HomeLatest NewsT20 World Cup 2026: ಪಾಕ್ ಆಟಗಾರನ ಕೈಕುಲುಕಿ ಮೈದಾನದಲ್ಲೇ ಅಪ್ಪಿಕೊಂಡ ಟೀಮ್ ಇಂಡಿಯಾ ಆಟಗಾರ;...

T20 World Cup 2026: ಪಾಕ್ ಆಟಗಾರನ ಕೈಕುಲುಕಿ ಮೈದಾನದಲ್ಲೇ ಅಪ್ಪಿಕೊಂಡ ಟೀಮ್ ಇಂಡಿಯಾ ಆಟಗಾರ; ವಿಡಿಯೊ

ನಿನ್ನೆ ( ಫೆಬ್ರವರಿ 15 ) ಕೊಲಂಬೊದ ಆರ್ ಪ್ರೇಮದಾಸ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಗ್ರೂಪ್ ಹಂತದ 27ನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಟೀಮ್ ಇಂಡಿಯಾ 61 ರನ್‌ಗಳ ಬೃಹತ್ ಗೆಲುವು ಸಾಧಿಸಿ ಟೂರ್ನಿಯಲ್ಲಿ ಹ್ಯಾಟ್ರಿಕ್ ಜಯ ದಾಖಲಿಸಿ ಸೂಪರ್ 8 ಹಂತಕ್ಕೆ ಲಗ್ಗೆ ಇಟ್ಟಿದೆ.

ಈ ಮೂಲಕ ಟೀಮ್ ಇಂಡಿಯಾ ಪಾಕಿಸ್ತಾನದ ವಿರುದ್ಧ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಆಡಿದ 9 ಪಂದ್ಯಗಳ ಪೈಕಿ 8 ಪಂದ್ಯಗಳನ್ನು ಗೆದ್ದು ಪಾರುಪತ್ಯ ಮೆರೆದಿದೆ.

ಇನ್ನು ಏಷ್ಯಾ ಕಪ್ ರೀತಿಯೇ ಈ ಪಂದ್ಯದಲ್ಲಿಯೂ ಸಹ ಭಾರತ ಹಾಗೂ ಪಾಕಿಸ್ತಾನ ತಂಡಗಳ ಆಟಗಾರರು ಪರಸ್ಪರ ಕೈಲುಕುದೇ ಹಾಗೆಯೇ ಪೆವಿಲಿಯನ್ ಸೇರಿಕೊಂಡಿದ್ದಾರೆ. ಟಾಸ್ ವೇಳೆ ಹಾಗೂ ಪಂದ್ಯ ಮುಗಿದ ನಂತರ ಹಸ್ತಲಾಘವ ಮಾಡಲಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವಿಚಾರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದ್ದು, ಸಾಕಷ್ಟು ವಿಡಿಯೊಗಳು ಹರಿದಾಡುತ್ತಿವೆ. ಹೀಗಿರುವಾಗ ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಮೈದಾನದಲ್ಲೇ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ವಾಸಿಮ್ ಅಕ್ರಂ ಅವರ ಕೈ ಕುಲುಕಿ ಅಪ್ಪಿಕೊಂಡು ಮಾತನಾಡಿಸಿದ್ದಾರೆ.

ಈ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಭಾರತ ಕ್ರಿಕೆಟ್ ತಂಡದ ಕೆಲ ಅಭಿಮಾನಿಗಳು ರೋಹಿತ್ ಶರ್ಮಾ ಮಾಡಿದ್ದು ತಪ್ಪು ಎಂದರೆ, ಇನ್ನೂ ಕೆಲವರು ಕ್ರೀಡಾಪಟುಗಳಿಗೆ ಕ್ರೀಡಾಸ್ಪೂರ್ತಿ ಮುಖ್ಯ, ರೋಹಿತ್ ಮಾಡಿದ್ದರಲ್ಲಿ ತಪ್ಪಿಲ್ಲ ಎಂದು ಬರೆದುಕೊಂಡಿದ್ದಾರೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular