HomeKarnatakaBIG NEWS: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ , ಗ್ರೇಡ್ 2 ತಹಶೀಲ್ದಾರ್ ಅನುಮಾನಾಸ್ಪದ ಸಾವು

BIG NEWS: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ , ಗ್ರೇಡ್ 2 ತಹಶೀಲ್ದಾರ್ ಅನುಮಾನಾಸ್ಪದ ಸಾವು

ಬೆಳಗಾವಿ: ಗ್ರೇಡ್ 2 ತಹಶೀಲ್ದಾರ್ ಓರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಅಶೋಕ್ ಮಣ್ಣಿಕೇರಿ ಮೃತ ತಹಶೀಲ್ದಾರ್. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಗ್ರಾಮೀಣ ಶಾಸಕರಾಗಿದ್ದಾಗ ಅಶೋಕ್ ಮಣ್ಣಿಕೇರಿ ಶಾಸಕರ ಆಪ್ತರಾಗಿದ್ದರು ಎನ್ನಲಾಗಿದೆ.

ಬೆಳಗಾವಿಯಲ್ಲಿ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಅಶೋಕ್ ಮಣ್ಣಿಕೇರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಪತ್ನಿ ಹಾಗೂ ಆಕೆಯ ಸಹೋದರ ಹೇಳುತ್ತಿದ್ದಾರೆ. ಆದರೆ ಹೃದಯಾಘಾತದಿಂದ ಸಾವನ್ನಪ್ಪಿಲ್ಲ, ಅಶೋಕ್ ಮಣ್ಣಿಕೇರಿ ಸಾವಿನ ಬಗ್ಗೆ ಅನುಮಾನವಿದೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಅಶೋಕ್ ಸಹೋದರಿ ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular