alex Certify Students | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರೀಯ ವಿವಿಯಲ್ಲಿ ಸರಸ್ವತಿ ಪೂಜೆಗೆ ಆಕ್ಷೇಪ: ವಿದ್ಯಾರ್ಥಿಗಳ ವಾಗ್ವಾದ

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗುಂಚಿ ಸಮೀಪ ಇರುವ ಕರ್ನಾಟಕ ಕೇಂದ್ರೀಯ ವಿವಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಗುಂಪು ಸರಸ್ವತಿ ಪೂಜೆಗೆ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ. Read more…

ಮುಖ್ಯ ಶಿಕ್ಷಕಿ ವಿರುದ್ಧ ಷಡ್ಯಂತ್ರ ರೂಪಿಸಿ ಮಕ್ಕಳಿಂದ ಶೌಚಾಲಯ ತೊಳೆಸಿದ ಸಹ ಶಿಕ್ಷಕಿ ಸಸ್ಪೆಂಡ್

ದಾವಣಗೆರೆ: ಮುಖ್ಯ ಶಿಕ್ಷಕಿ ವಿರುದ್ಧ ಷಡ್ಯಂತ್ರ ರೂಪಿಸಿ ಶಾಲಾ ವಿದ್ಯಾರ್ಥಿಗಳಿಂದ ಶೌಚಾಲಯ ತೊಳೆಸಿದ ಸಹ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ದಾವಣಗೆರೆ ತಾಲೂಕಿನ ಮೆಳ್ಳೆಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶಾಲಾ Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಅಮೆರಿಕದಲ್ಲಿ ಓದಲು ಅವಕಾಶ

ಬೆಂಗಳೂರು: ಅಮೆರಿಕದಲ್ಲಿ ವ್ಯಾಸಂಗ ಮಾಡಲು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಹಕಾರ ನೀಡಲಾಗುವುದು. ಉನ್ನತ ಶಿಕ್ಷಣದಲ್ಲಿ ಅಮೆರಿಕ ವಿಶ್ವವಿದ್ಯಾಲಯಗಳೊಂದಿಗೆ ಅಂತರರಾಷ್ಟ್ರೀಯ ಪಾಲುದಾರಿಕೆ ಮತ್ತು ಸಹಯೋಗದ ಶಿಕ್ಷಣಕ್ಕೆ ಭಾರತೀಯ ವಿದ್ಯಾರ್ಥಿಗಳಿಗೆ ಅವಕಾಶ Read more…

ರೋಗಿಗಳ ಎದುರು ಡ್ಯಾನ್ಸ್ ಮಾಡಿದ 38 ವೈದ್ಯ ವಿದ್ಯಾರ್ಥಿಗಳು ಅಮಾನತು

ಗದಗ: ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ವೈದ್ಯನೊಬ್ಬ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿದ ಘಟನೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ ಗದಗದ ಜಿಮ್ಸ್ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿಗಳು Read more…

ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು, 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

ತುಮಕೂರು: ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು, ಮೂವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ Read more…

ವಸತಿ ಶಾಲೆಯಲ್ಲಿ ರ್ಯಾಗಿಂಗ್: 5 ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ

ಗಂಗಾವತಿ: ಗಂಗಾವತಿ ತಾಲೂಕಿನ ಹೇಮಗುಡ್ಡ ಸಮೀಪದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರ್ಯಾಗಿಂಗ್ ಪ್ರಕರಣ ನಡೆದಿದೆ. ರ್ಯಾಗಿಂಗ್ ಮಾಡಿದ ಐವರು ವಿದ್ಯಾರ್ಥಿಗಳ ವಿರುದ್ಧ ಶಾಲಾ ಆಡಳಿತ ಮಂಡಳಿ ಶಿಸ್ತು Read more…

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪೂರ್ವ ಸಿದ್ಧತಾ ಪರೀಕ್ಷೆ ಶುಲ್ಕ ಕಡಿತ

ಶಿವಮೊಗ್ಗ: ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷಾ ಶುಲ್ಕ ಸಂಗ್ರಹದಲ್ಲಿ 10 ರೂಪಾಯಿ ಕಡಿತ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ Read more…

BREAKING NEWS: ಟ್ರ್ಯಾಕ್ಟರ್-ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವು

ಬಾಗಲಕೋಟೆ: ಟ್ರ್ಯಾಕ್ಟರ್, ಶಾಲಾ ಬಸ್ ಡಿಕ್ಕಿಯಾಗಿ ನಾಲ್ವರು ವಿದ್ಯಾರ್ಥಿಗಳು ಸಾವು ಕಂಡ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ತಡರಾತ್ರಿ 12:30ಕ್ಕೆ ಸಂಭವಿಸಿದೆ. ಅಪಘಾತದಲ್ಲಿ Read more…

ಸಾಲ ಪಡೆದವರಿಗೆ ಸ್ವಾವಲಂಬಿ ಯೋಜನೆಯಡಿ 5 ಲಕ್ಷ ರೂ.ವರೆಗೆ ಸಹಾಯಧನ: ಸಾಂದೀಪಿನಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಕುಟುಂಬಗಳ ಅಭಿವೃದ್ಧಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ವಾವಲಂಬಿ, ಸಾಂದೀಪಿನಿ ಶಿಷ್ಯವೇತನ ಯೋಜನೆ ಜಾರಿಗೊಳಿಸಿದ್ದು, ಅರ್ಹರು ಯೋಜನೆಗಳ ಸದ್ಬಳಕೆ ಮಾಡಿಕೊಳ್ಳುವಂತೆ ಕಂದಾಯ ಸಚಿವ ಕೃಷ್ಣ Read more…

ಖಾಸಗಿ SSLC ವಿದ್ಯಾರ್ಥಿಗಳಿಗೆ ಈ ಬಾರಿ ಪ್ರತ್ಯೇಕ ಪ್ರಶ್ನೆ ಪತ್ರಿಕೆ, ಪರೀಕ್ಷಾ ಕೇಂದ್ರ ಇಲ್ಲ

ಬೆಂಗಳೂರು: ಖಾಸಗಿಯಾಗಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಈ ಬಾರಿ ಪ್ರತ್ಯೇಕ ಪ್ರಶ್ನೆ ಪತ್ರಿಕೆ ಮತ್ತು ಪರೀಕ್ಷಾ ಕೇಂದ್ರಗಳು ಇರುವುದಿಲ್ಲ. ಪರೀಕ್ಷೆಯಲ್ಲಿನ ಅಕ್ರಮ, ನಕಲು ಮಾಡುವುದನ್ನು ತಡೆಯಲು ಶಾಲಾ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಈ ಸಲವೂ ಕ್ಯಾಂಪಸ್ ಸೆಲೆಕ್ಷನ್ ಮಾಡದಿರಲು ಇನ್ಫೋಸಿಸ್ ನಿರ್ಧಾರ

ಮುಂಬೈ: ಭಾರತದ ಪ್ರಮುಖ ಐಟಿ ಕಂಪನಿ ಬೆಂಗಳೂರು ಮೂಲದ ಇನ್ಫೋಸಿಸ್ ಉದ್ಯೋಗದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತೆ ನಿರಾಸೆ ಮೂಡಿಸಿದೆ. ಡಿಸೆಂಬರ್ ತ್ರೈಮಾಸಿಕದ ಫಲಿತಾಂಶವನ್ನು ಇನ್ಫೋಸಿಸ್ ಪ್ರಕಟಿಸಿದ್ದು, ಸದ್ಯಕ್ಕೆ ಯಾವುದೇ Read more…

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ 7 ಸಾವಿರ ಶಿಕ್ಷಕರ ಹುದ್ದೆ ಭರ್ತಿಗೆ ಆಗ್ರಹ

ಬೆಂಗಳೂರು: ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ 7,000 ಶಿಕ್ಷಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಆಗ್ರಹಿಸಿದೆ. ಗಾಂಧಿ ಭವನದಲ್ಲಿ Read more…

ವಿದ್ಯಾರ್ಥಿಗಳೇ ಗಮನಿಸಿ: ಇಂದಿನಿಂದ ಜ. 17ರವರೆಗೆ ಸಿಇಟಿ ಆನ್ ಲೈನ್ ಅರ್ಜಿ ಸಲ್ಲಿಕೆ ಲಭ್ಯವಿರಲ್ಲ

ಬೆಂಗಳೂರು: ಇಂದಿನಿಂದ ಐದು ದಿನ ಸಿಇಟಿ ಆನ್ಲೈನ್ ಅರ್ಜಿ ಸಲ್ಲಿಕೆ ಲಭ್ಯವಿರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ಶಾಲಾ ಶಿಕ್ಷಣ ಇಲಾಖೆಯ ವಿದ್ಯಾರ್ಥಿ ಸಾಧನೆಯ ಟ್ರ್ಯಾಕಿಂಗ್ Read more…

ಮಕ್ಕಳಿಗೆ ಪೋಕ್ಸೊ ಕಾಯ್ದೆ ಅರಿವು ಮೂಡಿಸಲು ಶಾಲೆಗಳಲ್ಲಿ ‘ತೆರೆದ ಮನೆ’ ಕಾರ್ಯಕ್ರಮ

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ ಬಗ್ಗೆ ಅರಿವು ಮೂಡಿಸಲು ಶಾಲೆಗಳಲ್ಲಿ ತೆರೆದ ಮನೆ ಕಾರ್ಯಕ್ರಮ ಆಯೋಜಿಸುವಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ. 18 ವರ್ಷದೊಳಗಿನ ಮಕ್ಕಳ Read more…

ವಿದ್ಯಾರ್ಥಿಗಳಿಗೆ ʻಪಾರ್ಟ್ ಟೈಂʼ ಜಾಬ್ : ಕನ್ನಡ ಪುಸ್ತಕಗಳನ್ನು ಓದುಗರಿಗೆ ತಲುಪಿಸಿದ್ರೆ ಸಿಗುತ್ತೆ ಹಣ !

ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ, ಅದೂ ರಜಾದಿನ ಭಾನುವಾರದಂದು ಏನಾದರೂ ಸಣ್ಣ ಕೆಲಸ ಸಿಕ್ಕಿದರೆ ಅದೆಷ್ಟು ಅನುಕೂಲವಾಗುತ್ತೆ ಅಲ್ವಾ? ಆದರೆ ಅಂತಹ ಕೆಲಸ ಹೇಗೆ ಸಿಗಲು ಸಾಧ್ಯ…? ಎಂದು ಅದೆಷ್ಟೋ Read more…

BIG NEWS: ವಿದ್ಯಾರ್ಥಿಗಳು ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದರೆ ತಪ್ಪಿಲ್ಲ; ಇದು ಕೂಡ ಶಿಕ್ಷಣದ ಭಾಗ ಎಂದ ಸ್ಪೀಕರ್ ಯು.ಟಿ.ಖಾದರ್

ಮಂಗಳೂರು: ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣ ಇತ್ತೀಚೆಗೆ ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನ್ ಮಾಡಿಸಿದ್ದಕ್ಕೆ ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳಲಾಗಿತ್ತು. ಅಲ್ಲದೇ Read more…

BREAKING NEWS: ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ; ನೇರಲೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ

ಶಿವಮೊಗ್ಗ: ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬೆಂಗಳೂರಿನ ಪೀಣ್ಯದ ಸರ್ಕಾರಿ ಶಾಲೆ ಬಳಿಕ ಇದೀಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿಯೇ Read more…

ಮಾನ್ಯತೆ ಇಲ್ಲದ ಎಂಫಿಲ್ ಪದವಿ ಬಗ್ಗೆ ವಿದ್ಯಾರ್ಥಿಗಳಿಗೆ ಯುಜಿಸಿ ಎಚ್ಚರಿಕೆ

ನವದೆಹಲಿ: ಮಾನ್ಯತೆ ಪಡೆದ ಪದವಿಯಾಗಿಲ್ಲದ ಕಾರಣ ಎಂಫಿಲ್ ಅನ್ನು ಮುಂದುವರಿಸುವುದರ ವಿರುದ್ಧ ಯುಜಿಸಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡುತ್ತದೆ. ಎಂಫಿಲ್ ಪದವಿ ಇನ್ನು ಮುಂದೆ ಮಾನ್ಯತೆ ಪಡೆಯದ ಕಾರಣ ವಿದ್ಯಾರ್ಥಿಗಳಿಗೆ Read more…

BIG NEWS: ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ ಪ್ರಕರಣ; ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿಲ್ಲ ಯಾಕೆ? ಪೊಲೀಸ್ ಅಧಿಕಾರಿಗಳಿಗೆ ಸಿಎಂ ಪ್ರಶ್ನೆ

ಕೋಲಾರ: ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಿದ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳ ಬಂಧನಕ್ಕೆ ವಿಳಂಬವಾಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ Read more…

ಸಿಇಟಿ ಅರ್ಜಿ ಸಲ್ಲಿಕೆ ದೋಷ ತಡೆಯಲು ವಿದ್ಯಾರ್ಥಿ ಮಿತ್ರ ಮಾಸ್ಟರ್ ಟ್ರೈನರ್ ತರಬೇತಿ ನಾಳೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಗೆ ಆನ್ಲೈನ್ ನಲ್ಲಿ ಅರ್ಜಿ ತುಂಬುವ ವೇಳೆ ಅಭ್ಯರ್ಥಿಗಳು ಮಾಡುವ ದೋಷ ತಡೆಯುವ ಉದ್ದೇಶದಿಂದ ಕರ್ನಾಟಕ ಪರೀಕ್ಷಾ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜ. 7 ರಂದು ಎನ್ಎಂಎಂಎಸ್ ಪರೀಕ್ಷೆ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ರಾಷ್ಟ್ರೀಯ ಮೆರಿಟ್ ವಿದ್ಯಾರ್ಥಿ ವೇತನ(ಎನ್ಎಂಎಂಎಸ್) ಪರೀಕ್ಷೆ ಜನವರಿ 7ರಂದು ನಡೆಯಲಿದೆ. ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ Read more…

ಮೆಡಿಕಲ್ ಕೋರ್ಸ್ ಸೇರಬಯಸುವವರಿಗೆ ಸಿಹಿ ಸುದ್ದಿ: ವೈದ್ಯಕೀಯ ಸೀಟುಗಳ ಸಂಖ್ಯೆ 40,000ದಷ್ಟು ಹೆಚ್ಚಳ

ಬೆಂಗಳೂರು: ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು 40,000 ದಷ್ಟು ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಶನಿವಾರ ಸಮಾರಂಭವೊಂದರಲ್ಲಿ Read more…

BIG NEWS: ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಕೇಸ್; ಮುಖ್ಯ ಶಿಕ್ಷಕಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಮುಖ್ಯಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀ ದೇವಮ್ಮ ಬಂಧಿತರಾಗಿರುವ ಮುಖ್ಯಶಿಕ್ಷಕಿ. ಬ್ಯಾಡರಹಳ್ಳಿ ಠಾಣೆ ಪೊಲೀಸರು Read more…

BREAKING NEWS: ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಪ್ರಕರಣ; ಮುಖ್ಯ ಶಿಕ್ಷಕಿ ಸಸ್ಪೆಂಡ್

ಬೆಂಗಳೂರು: ಬೆಂಗಳೂರಿನ ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಇಬ್ಬರು ಮುಖ್ಯ ಶಿಕ್ಷಕರ ಅಮಾನತು

ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹುಣಸೂರು ಮತ್ತು ಟಿ. ನರಸೀಪುರ ತಾಲೂಕಿನಲ್ಲಿ ಮುಖ್ಯ ಶಿಕ್ಷಕ, ಪ್ರಭಾರ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಹುಣಸೂರು ತಾಲೂಕಿನ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಿಯುಸಿ ಪರೀಕ್ಷೆ ಶುಲ್ಕ ಪಾವತಿಗೆ ಗಡುವು ವಿಸ್ತರಣೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಶುಲ್ಕ ಪಾವತಿಗೆ ಡಿಸೆಂಬರ್ 23ರವರೆಗೆ ಕಾಲಾವಕಾಶ ನೀಡಲಾಗಿದೆ. 2024ರ ಮಾರ್ಚ್, ಏಪ್ರಿಲ್ ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ -1(ವಾರ್ಷಿಕ ಪರೀಕ್ಷೆ)ಗೆ ಖಾಸಗಿ Read more…

BIG NEWS: ವಿದ್ಯಾರ್ಥಿಗಳನ್ನು ವಿವಸ್ತ್ರಗೊಳಿಸಿ ಹಲ್ಲೆ; ಶಿಕ್ಷಕ ಅರೆಸ್ಟ್

ಬೀದರ್: ಬೀದರ್ ನ ಖಾಸಗಿ ಶಾಲೆಯಲ್ಲಿ ನಡೆದಿದ್ದ ಅಮಾನುಷ ಘಟನೆಗೆ ಸಂಬಂಧಿಸಿದಂತೆ ಶಿಕ್ಷಕನನ್ನು ಬಂಧಿಸಲಾಗಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ವಿವಸ್ತ್ರಗೊಳಿಸಿ ಶಿಕ್ಷಕ ಹಲ್ಲೆ Read more…

ಪೋಷಕರೇ ಗಮನಿಸಿ : ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ

ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪೋಷಕರು Read more…

ಶಾಲೆಯಲ್ಲಿ ಮಕ್ಕಳ ಬೆತ್ತಲೆಗೊಳಿಸಿ ಹಿಂಸೆ: ಶಿಕ್ಷಕ ಅರೆಸ್ಟ್

ಹುಮನಾಬಾದ್: ಹುಮನಾಬಾದ್ ಪಟ್ಟಣದ ಖಾಸಗಿ ಶಾಲೆ ಶಿಕ್ಷಕನೊಬ್ಬ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬಟ್ಟೆ ತೆಗೆಸಿ, ಅಸಭ್ಯವಾಗಿ ವರ್ತಿಸಿದ್ದಲ್ಲದೆ ವಿಡಿಯೋ ಚಿತ್ರೀಕರಣ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ಶಾಲಾ ಆಡಳಿತ ಮಂಡಳಿಯ Read more…

BIG NEWS: ವಸತಿ ಶಾಲೆ ಶಿಕ್ಷಕನ ಬಂಧನಕ್ಕೆ ವಿರೋಧ; ವಿದ್ಯಾರ್ಥಿಗಳಿಂದಲೇ ಪ್ರತಿಭಟನೆ

ಕೋಲಾರ: ವಸತಿ ಶಾಲೆ ಮಕ್ಕಳನ್ನು ಶೌಚಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯ ಇಬ್ಬರು ಶಿಕ್ಷಕರನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...