HomeLatest NewsT20 World Cup 2026: ಪಾಕ್ vs ನ್ಯೂಜಿಲೆಂಡ್ ಮೊದಲ ಸೂಪರ್ 8 ಪಂದ್ಯಕ್ಕೆ ಮಳೆ...

T20 World Cup 2026: ಪಾಕ್ vs ನ್ಯೂಜಿಲೆಂಡ್ ಮೊದಲ ಸೂಪರ್ 8 ಪಂದ್ಯಕ್ಕೆ ಮಳೆ ಅಡ್ಡಿ

ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಸೂಪರ್ 8 ಸುತ್ತು ಇಂದಿನಿಂದ ( ಫೆಬ್ರವರಿ 21 ) ಆರಂಭವಾಗಿದ್ದು, ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆರಿಸಿಕೊಂಡಿದ್ದು, ಟಾಸ್ ಆದ ಬೆನ್ನಲ್ಲೇ ಕೊಲಂಬೊ ನಗರದಲ್ಲಿ ವರುಣನ ಆಗಮನವಾಗಿ ಗ್ರೌಂಡ್‌ಮ್ಯಾನ್‌ಗಳು ಪ್ರೇಮದಾಸ ಗ್ರೌಂಡ್‌ಗೆ ಕವರ್ ಹಾಕಿ ಮುಚ್ಚಿಹಾಕಿದ್ದಾರೆ.

ಹೀಗೆ ರೋಚಕ ಸೂಪರ್ 8 ಸುತ್ತಿನ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು, ಸಂಜೆ 7.30ರ ಸಮಯಕ್ಕೆ ಇನ್ನೂ ಸಹ ಮಳೆ ಮುಂದುವರಿದಿದ್ದು, ಪಂದ್ಯ ನಡೆಯುವ ಸಾಧ್ಯತೆ 30% ಮಾತ್ರ ಇದೆ ಎನ್ನುವ ವರದಿ ಕೇಳಿಬರುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಾಕಿಸ್ತಾನ ಆಡುವ ಬಳಗ: ಸಾಹಿಬ್‌ಜಾದಾ ಫರ್ಹಾನ್, ಸೈಮ್ ಅಯ್ಯೂಬ್, ಸಲ್ಮಾನ್ ಆಘಾ (ನಾಯಕ), ಬಾಬರ್ ಆಝಂ, ಫಖರ್ ಜಮಾನ್, ಉಸ್ಮಾನ್ ಖಾನ್ (ವಿಕೆಟ್‌ಕೀಪರ್), ಶದಾಬ್ ಖಾನ್, ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಸಲ್ಮಾನ್ ಮಿರ್ಜಾ, ಉಸ್ಮಾನ್ ತಾರಿಕ್

ನ್ಯೂಜಿಲೆಂಡ್ ಇನ್ನಿಂಗ್ಸ್: ಟಿಮ್ ಸೀಫರ್ಟ್ (ವಿಕೆಟ್‌ಕೀಪರ್), ಫಿನ್ ಅಲೆನ್, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್‌ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಜೇಮ್ಸ್ ನೀಶಾಮ್, ಮ್ಯಾಟ್ ಹೆನ್ರಿ, ಇಶ್ ಸೋಧಿ, ಲಾಕಿ ಫರ್ಗ್ಯೂಸನ್

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular