HomeKarnatakaBREAKING NEWS: ತಹಶೀಲ್ದಾರ್ ಕಚೇರಿಯಲ್ಲಿಯೇ SDA ಆತ್ಮಹತ್ಯೆಗೆ ಶರಣು

BREAKING NEWS: ತಹಶೀಲ್ದಾರ್ ಕಚೇರಿಯಲ್ಲಿಯೇ SDA ಆತ್ಮಹತ್ಯೆಗೆ ಶರಣು

ಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲಿಯೇ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಶರಣಾಗಿರುವ ಎಸ್ ಡಿಎ. ತಹಶೀಲ್ದಾರ್ ಬಸವರಾಜ್ ನಾಗರಾಳ ಅವರ ಕೊಠಡಿಯಲ್ಲಿಯೇ ಫ್ಯಾನ್ ಗೆ ನೇಣುಬಿಗಿದುಕೊಂಡು ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿಯ ಮೂಡಲಗಿ ಪಟ್ಟಣದ ರುದ್ರಣ್ಣ ಯಡವಣ್ಣವರ ಕಳೆದ 12 ವರ್ಷಗಳಿಂದ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿಇ ಎಸ್ ಡಿಎ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆಯಷ್ಟೇ ಸವದತ್ತಿ ತಹಶೀಲ್ದಾರ್ ಕಚೇರಿಗೆ ವರ್ಗಾವಣೆಯಾಗಿತ್ತು. ಆದರೆ ಈಗ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿಯೇ ರುದ್ರಣ್ಣ ನೇಣಿಗೆ ಶರಣಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇಲಧಿಕಾರಿಗಳ ಕಿರುಕುಳ ಆರೋಪ ಕೇಳಿಬಂದಿದೆ. ಖದೇಬಜಾರ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular