HomeKarnatakaಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಟಿ.ಎ. ಶರವಣ ಅವರಿಗೆ ಲಘು ಹೃದಯಾಘಾತವಾಗಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಹೃದಯದಲ್ಲಿ ಸ್ಟೆಂಟ್ ಅಳವಡಿಸಲಾಗಿದ್ದು, ಚೇತರಿಸಿಕೊಂಡಿದ್ದಾರೆ. ಲೋಕಸಭೆ ಚುನಾವಣೆ ಪ್ರಚಾರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರಿಂದ ಆಯಾಸಗೊಂಡಿದ್ದರು. ಸುಸ್ತಾದ ಕಾರಣ ವೈದ್ಯರ ತಪಾಸಣೆಗೆ ಒಳಗಾಗಿದ್ದ ವೇಳೆ ಹೃದಯದಲ್ಲಿ ಸಮಸ್ಯೆ ಇರುವುದು ಕಂಡುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೂಡಲೇ ಜಯದೇವ ಆಸ್ಪತ್ರೆಗೆ ತೆರಳಿ ಪೂರ್ಣ ತಪಾಸಣೆಗೆ ಒಳಗಾಗಿದ್ದಾರೆ. ವೈದ್ಯರು ಪರೀಕ್ಷಿಸಿದಾಗ ಬ್ಲಾಕೇಜ್ ಇರುವುದನ್ನು ಮನಗಂಡು ಶಸ್ತ್ರಚಿಕಿತ್ಸೆ ನಡೆಸಿ ಸ್ಟೆಂಟ್ ಅಳವಡಿಸಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ವೈದ್ಯರು ನಿಗಾವಹಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular