HomeLatest NewsT20 World Cup 2026: ನ್ಯೂಜಿಲೆಂಡ್ ವಿರುದ್ಧ ಶತಕ ಬಾರಿಸಿ ಬೃಹತ್ ದಾಖಲೆ ಬರೆದ 19...

T20 World Cup 2026: ನ್ಯೂಜಿಲೆಂಡ್ ವಿರುದ್ಧ ಶತಕ ಬಾರಿಸಿ ಬೃಹತ್ ದಾಖಲೆ ಬರೆದ 19 ವರ್ಷದ ಯುವರಾಜ್!

ಇಂದು ( ಫೆಬ್ರವರಿ 17 ) ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಗ್ರೂಪ್ ಹಂತದ 31ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಕೆನಡಾ ತಂಡಗಳು ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಗೆದ್ದ ಕೆನಡಾ ಮೊದಲು ಬ್ಯಾಟಿಂಗ್ ಆರಿಸಿಕೊಂಡು 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 173 ರನ್ ಕಲೆಹಾಕಿ ನ್ಯೂಜಿಲೆಂಡ್‌ಗೆ 174 ರನ್‌ಗಳ ಸವಾಲಿನ ಗುರಿಯನ್ನು ನೀಡಿದೆ.

ಕೆನಡಾದ ಆಟಗಾರರು ಸಾಧಾರಣ ಆಟವನ್ನಾಡಿದರೆ ಆರಂಭದಲ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದ ಆರಂಭಿಕ ಆಟಗಾರ ಯುವರಾಜ್ ಸಾಮ್ರಾ ನಂತರ ಸಿಡಿದೆದ್ದು, ಬೌಂಡರಿ ಹಾಗೂ ಸಿಕ್ಸರ್‌ಗಳ ಸುರಿಮಳೆಗೈದು ಶತಕ ಬಾರಿಸಿ ಐಸಿಸಿ ಟೂರ್ನಿಗಳಲ್ಲಿ ಶತಕ ಬಾರಿಸಿದ ಅತಿ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ. 19 ವರ್ಷದ ಯುವರಾಜ್ ಸಾಮ್ರಾ 2011ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 20 ವರ್ಷದ ಐರ್ಲೆಂಡ್‌ನ ಪೌಲ್ ಸ್ಟರ್ಲಿಂಗ್ ಶತಕ ಬಾರಿಸಿ ಮಾಡಿದ್ದ ದಾಖಲೆಯನ್ನು ಅಳಿಸಿಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

58 ಎಸೆತಗಳಲ್ಲಿ ಶತಕ ಪೂರೈಸಿದ ಯುವರಾಜ್ ಸಾಮ್ರಾ ಒಟ್ಟು 65 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 110 ರನ್ ಬಾರಿಸಿ ಅಬ್ಬರಿಸಿದರು. ಐಸಿಸಿ ಟೂರ್ನಿಗಳಲ್ಲಿ ಶತಕ ಬಾರಿಸಿದ ಕಿರಿಯ ಆಟಗಾರ ಎಂಬ ದಾಖಲೆ ಮಾತ್ರವಲ್ಲದೇ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಶತಕ ಬಾರಿಸಿದ ಮೊದಲ ಆಟಗಾರ ಎಂಬ ದಾಖಲೆಯನ್ನೂ ಸಹ ಯುವರಾಜ್ ಸಾಮ್ರಾ ಬರೆದಿದ್ದಾರೆ. ಇನ್ನು ಈ ಬಾರಿಯ ಟೂರ್ನಿಯಲ್ಲಿ ಶ್ರೀಲಂಕಾದ ಪತುಮ್ ನಿಸ್ಸಂಕ ಬಳಿಕ ಶತಕ ಬಾರಿಸಿದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular