BREAKING NEWS: ತಗಡೂರು ಗ್ರಾಮದಲ್ಲಿ ಮೂವರಲ್ಲಿ ಕಾಲರಾ ಪತ್ತೆ; ಪಿಡಿಒ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಸ್ಪೆಂಡ್

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ಇಬ್ಬರಲ್ಲಿ ಕಾಲರಾ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪಿಡಿಒ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವಲ್ಲಿ ವಿಫಲ ಹಿನ್ನೆಲೆಯಲ್ಲಿ ಪಿಡಿಒ ದಿವಾಕರ್, ಕಾರ್ಯಪಾಲಕ ಇಂಜಿನಿಯರ್ ಶಿವಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ಕುಡಿಯುವ ನೀರು ಮತ್ತು ನೈರ್ಮಲ್ಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಮೈಸೂರು ಜಿಲ್ಲಾ ಕಾರ್ಯಪಾಲಕ ಇಂಜಿನಿಯರ್ ಗಾಯತ್ರಿ, ಇಬ್ಬರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

ಕಲುಷಿತ ನೀರು ಸೇವಿಸಿ ಗ್ರಾಮದಲ್ಲಿ 114 ಜನರು ತೀವ್ರ ಅಸ್ವಸ್ಥಗೊಂಡಿದ್ದರು. ಅವರಲ್ಲಿ ಮೂವರಲ್ಲಿ ಕಾಲರಾ ಪತ್ತೆಯಾಗಿತ್ತು.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read