alex Certify tweet | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: AICC ಅಧ್ಯಕ್ಷ ಚುನಾವಣೆ ತೆರೆಮರೆಯಲ್ಲಿ ಭಾರಿ ಕಸರತ್ತು; ಸ್ಪರ್ಧಿಸಲಿದ್ದಾರಾ ಶಶಿ ತರೂರ್?

ನವದೆಹಲಿ: ಅಕ್ಟೋಬರ್ 17ರಂದು ನಡೆಯಲಿರುವ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದ್ದು, ಹಿರಿಯ ನಾಯಕ ಶಶಿ ತರೂರ್ ಕೂಡ ಸ್ಪರ್ಧೆ ಮಾಡಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ. Read more…

BIG NEWS: ನನ್ನ ಮನೆ ಸಂಪೂರ್ಣ ಜಲಾವೃತಗೊಂಡಿದೆ; ನೀರು ನುಗ್ಗಿರುವ ಮನೆಯ ದೃಶ್ಯ ಹಂಚಿಕೊಂಡ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಕಳೆದ ಮೂರು ದಿನಗಳಿಂದ ಗುಡುಗು ಸಹಿತ ಧಾರಾಕಾರ ಮಳೆಗೆ ರಾಜ್ಯಸಭಾ ಸದಸ್ಯ ಜಗ್ಗೇಶ್ ಮನೆ Read more…

BIG NEWS: ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪಗೆ ಮತ್ತೆ ಸಂಕಷ್ಟ; ಬಿ ರಿಪೋರ್ಟ್‌ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ

ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್‌ ಸಲ್ಲಿಸಿದ್ದ ಕಾರಣಕ್ಕೆ ನಿರಾಳರಾಗಿದ್ದ ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ನ್ಯಾಯಾಲಯಕ್ಕೆ ಸಲ್ಲಿಸಿರುವ Read more…

ಮಾಜಿ ಮುಖ್ಯಮಂತ್ರಿಗೆ ಗೃಹಬಂಧನ: ಟ್ವಿಟರ್ ನಲ್ಲಿ ಮಾಹಿತಿ ನೀಡಿದ ಮೆಹಬೂಬಾ ಮುಫ್ತಿ

ನವದೆಹಲಿ: ತನ್ನನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಶೋಪಿಯಾನ್‌ ನಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾದ ಕಾಶ್ಮೀರಿ ಪಂಡಿತ್ Read more…

BIG NEWS: ‘ಆಪರೇಷನ್ ಕಮಲ’ಶಾಸಕರಿಗೆ ಸೀಮಿತವಾಗಿ ಉಳಿದಿಲ್ಲ; ಬೀದಿ ಪುಂಡರ ‘ಆಪರೇಷನ್ ಕಮಲ’ ಕೂಡಾ BJP ನಡೆಸಿದೆ; ಕಿಡಿ ಕಾರಿದ ಸಿದ್ದರಾಮಯ್ಯ

ಬೆಂಗಳೂರು: ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು? ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ Read more…

ಸಾವರ್ಕರ್‌ ಫೋಟೋ ಹಾಕಬೇಡಿ ಎನ್ನಲು ಇವರ್ಯಾರ್ರಿ…? ಅರಗ ಜ್ಞಾನೇಂದ್ರ ಆಕ್ರೋಶದ ಪ್ರಶ್ನೆ

ಸಾವರ್ಕರ್‌ ಭಾವಚಿತ್ರವಿರುವ ಫ್ಲೆಕ್ಸ್‌ ತೆರವುಗೊಳಿಸಿದ್ದರ ವಿಚಾರವಾಗಿ ಶಿವಮೊಗ್ಗದಲ್ಲಿ ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೀಗಾಗಿ ಅಲ್ಲಿ 144 ನೇ ಸೆಕ್ಷನ್‌ ಜಾರಿಗೊಳಿಸಲಾಗಿದೆ. ಅಲ್ಲದೇ ನಗರದಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದ್ದು, Read more…

ಬಿಜೆಪಿಯಿಂದ‌ ಶಿವಮೊಗ್ಗದಲ್ಲಿ ಕೋಮು ರಾಜಕೀಯದ ಪ್ರಯೋಗ ಶಾಲೆ; ಟ್ವೀಟ್‌ ಮೂಲಕ ಕಾಂಗ್ರೆಸ್‌ ಟಾಂಗ್

ಕಳೆದ ಕೆಲವು ತಿಂಗಳಿನಿಂದ ಶಿವಮೊಗ್ಗದಲ್ಲಿ ಕೋಮು ಗಲಭೆ ಪ್ರಕರಣಗಳು ಮತ್ತೆ ಮತ್ತೆ ನಡೆಯುತ್ತಿವೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ತವರು ಜಿಲ್ಲೆಯಲ್ಲಿ ನಡೆಯುತ್ತಿರುವ ಈ ಪ್ರಕರಣಗಳ ಕುರಿತಂತೆ Read more…

BIG NEWS: ಹಿಂದೂ ಮಹಾಸಭಾ ಗಣಪತಿ ಸಮಿತಿ ಪ್ರಮುಖರೊಂದಿಗೆ ಎಡಿಜಿಪಿ ಅಲೋಕ್ ಕುಮಾರ್ ಅವರಿಂದ ಮಹತ್ವದ ಚರ್ಚೆ

ಶಿವಮೊಗ್ಗ: ನಗರದಲ್ಲಿ ಈಗ ವಾತಾವರಣ ಬೂದಿ ಮುಚ್ಚಿದ ಕೆಂಡದಂತಿದ್ದು, ಗಣಪತಿ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಶಿವಮೊಗ್ಗದ ಪ್ರಸಿದ್ಧ ಹಿಂದೂ ಮಹಾಸಭಾ ಗಣಪತಿ ಸಮಿತಿ ಪ್ರಮುಖರೊಂದಿಗೆ ಎಡಿಜಿಪಿ ಅಲೋಕ್ ಕುಮಾರ್ Read more…

BIG NEWS: ಶಿವಮೊಗ್ಗದಲ್ಲಿ ಭದ್ರತಾ ವ್ಯವಸ್ಥೆ ಪರಿಶೀಲನೆಗೆ ಹಿರಿಯ ಅಧಿಕಾರಿಗಳ ತಂಡ ನಿಯೋಜನೆ

ಶಿವಮೊಗ್ಗ: ವೀರ ಸಾವರ್ಕರ್ ಫ್ಲೆಕ್ಸ್ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆ ಹಿನ್ನಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಭಾರಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು Read more…

BIG NEWS: ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿರುವ ಪ್ರೇಮ್‌ ಸಿಂಗ್‌ ಭೇಟಿ ಮಾಡಿ ಸಾಂತ್ವನ ಹೇಳಿದ ಬಿ.ವೈ. ವಿಜಯೇಂದ್ರ

ಶಿವಮೊಗ್ಗ: ದೇಶದ ಇತಿಹಾಸ ಗೊತ್ತಿಲ್ಲದ ಕೆಲವು ಫುಡಾರಿಗಳು ವೀರ ಸಾವರ್ಕರ್ ಅವರಿಗೆ ಅಪಚಾರ ಮಾಡಿರುವುದು ಖಂಡನೀಯ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಇಂದು ಸುದ್ದಿಗಾರರೊಂದಿಗೆ Read more…

BIG NEWS: ‌ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್‌; ಮದ್ಯ ಮಾರಾಟಕ್ಕೂ ಬ್ರೇಕ್

ಶಿವಮೊಗ್ಗ ನಗರದಲ್ಲಿ ನಿನ್ನೆ ನಡೆದ ಗಲಾಟೆ ನಂತರ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಶಾಲಾ – ಕಾಲೇಜುಗಳಿಗೂ ರಜೆ ನೀಡಲಾಗಿದ್ದು, ಮದ್ಯ ಮಾರಾಟ ನಿಷೇಧಿಸಲಾಗಿದೆ. ನಿಷೇಧಾಜ್ಞೆ Read more…

ಸಿಎಂ ಭೇಟಿ ಮಾಡಿ ಶಿವಮೊಗ್ಗದಲ್ಲಿ ನಡೆದ ಗಲಭೆ ಕುರಿತ ವಿವರಣೆ ನೀಡಿದ ಶಾಸಕ ಈಶ್ವರಪ್ಪ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಶಾಸಕ ಕೆ.ಎಸ್. ಈಶ್ವರಪ್ಪ ಭೇಟಿಯಾಗಿ ಶಿವಮೊಗ್ಗದಲ್ಲಿ ನಡೆದ ಅಹಿತಕರ ಘಟನೆಯ ಬಗ್ಗೆ ವಿವರ ನೀಡಿದ್ದಾರೆ. ಭೇಟಿ ನಂತರ ಸುದ್ದಿಗಾರರೊಂದಿಗೆ Read more…

BIG NEWS: ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಹೆಸರು ಕೈಬಿಟ್ಟ ವಿಚಾರ; ಸಿಎಂ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು Read more…

BIG NEWS: “ತಮ್ಮ ಮನೆಯ ಹೆಂಚು ತೂತು” ಎಂಬುದೇ ಗೊತ್ತಿಲ್ಲ; ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಲಂಚ- ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆಯವರಿಗೆ “ತಮ್ಮ ಮನೆಯ ಹೆಂಚು ತೂತು” ಎಂಬುದೇ ಗೊತ್ತಿಲ್ಲ. ಇವರು‌ ಆರೋಪ ಮಾಡಿದ ಬೆನ್ನಲ್ಲೆ Read more…

BIG NEWS: ಲೋಕಾಯುಕ್ತ ವಿಸರ್ಜಿಸಿ ತನಗೆ ತಾನೇ ಕ್ಲೀನ್ ಚಿಟ್ ಕೊಟ್ಟುಕೊಂಡಿದ್ದ ಮಾಜಿ ಸಿಎಂ; ACB ರದ್ದುಗೊಳಿಸಿ ಸಿದ್ದರಾಮಯ್ಯಗೆ ಕಪಾಳಮೋಕ್ಷ ಮಾಡಿದ ಹೈಕೋರ್ಟ್; ಛಾಟಿ ಬೀಸಿದ BJP

ಬೆಂಗಳೂರು: ಎಸಿಬಿ ರದ್ದು ಮಾಡಿರುವ ಹೈಕೋರ್ಟ್ ತೀರ್ಪಿನ ವಿಚಾರವಾಗಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಇದು ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ಮಾಡಿರುವ ಕಪಾಳಮೋಕ್ಷ ಎಂದು ಹೇಳಿದೆ. ಸಿದ್ದರಾಮಯ್ಯನವರೇ, ಸ್ವತಂತ್ರ Read more…

BIG NEWS: ತ್ರಿವರ್ಣಧ್ವಜದ ಬಗ್ಗೆ ಸಂದೇಶ ಸಾರಿದ ಸಿಎಂ ಬೊಮ್ಮಾಯಿ ಅವರಿಗೆ 13 ಪ್ರಶ್ನೆ ಮುಂದಿಟ್ಟ ಸಿದ್ದರಾಮಯ್ಯ

ಬೆಂಗಳೂರು: ತ್ರಿವರ್ಣಧ್ವಜದ ಬಗ್ಗೆ ಸಂದೇಶ ಸಾರಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ 13 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ಏಕೆ ತ್ರಿವರ್ಣಧ್ವಜ? ಎಂಬ Read more…

BIG NEWS: ರಾಜಕೀಯ ಹೇಳಿಕೆ ನೀಡಬೇಕೆಂದರೆ ಬಿಲದಲ್ಲಿ ಅಡಗಿದ ಸಚಿವರೂ ಎದ್ದು ಓಡೋಡಿ ಬರುತ್ತಾರೆ; ನೆರೆ ವಿಚಾರ ಬಂದರೆ ಬಿಲ ಸೇರ್ತಾರೆ; ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ಬಗ್ಗೆ ಮತ್ತೆ ಕಿಡಿ ಕಾರಿರುವ ಕಾಂಗ್ರೆಸ್, ರಾಜ್ಯದ ರೈತರನ್ನು ಮುಳುಗಿಸಿದ್ದು ಮಳೆಯಲ್ಲ, ರಾಜ್ಯ ಸರ್ಕಾರವೇ ಮುಳುಗಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. Read more…

ಪ್ರಧಾನಿ ಮೋದಿಯವರಿಗೆ ರಾಖಿ ಕಟ್ಟಿ ರಕ್ಷಾಬಂಧನ ಆಚರಿಸಿದ ಮಕ್ಕಳು

ನವದೆಹಲಿ: ಸಹೋದರ, ಸಹೋದರಿಯರ ನಡುವಿನ ಬಾಂಧವ್ಯವನ್ನು ಸಾರುವ ಪವಿತ್ರ ಹಬ್ಬ ರಕ್ಷಾಬಂಧನ ಹಿನ್ನೆಲೆಯಲ್ಲಿ ಪುಟ್ಟ ಮಕ್ಕಳು, ಸಹೋದರಿಯರು ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಖಿ ಕಟ್ಟುವ ಮೂಲಕ ಗಮನಸೆಳೆದರು. ನವದೆಹಲಿಯಲ್ಲಿ Read more…

BIG NEWS: 1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ; ಸಂತೋಷ ಕೂಟಕ್ಕೆ ಸಂತೋಷಪಡಿಸುವ ಬೊಮ್ಮಾಯಿ ಪ್ರಯತ್ನ ವಿಫಲ; ಸಿಎಂ ಬದಲಾವಣೆ ಬಗ್ಗೆ ಮತ್ತೆ ಪ್ರಸ್ತಾಪಿಸಿದ ಕಾಂಗ್ರೆಸ್

ಬೆಂಗಳೂರು: ಸಿಎಂ ಬದಲಾವಣೆ ಕುರಿತು ರಾಜ್ಯ ಕಾಂಗ್ರೆಸ್ ಘಟಕ ನಿನ್ನೆ ಮಾಡಿದ್ದ ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿರುವಾಗಲೇ ಕಾಂಗ್ರೆಸ್ ಮತ್ತೆ ಸಿಎಂ ಬದಲಾವಣೆ ಟ್ವೀಟ್ ಮಾಡಿದೆ. ಬಿಜೆಪಿ ಹೈಕಮಾಂಡ್ Read more…

BIG NEWS: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಮತ್ತೆ ಕೊರೊನಾ ಸೋಂಕು

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಮತ್ತೊಮ್ಮೆ ಕೊರೊನಾ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತಃ ಪ್ರಿಯಾಂಕಾ ಮಾಹಿತಿ ನೀಡಿದ್ದಾರೆ. ನನಗೆ ಇಂದು ಮತ್ತೊಮ್ಮೆ ಕೋವಿಡ್ Read more…

BIG NEWS: ಸಿಎಂ ಬದಲಾವಣೆ ಕಾಂಗ್ರೆಸ್ ಕಾಣುತ್ತಿರುವ ಕನಸು; ಕಾಂಗ್ರೆಸ್ ನ ಡಬಲ್ ಡೋರ್ ಬಸ್ಸಿನಿಂದ ಯಾರು, ಯಾರನ್ನು ಕೆಳಗಿಳಿಸುತ್ತಾರೆ ಶೀಘ್ರವೇ ಗೊತ್ತಾಗಲಿದೆ; ತಿರುಗೇಟು ನೀಡಿದ ಸಚಿವ ಸುಧಾಕರ್

ಬೆಂಗಳೂರು: ಸಿಎಂ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಸರಣಿ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಸುಧಾಕರ್, ಗಾಜಿನ ಮನೆಯಲ್ಲಿ ನಿಂತು ಅನ್ಯರತ್ತ ಕಲ್ಲು ತೂರುತ್ತಿರುವ ಕಾಂಗ್ರೆಸಿಗರ ಮನಃಸ್ಥಿತಿಯ ಬಗ್ಗೆ Read more…

BIG NEWS: ತ್ರಿವರ್ಣಧ್ವಜ ವಿವರಿಸಲು ಹೋಗಿ ’ಕೇಸರಿ’ ಬದಲು ’ಕೆಂಪು’ ಎಂದ ಸಿದ್ದರಾಮಯ್ಯ; ರಾಷ್ಟ್ರಧ್ವಜದಲ್ಲಿಯೂ ಕೇಸರಿ ಕಂಡರೆ ಉರಿದು ಬೀಳುವಷ್ಟು ವಿರೋಧವೇಕೆ…? ಎಂದು ಚಾಟಿ ಬೀಸಿದ BJP

ಮೈಸೂರು: ರಾಷ್ಟ್ರಧ್ವಜದ ಬಗ್ಗೆ ವಿವರಿಸಲು ಹೋಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಯಡವಟ್ಟು ಮಾಡಿಕೊಂಡಿದ್ದು, ಕೇಸರಿ, ಬಿಳಿ, ಹಸಿರು ಮಧ್ಯದಲ್ಲಿ ಅಶೋಕ ಚಕ್ರ ಎಂದು ಹೇಳುವ ಬದಲು ಕೆಂಪು, ಬಿಳಿ, Read more…

BIG NEWS: ಸ್ವಾತಂತ್ರ್ಯ ಹೋರಾಟಕ್ಕೆ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು ? ನಿಮ್ಮಂತ ರಾಜಕೀಯ ಭಸ್ಮಾಸುರರು ಇರುವವರೆಗೆ ಕಾಂಗ್ರೆಸ್ ಹತ್ತಿರಕ್ಕೆ ಬಂದವರು ಸುಟ್ಟು ಹೋಗ್ತಾರೆ; ಸಿದ್ದರಾಮಯ್ಯ ವಿರುದ್ಧ HDK ವಾಗ್ದಾಳಿ

ಬೆಂಗಳೂರು: ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ ಜೆಡಿಎಸ್ ಬಗ್ಗೆ ವಿಷ ಕಾರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದ್ದಾರೆ. ನಮ್ಮ Read more…

ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ; ಬಿಜೆಪಿ ರಾಜ್ಯ ನಾಯಕರಿಗೆ ಮತ್ತೆ ತಿವಿದ ʼಟಗರುʼ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣದಲ್ಲಿ ಹಿಂದಿ ಬ್ಯಾನರ್‌ ಹಾಕಿದ್ದಕ್ಕೆ ಪ್ರತಿಪಕ್ಷಗಳ ನಾಯಕರ ಜೊತೆಗೆ ಸಾರ್ವಜನಿಕರಿಂದಲೂ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಎಚ್ಚೆತ್ತ ಇಲಾಖೆ ಅದನ್ನು ತೆಗೆದು ಹಾಕಿತ್ತು. Read more…

BIG BREAKING: ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕೋವಿಡ್ ಪಾಸಿಟಿವ್; ದೆಹಲಿ ಪ್ರವಾಸ ರದ್ದು

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಸಿಎಂ ಬೊಮ್ಮಾಯಿ ಟ್ವೀಟ್ Read more…

BIG NEWS: ಕೇಂದ್ರ ನಾಯಕರ ಓಲೈಕೆಗಾಗಿ ಹಿಂದಿ ಮೆರೆಸಿ ಕನ್ನಡ-ಕನ್ನಡಿಗರಿಗೆ ಅವಮಾನ; ಕನ್ನಡ ಸಂಸ್ಕೃತಿ ಇಲಾಖೆ ಜಾಲತಾಣದಲ್ಲೂ ಹಿಂದಿ ಕಿರೀಟ; ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ‌‌ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು Read more…

BIG NEWS: ವ್ಯಾಪಾರಂ ದ್ರೋಹ ಚಿಂತನಂ; ಬಿಜೆಪಿಯ ಧನದಾಹಕ್ಕೆ ರಾಷ್ಟ್ರಧ್ವಜ ವಿರೂಪ; ಹಣಕ್ಕಾಗಿ ಕಳಪೆ ಧ್ವಜ ಮಾರಾಟ ಮಾಡಿ ದೇಶದ್ರೋಹ; ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಆರ್ ಎಸೆಸ್ ಹಾಗೂ ಬಿಜೆಪಿ ತಮ್ಮೊಳಗಿನ ತಿರಂಗಾ ದ್ವೇಷವನ್ನು ತೀರಿಸಿಕೊಳ್ಳಲೆಂದೇ ಧ್ವಜ ಸಂಹಿತೆಯನ್ನು ಬದಲಿಸಿ ರಾಷ್ಟ್ರಧ್ವಜದ ಘನತೆಯನ್ನು ಕುಗ್ಗಿಸುತ್ತಿವೆ ಎಂದು ರಾಜ್ಯ ಕಾಂಗ್ರೆಸ್ ಘಟಕ ವಾಗ್ದಾಳಿ ನಡೆಸಿದೆ. Read more…

ನಾಯಿ ಸಾವಿಗೆ ಕಣ್ಣೀರಿಟ್ಟಿದ್ದು ಯಾರು…? ವಿಧಾನಸೌಧದಲ್ಲಿ ವಿದಾಯದ ವೇಳೆ ಅತ್ತಿದ್ದು ಯಾರು..? ಬಿಜೆಪಿಗೆ ಹೆಚ್.ಡಿ.ಕೆ. ಟಾಂಗ್

ಬೆಂಗಳೂರು: ನಾಗಮಂಗಲದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಹೆಚ್‍.ಡಿ. ಕುಮಾರಸ್ವಾಮಿ ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟಿದ್ದಕ್ಕೆ ಬಿಜೆಪಿ ವ್ಯಂಗ್ಯವಾಡಿದ್ದು, ಇದಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ತಮ್ಮ ಕಣ್ಣೀರಿನ ಬಗ್ಗೆ ಕೆಣಕಿದ ಬಿಜೆಪಿ Read more…

BIG NEWS: ಆಡಳಿತ ವೈಫಲ್ಯಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾ….? ಸಿಎಂ ವಿರುದ್ಧ HDK ವಾಕ್ಪ್ರಹಾರ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣ ಬೆನ್ನಲ್ಲೇ ಸಿಎಂ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿಬಿದ್ದಿದ್ದು, ಸರ್ಕಾರ ಹಾಗೂ ಸಿಎಂ ನಡೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. Read more…

BIG NEWS: ಸರಣಿ ಹತ್ಯೆಗಳ ಹಿಂದೆ ಸಂಘ ಪರಿವಾರದ ಕೈವಾಡ…..? RSS ಆಂತರಿಕ ಬಿಕ್ಕಟ್ಟೆ ಕೊಲೆಗೆ ಕಾರಣ; ತನಿಖೆಯಿಂದ ಸತ್ಯ ಬಯಲಾಗಲಿ ಎಂದ ಸಿದ್ದರಾಮಯ್ಯ

ಬೆಂಗಳೂರು: ದಕ್ಷಿಣ ಕನ್ನಡದ ಇತ್ತೀಚಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳಿಗೂ, ಸಂಘ ಪರಿವಾರದೊಳಗಿನ ಆಂತರಿಕ ಬಿಕ್ಕಟ್ಟುಗಳಿಗೂ ಸಂಬಂಧ ಇರುವಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...