ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಗ್ರೂಪ್ ಹಂತದ 11ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಯುನೈಟೆಡ್ ಅರಬ್ ಎಮಿರೇಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಮೊದಲು ಬ್ಯಾಟಿಂಗ್ ಮಾಡಿದ ಯುಎಇ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 6 ವಿಕೆಟ್ ನಷ್ಟಕ್ಕೆ 173 ರನ್ ಕಲೆಹಾಕಿ ನ್ಯೂಜಿಲೆಂಡ್‌ಗೆ 174 ರನ್‌ಗಳ ಸವಾಲಿನ ಗುರಿ ನೀಡಿದೆ.
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡ ಯುಎಇ ಪರ ಆರಂಭಿಕರಾಗಿ ಕಣಕ್ಕಿಳಿದ ಆರ್ಯನ್ಶ್ ಶರ್ಮಾ 8 ರನ್ ಗಳಿಸಿದರೆ, ಮುಹಮ್ಮದ್ ವಸೀಂ ಕೊನೆಯವರೆಗೂ ಬ್ಯಾಟಿಂಗ್ ಮಾಡಿ 45 ಎಸೆತಗಳಲ್ಲಿ ಅಜೇಯ 66 ರನ್ ಬಾರಿಸಿದರು. ಬೇಗನೆ ತನ್ನ ಮೊದಲ ವಿಕೆಟ್ ಕಳೆದುಕೊಂಡು ಸಂಕಷ್ವದಲ್ಲಿದ್ದ ತಂಡಕ್ಕೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಲಿಶನ್ ಶರಫು ಮೊಹಮ್ಮುದ್ ವಸೀಮ್ ಜತೆ ಸೇರಿ 107 ರನ್‌ಗಳ ಜತೆಯಾಟವನ್ನಾಡಿ 47 ಎಸೆತಗಳಲ್ಲಿ 55 ರನ್ ಗಳಿಸಿದರು. ಇನ್ನುಳಿದಂತೆ ಹರ್ಷಿತ್ ಕೌಶಿಕ್ 2 ರನ್, ಮಯಾಂಕ್ ಕುಮಾರ್ 21, ಶೋಯೆಬ್ ಖಾನ್ 7 ರನ್ ಹಾಗೂ ಮುಹಮ್ಮದ್ ಅರ್ಫನ್ ಡಕ್‌ಔಟ್ ಆದರು.
ನ್ಯೂಜಿಲೆಂಡ್ ಪರ ಮ್ಯಾಟ್ ಹೆನ್ರಿ ಎರಡು ವಿಕೆಟ್, ಜೇಕಬ್ ಡಫಿ, ಲಾಕಿ ಫೆರ್ಗ್ಯುಸನ್, ಮಿಚೆಲ್ ಸ್ಯಾಂಟ್ನರ್ ಹಾಗೂ ಗ್ಲೆನ್ ಫಿಲಿಪ್ಸ್ ತಲಾ ಒಂದೊಂದು ವಿಕೆಟ್ ಪಡೆದರು.

