HomeLatest Newsಮೊನ್ನೆಯಷ್ಟೇ ಆಫ್ರಿಕಾಗೆ ಬೈದು ಇಂದು ವಿಂಡೀಸ್ ವಿರುದ್ಧದ ಪಂದ್ಯದಲ್ಲಿ ಆಫ್ರಿಕನ್ನರೇ ಗೆಲ್ಲಲಿ ಎಂದು ಭಾರತೀಯರು ಬೇಡಿಕೊಳ್ಳುತ್ತಿರುವುದೇಕೆ?

ಮೊನ್ನೆಯಷ್ಟೇ ಆಫ್ರಿಕಾಗೆ ಬೈದು ಇಂದು ವಿಂಡೀಸ್ ವಿರುದ್ಧದ ಪಂದ್ಯದಲ್ಲಿ ಆಫ್ರಿಕನ್ನರೇ ಗೆಲ್ಲಲಿ ಎಂದು ಭಾರತೀಯರು ಬೇಡಿಕೊಳ್ಳುತ್ತಿರುವುದೇಕೆ?

ಪ್ರಸ್ತುತ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ 2026ರ ಗ್ರೂಪ್ ಹಂತದ ಪಂದ್ಯಗಳಲ್ಲಿ ಆಡಿದ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದ ಭಾರತ ತಂಡ ಯಶಸ್ವಿಯಾಗಿ ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿತ್ತು.

ಆದರೆ ಈ ಸುತ್ತಿನ ಮೊದಲ ಪಂದ್ಯದಲ್ಲಿ ಹರಿಣಗಳ ವಿರುದ್ಧ 76 ರನ್ ಅಂತರದ ಹೀನಾಯ ಸೋಲನ್ನು ಕಂಡ ಭಾರತದ ಸೆಮಿ ಫೈನಲ್ ಹಾದಿ ಇದೀಗ ಸಂಕಷ್ಟದಲ್ಲಿದ್ದು, ತಾವು ಉಳಿದ ಎರಡು ಪಂದ್ಯಗಳನ್ನು ಗೆಲ್ಲುವುದು ಮಾತ್ರವಲ್ಲದೆ ಇತರೆ ತಂಡಗಳ ಫಲಿತಾಂಶದ ಮೇಲೂ ಆಧಾರವಾಗಿದೆ.

ಹೌದು, ಇಂದು ( ಫೆಬ್ರವರಿ 26 ) ನಡೆಯಲಿರುವ ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಪಂದ್ಯದ ಫಲಿತಾಂಶ ಸಹ ಭಾರತದ ಸೆಮಿ ಫೈನಲ್ ಪ್ರವೇಶದ ಮೇಲೆ ಪ್ರಭಾವ ಬೀರಿದೆ. ಹೀಗಾಗಿ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲ್ಲಬೇಕು ಎಂದು ಭಾರತದ ಕ್ರಿಕೆಟ್ ಅಭಿಮಾನಿಗಳು ಬೇಡಿಕೊಳ್ಳುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊನ್ನೆಯಷ್ಟೇ ಭಾರತವನ್ನು ಹೀನಾಯವಾಗಿ ಸೋಲಿಸಿದ್ದ ಕಾರಣಕ್ಕೆ ದಕ್ಷಿಣ ಆಫ್ರಿಕಾ ತಂಡವನ್ನು ಹಿಗ್ಗಾಮುಗ್ಗ ಟ್ರೋಲ್ ಮಾಡಿ ಬೈದಿದ್ದ ಭಾರತ ಕ್ರಿಕೆಟ್ ತಂಡದ ಅಭಿಮಾನಿಗಳು ಇದೀಗ ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾ ಗೆಲ್ಲಲಿ ಎನ್ನುವುದಕ್ಕೂ ಒಂದು ಕಾರಣವಿದೆ.

ಸದ್ಯ ಗ್ರೂಪ್ 1ರಲ್ಲಿ ವೆಸ್ಟ್ ಇಂಡೀಸ್ ಅಗ್ರಸ್ಥಾನದಲ್ಲಿದ್ದು ಸೌತ್ ಆಫ್ರಿಕಾ ಎರಡನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆದ್ದರೆ 2 ಅಂಕ ಪಡೆದು ಒಟ್ಟು 4 ಅಂಕ ಹೊಂದಿ ತನ್ನ ಸೆಮಿ ಫೈನಲ್ ಪ್ರವೇಶವನ್ನು ಬಹುತೇಕ ಖಾತರಿಪಡಿಸಿಕೊಳ್ಳಲಿದ್ದು, ವೆಸ್ಟ್ ಇಂಡೀಸ್ ತಂಡ ತನ್ನ ಕೊನೆಯ ಪಂದ್ಯವನ್ನು ಭಾರತದ ವಿರುದ್ಧ ಆಡಲಿದೆ.

ಹೀಗಾಗಿ ಇಂದಿನ ಪಂದ್ಯದಲ್ಲಿ ವಿಂಡೀಸ್ ಸೋತರೆ ಭಾರತದ ವಿರುದ್ಧದ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಲಿದೆ. ಇನ್ನು ಇಂದು ಸಂಜೆ ನಡೆಯಲಿರುವ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಭಾರತ ಜಯ ಸಾಧಿಸಿ ವೆಸ್ಟ್ ಇಂಡೀಸ್ ವಿರುದ್ಧ ಗೆದ್ದರೆ ಟೀಮ್ ಇಂಡಿಯಾ ಸೆಮಿ ಫೈನಲ್ ಪ್ರವೇಶ ಪಡೆದುಕೊಳ್ಳಲಿದೆ. ಹೀಗಾಗಿ ಭಾರತ ತಂಡದ ಅಭಿಮಾನಿಗಳು ಎಂದು ದಕ್ಷಿಣ ಆಫ್ರಿಕಾಗೆ ಜೈ ಎನ್ನುತ್ತಿದ್ದಾರೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular