ರಾಯಚೂರು: ತಹಶಿಲ್ದಾರ್ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಕೂಕಿನ ಗಬ್ಬೂರಿನಲ್ಲಿ ನಡೆದಿದೆ.
ಗಬ್ಬೂರು ನಾಡ ತಹಶಿಲ್ದಾರ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಮಹತ್ವದ ದಾಖಲೆಗಳು ಸುಟ್ಟು ಕರಕಲಾಗಿವೆ.
ತಡರಾತ್ರಿ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕಂಪ್ಯೂಟರ್, ಪೀಠೋಪಕರಣಗಳು, ಸಾರ್ವಜನಿಕರ ಮಹತ್ವದ ದಾಖಲೆಗಳು ಬೆಂಕಿಗಾಹುತಿಯಾಗಿವೆ. ಇನ್ವರ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ಪರಿಣಾಮ ಈ ಘಟನೆ ನಡೆದಿದೆ.
ತಹಶಿಲ್ದಾರ್ ಕಚೇರಿಯಲ್ಲಿ ಎರಡನೇ ಬಾರಿ ಬೆಂಕಿ ಅವಘಡ ಸಂಭವಿಸಿದೆ. ಗಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.