HomeLatest Newsಒನ್ ಅಂಡ್ ಓನ್ಲಿ ಟೀಮ್ ಇಂಡಿಯಾ, ಬೇರೆ ಯಾರಿಂದಲೂ ಆಗಲೇ ಇಲ್ಲ: ಟಿ20 ವಿಶ್ವಕಪ್‌ ಗೆದ್ದು...

ಒನ್ ಅಂಡ್ ಓನ್ಲಿ ಟೀಮ್ ಇಂಡಿಯಾ, ಬೇರೆ ಯಾರಿಂದಲೂ ಆಗಲೇ ಇಲ್ಲ: ಟಿ20 ವಿಶ್ವಕಪ್‌ ಗೆದ್ದು ಬರೋಬ್ಬರಿ 3 ಬೃಹತ್ ದಾಖಲೆ ಬರೆದ ಭಾರತ

ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಬೃಹತ್ ಗೆಲುವು ದಾಖಲಿಸಿ ಮೂರನೇ ಬಾರಿಗೆ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿಯಿತು.

ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆರಿಸಿಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಭಾರತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 255 ರನ್ ಕಲೆಹಾಕಿ ನ್ಯೂಜಿಲೆಂಡ್‌ಗೆ 256 ರನ್‌ಗಳ ಬೃಹತ್ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ನ್ಯೂಜಿಲೆಂಡ್ 19 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲ್‌ಔಟ್ ಆಯಿತು.

ಈ ಮೂಲಕ ಭಾರತ ಮೂರನೇ ಬಾರಿಗೆ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಗೆದ್ದು ಒಟ್ಟು 3 ಬೃಹತ್ ದಾಖಲೆಗಳನ್ನು ಬರೆದಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂರು ಬಾರಿ ಕಪ್ ಗೆದ್ದ ದಾಖಲೆ

2007 ಹಾಗೂ 2024ರಲ್ಲಿ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಗಳನ್ನು ಗೆದ್ದಿದ್ದ ಭಾರತ ನಿನ್ನೆಯ ಪಂದ್ಯದಲ್ಲಿ ಗೆದ್ದು ಚಾಂಪಿಯನ್ ಆಗುವ ಮೂಲಕ ಮೂರು ಬಾರಿ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿ ಗೆದ್ದ ಮೊದಲ ತಂಡ ಎಂಬ ಮಹಾ ದಾಖಲೆಯನ್ನು ಬರೆದಿದೆ. ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಂಡಗಳು ತಲಾ ಎರಡು ಬಾರಿ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಗೆದ್ದಿವೆ.

ಸತತ ಎರಡು ಟ್ರೋಫಿ

ಇನ್ನು ಇಲ್ಲಿಯವರೆಗೂ ಯಾವ ತಂಡವೂ ಸಹ ಸತತವಾಗಿ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಗೆದ್ದಿರಲಿಲ್ಲ. ಕಳೆದ 2024ರ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಗೆದ್ದು ಹಾಲಿ ಚಾಂಪಿಯನ್ ಎನಿಸಿಕೊಂಡಿದ್ದ ಭಾರತ ನಿನ್ನೆ ಗೆದ್ದು ಸತತವಾಗಿ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿ ಗೆದ್ದ ಮೊದಲ ತಂಡ ಎನಿಸಿಕೊಂಡಿದೆ.

ತವರಿನಲ್ಲಿ ಟ್ರೋಫಿ ಗೆದ್ದ ಮೊದಲ ತಂಡ

ಇಲ್ಲಿಯವರೆಗೂ ಯಾವ ಬಾರಿಯೂ ಸಹ ಟೂರ್ನಿ ಆಯೋಜಿಸುವ ದೇಶ ಟ್ರೋಫಿಯನ್ನು ಗೆದ್ದಿರಲಿಲ್ಲ. ಆದರೆ ಈ ಬಾರಿ ಭಾರತ ಚಾಂಪಿಯನ್ ಆಗಿದ್ದು ಇದೇ ಮೊದಲ ಬಾರಿಗೆ ತಂಡವೊಂದು ತವರಿನಲ್ಲಿ ಟಿ ಟ್ವೆಂಟಿ ವಿಶ್ವಕಪ್ ಚಾಂಪಿಯನ್ ಆದ ಇತಿಹಾಸ ಬರೆದಿದೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular