HomeLatest NewsT20 World Cup 2026: ಪಾಕ್ ವಿರುದ್ಧ ಕಣಕ್ಕಿಳಿಯುವ ಭಾರತ ತಂಡದಲ್ಲಿ ಭಾರೀ ಬದಲಾವಣೆ; ಇಬ್ಬರು...

T20 World Cup 2026: ಪಾಕ್ ವಿರುದ್ಧ ಕಣಕ್ಕಿಳಿಯುವ ಭಾರತ ತಂಡದಲ್ಲಿ ಭಾರೀ ಬದಲಾವಣೆ; ಇಬ್ಬರು ಸ್ಪೋಟಕ ಬ್ಯಾಟ್ಸ್‌ಮನ್ ಔಟ್!

ನಾಳೆ ( ಫೆಬ್ರವರಿ 15 ) ಕ್ರಿಕೆಟ್ ಪ್ರೇಮಿಗಳ ಪಾಲಿಗೆ ದೊಡ್ಡ ದಿನ. ಪ್ರಸ್ತುತ ನಡೆಯುತ್ತಿರುವ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಟೂರ್ನಿಯಲ್ಲಿ ಬದ್ಧ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.

ಭಾರತ ಹಾಗೂ ಪಾಕಿಸ್ತಾನ ಟೂರ್ನಿಯಲ್ಲಿ ಆಡಿರುವ ಎರಡು ಪಂದ್ಯಗಳಲ್ಲಿ ಎರಡರಲ್ಲೂ ಗೆಲುವು ಕಂಡಿದ್ದು ತಲಾ ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನದಲ್ಲಿವೆ. ಈ ಮೂಲಕ ನಾಳಿನ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರುವುದು ಮಾತ್ರವಲ್ಲದೇ ಸೂಪರ್ 8 ಸುತ್ತಿಗೆ ಅರ್ಹತೆಯನ್ನು ಗಿಟ್ಟಿಸಿಕೊಳ್ಳಲಿದೆ.

ಹೀಗೆ ಬದ್ಧ ವೈರಿಗಳ ಕಾಳಗ ಎಂಬ ಕಾರಣಕ್ಕೆ ಮಾತ್ರವಲ್ಲದೇ ಟೂರ್ನಿಯಲ್ಲಿ ಮುಂದಿನ ಹಂತಕ್ಕೆ ತಲುಪುವ ಕಾರಣಕ್ಕೂ ಸಹ ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಭಾರೀ ಕುತೂಹಲವನ್ನು ಹುಟ್ಟುಹಾಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಕಳೆದ ಪಂದ್ಯದಲ್ಲಿ ಹೊಟ್ಟೆ ನೋವಿನ ಕಾರಣದಿಂದಾಗಿ ಅಲಭ್ಯರಾಗಿದ್ದ ಅಭಿಷೇಕ್ ಶರ್ಮಾ ಈ ಪಂದ್ಯಕ್ಕೆ ವಾಪಸ್ಸಾಗಲಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದ್ದು, ಈ ಕಾರಣದಿಂದಾಗಿ ಭಾರತದ ಆಡುವ ಬಳಗದಲ್ಲಿ ಬದಲಾವಣೆಯಾಗಲಿದೆ. ಅಲ್ಲದೇ ಇನ್ನೂ ಕೆಲ ಬದಲಾವಣೆಯಾಗುವ ಸಾಧ್ಯತೆಗಳಿವೆ.

ಹೌದು, ಅಭಿಷೇಕ್ ಶರ್ಮಾ ತಂಡಕ್ಕೆ ಮರಳುವ ಕಾರಣ ಕಳೆದ ಪಂದ್ಯದಲ್ಲಿ ಅವರ ಸ್ಥಾನದಲ್ಲಿ ಕಣಕ್ಕಿಳಿದಿದ್ದ ಸಂಜು ಸ್ಯಾಮ್ಸನ್ ಈ ಪಂದ್ಯದಿಂದ ಹೊರಬೀಳಲಿದ್ದಾರೆ. ಅಲ್ಲದೇ ಮತ್ತೋರ್ವ ಸ್ಪೋಟಕ ಬ್ಯಾಟ್ಸ್‌ಮನ್ ರಿಂಕು ಸಿಂಗ್ ಸ್ಥಾನ ಕಳೆದುಕೊಳ್ಳಲಿದ್ದು, ಅವರ ಜಾಗಕ್ಕೆ ಈ ಹಿಂದಿನ ಪಂದ್ಯಗಳಲ್ಲಿ ಪಾಕಿಸ್ತಾನಕ್ಕೆ ಕಾಟ ಕೊಟ್ಟಿದ್ದ ಕುಲ್‌ದೀಪ್ ಯಾದವ್ ಬರಲಿದ್ದಾರೆ ಎನ್ನಲಾಗುತ್ತಿದೆ. ಕುಲ್‌ದೀಪ್ ಅಲ್ಲದೇ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಹೆಸರು ಸಹ ರಿಂಕು ಸಿಂಗ್ ಜಾಗಕ್ಕೆ ಕೇಳಿಬಂದಿದೆ. ಹೀಗೆ ಪಾಕ್ ವಿರುದ್ಧ ಪಂದ್ಯದಲ್ಲಿ ಸ್ಪೋಟಕ ಆಟಗಾರರಾದ ಸಂಜು ಸ್ಯಾಮ್ಸನ್ ಹಾಗೂ ರಿಂಕು ಸಿಂಗ್ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳಿವೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular