ಚನ್ನಮ್ಮನ ಹುಟ್ಟೂರು ಕಾಕತಿಯಲ್ಲಿ ಕಿತ್ತೂರು ಉತ್ಸವಕ್ಕೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ
ಬೆಳಗಾವಿ : ವರ್ಷದಲ್ಲಿ ಒಂದಿಷ್ಟು ಸಮಯವನ್ನು ಮೀಸಲಿಟ್ಟು ಕಿತ್ತೂರು ರಾಣಿ ಚನ್ನಮ್ಮಳ ಹೋರಾಟ, ಬಾಬಾಸಾಹೇಬ್ ಅಂಬೇಡ್ಕರವರು ಬರೆದ ಸಂವಿಧಾನ, ಬಸವಣ್ಣವರ ಸಮಾನತೆ, ಬುದ್ಧನ ತತ್ವ, ಶಾಹು ಮಹಾರಾಜರ ಶಿಕ್ಷಣ ಕ್ರಾಂತಿ ಇವುಗಳನ್ನು ತಿಳಿದುಕೊಂಡರೆ ದೇಶದ ಅಭಿವೃದ್ದಿ ಜೊತೆಗೆ ನಮ್ಮ ವೈಯಕ್ತಿಕ ಬದುಕನ್ನು ಸಹ ಕಟ್ಟಿಕೊಳ್ಳಲು ಸಹಾಯಕವಾಗುತ್ತದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ…