ಹಾಸನ: ತಹಶಿಲ್ದಾರ್ ಜೀಪ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.
ಸಕಲೇಶಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಈಶ್ವರಹಳ್ಳಿ ಕೂಡಿಗೆ ಸರ್ಕಲ್ ಬಳಿ ಈ ಅಪಘಾತ ಸಂಭವಿಸಿದೆ. ಸಕಲೇಶಪುರ ತಹಶೀಲ್ದಾರ್ ಸುಪ್ರಿತಾ ಅವರ ಜೀಪ್ ಬೈಕ್‌ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾಸನ ಪೆನ್‌ಷನ್ ಮೊಹಲ್ಲಾದ ಜಮ್ಶಿದ್ (58) ಮೃತ ದುರ್ದೈವಿ. ಮತ್ತೊಬ್ಬ ಸವಾರ ನದೀಮ್ ತೀವ್ರವಾಗಿ ಗಾಯಗೊಂಡಿದ್ದಾರೆ. ಕೆಲಸ ನಿಮಿತ್ತ ಬೈಕಿನಲ್ಲಿ ತೆರಳುತ್ತಿದ್ದ ಇವರಿಗೆ ತಹಶೀಲ್ದಾರ್ ಇದ್ದ ಜೀಪ್ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

