ಪ್ರಸ್ತುತ ನಡೆಯುತ್ತಿರುವ ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಎರಡನೇ ಸೆಮಿಫೈನಲ್ ಪಂದ್ಯ ಇಂದು ( ಮಾರ್ಚ್ 5 ) ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆರಿಸಿಕೊಂಡಿದ್ದು, ಭಾರತ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಬ್ಯಾಟಿಂಗ್ ಪಿಚ್‌ನಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆರಿಸಿಕೊಂಡು ಜಾಣ್ಮೆಯ ನಡೆ ಇಟ್ಟಿದ್ದು, ಇದೀಗ ಮೊದಲು ಬ್ಯಾಟಿಂಗ್ ಮಾಡಿರುವ ಭಾರತ ದೊಡ್ಡ ಮೊತ್ತ ಕಲೆಹಾಕಲೇಬೇಕಿದೆ. ಈ ಮೂಲಕ ಟಾಸ್ ಸೋತ ಭಾರತಕ್ಕೆ ಹಿನ್ನಡೆಯಾಗಿದೆ.
ಭಾರತದ ಆಡುವ ಬಳಗ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಶದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ
ಇಂಗ್ಲೆಂಡ್ ಇನ್ನಿಂಗ್ಸ್: ಫಿಲಿಪ್ ಸಾಲ್ಟ್, ಜೊಸ್ ಬಟ್ಲರ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ಜೇಕಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಜೇಮಿ ಓವರ್ಟನ್, ಲಿಯಾಮ್ ಡಾಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್

