕಿ ಸಂಜುಗೆ ಚಾನ್ಸ್ ಕೊಡಿ ಇಲ್ಲ ಆಫ್ರಿಕಾ...

T20 World Cup 2026: ಆ ಆಟಗಾರರನ್ನು ಹೊರಹಾಕಿ ಸಂಜುಗೆ ಚಾನ್ಸ್ ಕೊಡಿ ಇಲ್ಲ ಆಫ್ರಿಕಾ ವಿರುದ್ಧ ಗೆಲುವು ಕಷ್ಟ ಎಂದ ಕೈಫ್

ಇಂದು ( ಫೆಬ್ರವರಿ 22 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಸೂಪರ್ 8 ಹಂತದ ಮೂರನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.

ಗ್ರೂಪ್ ಹಂತದಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡೂ ತಂಡಗಳು ಎಲ್ಲ ಪಂದ್ಯಗಳನ್ನು ಗೆದ್ದು ಆಯಾ ಗ್ರೂಪ್ ಹಂತದ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿ ಸೋಲಿಲ್ಲದ ಸರದಾರರಾಗಿ ಸೂಪರ್ 8 ಸುತ್ತಿಗೆ ಲಗ್ಗೆ ಇಟ್ಟಿದ್ದು, ಈ ಮುಖಾಮುಖಿಯಲ್ಲಿ ಯಾವ ತಂಡ ಗೆಲ್ಲಲಿದೆ ಎಂಬ ಪ್ರಶ್ನೆ ಎದ್ದಿದೆ.

ಇನ್ನು ಗ್ರೂಪ್ ಹಂತದಲ್ಲಿ ಕಣಕ್ಕಿಳಿದ ಎಲ್ಲಾ ಮೂರು ಪಂದ್ಯಗಳಲ್ಲಿಯೂ ಶೂನ್ಯ ಸುತ್ತಿದ ಅಭಿಷೇಕ್ ಶರ್ಮಾ ಫಾರ್ಮ್ ಕುರಿತು ಸದ್ಯ ಚರ್ಚೆಗಳು ನಡೆಯುತ್ತಿದ್ದು ಆತನ ಬದಲು ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಬೇಕು ಎಂಬ ಅಭಿಪ್ರಾಯಗಳು ಕ್ರಿಕೆಟ್ ಪ್ರೇಮಿಗಳಲ್ಲಿ ಕೇಳಿಬರುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ ಗ್ರೂಪ್ ಹಂತದ ಪಂದ್ಯಗಳಲ್ಲಿ ಕಳಪೆ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ ತಿಲಕ್ ವರ್ಮಾರನ್ನಾದರೂ ತಂಡದಿಂದ ಹೊರಹಾಕಿ ಸಂಜುಗೆ ಅವಕಾಶ ಕಲ್ಪಿಸಬೇಕು ಎಂಬ ಮಾತುಗಳು ಕೇಳಿಬರುತ್ತಿವೆ.

ಇದೇ ಚರ್ಚೆಗೆ ಇದೀಗ ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಸೇರಿಕೊಂಡಿದ್ದು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಭಾರತ ತಂಡದಲ್ಲಿ ಸಂಜು ಸ್ಯಾಮ್ಸನ್ ಇರಬೇಕು ಎಂದಿದ್ದಾರೆ.

‘ಭಾರತ ತಂಡದ ಅಗ್ರ ಕ್ರಮಾಂಕದಲ್ಲಿ ಬರೀ ಎಡಗೈ ಬ್ಯಾಟ್ಸ್‌ಮನ್‌ಗಳೇ ಇದ್ದಾರೆ. ಇದು ಎದುರಾಳಿ ತಂಡಗಳಿಗೆ ಯೋಜನೆ ರೂಪಿಸಲು ಹಾಗೂ ಆಫ್ ಸ್ಪಿನ್ನರ್‌ಗಳನ್ನೇ ಕಣಕ್ಕಿಳಿಸಲು ಸಹಕಾರಿಯಾಗಿದೆ. ಹೀಗಾಗಿ ಸಂಜು ಸ್ಯಾಮ್ಸನ್ ಆಡಿಸಿದರೆ ಒಳ್ಳೆಯದು’ ಎಂದು ಮೊಹಮ್ಮದ್ ಕೈಫ್ ಟ್ವೀಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular