HomeLatest NewsBIG NEWS: ತಹಶಿಲ್ದಾರ್ ಕಚೇರಿಯಲ್ಲಿ ಬೆಂಕಿ ಅವಘಡ: ಮಹತ್ವದ ದಾಖಲೆಗಳು ಸುಟ್ಟು ಭಸ್ಮ

BIG NEWS: ತಹಶಿಲ್ದಾರ್ ಕಚೇರಿಯಲ್ಲಿ ಬೆಂಕಿ ಅವಘಡ: ಮಹತ್ವದ ದಾಖಲೆಗಳು ಸುಟ್ಟು ಭಸ್ಮ

ರಾಯಚೂರು: ತಹಶಿಲ್ದಾರ್ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಕೂಕಿನ ಗಬ್ಬೂರಿನಲ್ಲಿ ನಡೆದಿದೆ.

ಗಬ್ಬೂರು ನಾಡ ತಹಶಿಲ್ದಾರ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಮಹತ್ವದ ದಾಖಲೆಗಳು ಸುಟ್ಟು ಕರಕಲಾಗಿವೆ.

ತಡರಾತ್ರಿ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕಂಪ್ಯೂಟರ್, ಪೀಠೋಪಕರಣಗಳು, ಸಾರ್ವಜನಿಕರ ಮಹತ್ವದ ದಾಖಲೆಗಳು ಬೆಂಕಿಗಾಹುತಿಯಾಗಿವೆ. ಇನ್ವರ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ಪರಿಣಾಮ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಹಶಿಲ್ದಾರ್ ಕಚೇರಿಯಲ್ಲಿ ಎರಡನೇ ಬಾರಿ ಬೆಂಕಿ ಅವಘಡ ಸಂಭವಿಸಿದೆ. ಗಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular