HomeEntertainmentಅಕ್ಟೋಬರ್ 27ಕ್ಕೆ ಬಿಡುಗಡೆಯಾಗಲಿದೆ 'ಟಗರು ಪಲ್ಯ'

ಅಕ್ಟೋಬರ್ 27ಕ್ಕೆ ಬಿಡುಗಡೆಯಾಗಲಿದೆ ‘ಟಗರು ಪಲ್ಯ’

ಉಮೇಶ್ ಕೆ ಕೃಪ ನಿರ್ದೇಶನದ ‘ಟಗರು ಪಲ್ಯ’ಸಿನಿಮಾ ಇದೇ ತಿಂಗಳು ಅಕ್ಟೋಬರ್ 27ರಂದು ರಾಜ್ಯದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರ ತಂಡ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದೆ.

ನಾಗಭೂಷಣ ಮತ್ತು ನೆನಪಿರಲಿ ಪ್ರೇಮ್ ಪುತ್ರಿ ಅಮೃತ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಹಿರಿಯ ನಟಿ ತಾರಾ ಸೇರಿದಂತೆ ರಂಗಾಯಣ ರಘು, ಶರತ್ ಲೋಹಿತಾಶ್ವ, ಬಸಪ್ಪ ಬಿರಾದರ್, ವಾಸುಕಿ ವೈಭವ್, ರವಿ ಹುಣಸೂರು ತೆರೆ ಹಂಚಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಚಿತ್ರವನ್ನು ಡಾಲಿ ಧನಂಜಯ್ ತಮ್ಮ ಡಾಲಿ ಪಿಚ್ಚರ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದು, ಕಲ್ಯಾಣ್ ಮಂಜುನಾಥ್, ಭರತ್ ನಾಯಕ್ ಸಂಗೀತ ಸಂಯೋಜನೆ ನೀಡಿದ್ದಾರೆ. ಎಸ್ ಕೆ ರಾವ್ ಛಾಯಾಗ್ರಾಹಣವಿದ್ದು, ಮಧು ತುಂಬಕೆರೆ ಸಂಕಲನವಿದೆ.

For Latest News Updates, Join Our Whatsapp Community🚩
RELATED ARTICLES

Most Popular