HomeIndiaಟಿ20 ವಿಶ್ವಕಪ್: ಇಂಗ್ಲೆಂಡ್ ಬಗ್ಗು ಬಡಿದ ಭಾರತ ಅಜೇಯವಾಗಿ ಫೈನಲ್ ಗೆ ಲಗ್ಗೆ

ಟಿ20 ವಿಶ್ವಕಪ್: ಇಂಗ್ಲೆಂಡ್ ಬಗ್ಗು ಬಡಿದ ಭಾರತ ಅಜೇಯವಾಗಿ ಫೈನಲ್ ಗೆ ಲಗ್ಗೆ

ಗಯಾನ: ಗಯಾನದ ಗಯಾನ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದ ಭಾರತ ಫೈನಲ್ ಪ್ರವೇಶಿಸಿದೆ.

ಈ ಮೂಲಕ ಟಿ20 ವಿಶ್ವಕಪ್ ನಲ್ಲಿ ಭಾರತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. 2022ರ ಟಿ20 ವಿಶ್ವಕಪ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಸೋಲಿನ ಸೇಡು ತೀರಿಸಿಕೊಂಡಿದೆ. ಈ ಟೂರ್ನಿಯಲ್ಲಿ ಅಜೇಯವಾಗಿ ಉಳಿದು ಫೈನಲ್ ಪ್ರವೇಶಿಸಿದೆ.

ಭಾರತ ನೀಡಿದ 172 ರನ್ ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 16.4 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 103 ರನ್ ಗಳಿಸಿತು. ಇಂಗ್ಲೆಂಡ್ ಪರ ಬ್ರೂಕ್ 25, ಜೋಸ್ ಬಟ್ಲರ್ 25, ಜೋಪ್ರಾ ಆರ್ಚರ್ 21 ರನ್ ಗಳಿಸಿದರು. ಭಾರತದ ಅಕ್ಷರ್ ಪಟೇಲ್ 3, ಕುಲದೀಪ್ ಯಾದವ್ 3 ವಿಕೆಟ್ ಪಡೆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ರೋಹಿತ್ ಶರ್ಮ 57, ಸೂರ್ಯಕುಮಾರ ಯಾದವ್ 47, ಹಾರ್ದಿಕ್ ಪಾಂಡ್ಯ 23 ರನ್ ಗಳಿಸಿದರು. ಇಂಗ್ಲೆಂಡ್ ಪರ ಕ್ರಿಸ್ ಜೋರ್ಡನ್ 3 ವಿಕೆಟ್ ಪಡೆದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular