HomeKarnatakaಬೆಂಗಳೂರು ದಕ್ಷಿಣದ ತಹಶೀಲ್ದಾರ್, ವಿಶೇಷ ತಹಶೀಲ್ದಾರ್ ಅಮಾನತು

ಬೆಂಗಳೂರು ದಕ್ಷಿಣದ ತಹಶೀಲ್ದಾರ್, ವಿಶೇಷ ತಹಶೀಲ್ದಾರ್ ಅಮಾನತು

ಕರ್ನಾಟಕ ಸರ್ಕಾರ ಬೆಂಗಳೂರು ದಕ್ಷಿಣ ತಾಲೂಕಿನ ತಹಶೀಲ್ದಾರ್ ಗ್ರೇಡ್-1 ಮತ್ತು ವಿಶೇಷ ತಹಶೀಲ್ದಾರ್ ಅಮಾನತುಗೊಳಿಸಿ ಆದೇಶವನ್ನು ಹೊರಡಿಸಿದೆ. ಈ ಕುರಿತು ನರಸಿಂಹ ಮೂರ್ತಿ ಜಿ.ಕೆ. ಸರ್ಕಾರದ ಅಧೀನ ಕಾರ್ಯದರ್ಶಿ, ಕಂದಾಯ ಇಲಾಖೆ (ಸೇವೆಗಳು-3 ವಿ.ನಿ) ಆದೇಶವನ್ನು ಹೊರಡಿಸಿದ್ದಾರೆ.

ಗ್ರೇಡ್-1 ತಹಶೀಲ್ದಾರ್ ಅಶ್ವಿನಿ ಜಿ. ಮತ್ತು ವಿಶೇಷ ತಹಶೀಲ್ದಾರ್ ವರ್ಷಾ ವಡೆಯರ್ ಅಮಾನತುಗೊಂಡವರು. ಅಮಾನತು ಅವಧಿಯಲ್ಲಿ ಇಬ್ಬರು ಸಹ ಕೆ.ಸಿ.ಎಸ್.ಆರ್. ನಿಯಮ-98(1) (ಎ) ರನ್ವಯ ನಿಯಮಾನುಸಾರ ಜೀವನಾಧಾರ ಭತ್ಯೆ ಪಡೆಯಲು ಅರ್ಹರಾಗಿರುತ್ತಾರೆ.

ಇಬ್ಬರ ವಿರುದ್ಧದ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಸರ್ಕಾರಿ ಸೇವೆಯಿಂದ ಅಮಾನತು ಮಾಡಲಾಗಿದೆ. ಸದರಿ ಅಧಿಕಾರಿಗಳು ಅಮಾನತು ಅವಧಿಯಲ್ಲಿ ಪೂರ್ವಾನುಮತಿ ಇಲ್ಲದೇ ಕೇಂದ್ರ ಸ್ಥಾನವನ್ನು ಬಿಟ್ಟು ತೆರಳುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಮಾನತು ಮಾಡಿದ್ದು ಏಕೆ?; ಅಮಾನತು ಆದೇಶ ಅಶ್ವಿನಿ ಜಿ., ತಹಶೀಲ್ದಾರ್ ಗ್ರೇಡ್-1, ಬೆಂಗಳೂರು ದಕ್ಷಿಣ ತಾಲ್ಲೂಕು ಹಾಗೂ ವರ್ಷಾ ವಡೆಯರ್, ವಿಶೇಷ ತಹಶೀಲ್ದಾರ್, ಬೆಂಗಳೂರು ದಕ್ಷಿಣ ತಾಲ್ಲೂಕು ಇವರುಗಳನ್ನು ಸೇವೆಯಿಂದ ಅಮಾನತ್ತುಗೊಳಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ಕಂದಾಯ ಇಲಾಖೆಯಲ್ಲಿ ನ್ಯಾಯಾಲಯ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ವಿವಿಧ ನ್ಯಾಯಾಲಯಗಳಲ್ಲಿ ಸರ್ಕಾರದ ವಿರುದ್ಧ ಪ್ರಕರಣಗಳು ದಾಖಲಾಗುವುದರಿಂದ, ನ್ಯಾಯಾಲಯ ಪಕರಣಗಳ ಮೇಲ್ವಿಚಾರಣೆ ಹಾಗೂ ನ್ಯಾಯಾಲಯದ ಆದೇಶಗಳನ್ನು ಪರಿಶೀಲಿಸಿ, ಸರ್ಕಾರದ ಹಿತಾಸಕ್ತಿ ಕಾಪಾಡಿಕೊಳ್ಳುವುದು ಕಂದಾಯ ಇಲಾಖೆಯ ಆದ್ಯ ಕರ್ತವ್ಯವಾಗಿರುತ್ತದೆ.

ಈ ಸಂಬಂಧ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಉನ್ನತ ಮಟ್ಟದಲ್ಲಿ ನ್ಯಾಯಾಲಯ ಪ್ರಕರಣಗಳ ಕುರಿತಂತೆ ಪರಿಶೀಲನಾ ಸಭೆಗಳನ್ನು ನಿಯಮಿತವಾಗಿ ನಡೆಸಿ, ನಿಯಮಾನುಸಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಕಂದಾಯ ಇಲಾಖೆಯ ಬೆಂಗಳೂರು ಜಿಲ್ಲೆಗೆ ಸಂಬಂಧಿಸಿದಂತೆ ಸಿ.ಸಿ.ಎಂ.ಎಸ್ ಪ್ರಕರಣಗಳ ಕುರಿತಂತೆ ಚರ್ಚಿಸಲು ದಿನಾಂಕ 10.03.2026ರಂದು ಸಭೆಯನ್ನು ನಿಗಧಿಪಡಿಸಲಾಗಿರುತ್ತದೆ. ಸದರಿ ಸಭೆಗೆ ಸಂಬಂಧಪಟ್ಟ, ಮಾಹಿತಿಯೊಂದಿಗೆ ಹಾಜರಾಗುವಂತೆ ಸಂಬಂಧಪಟ್ಟ, ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ.

ಬೆಂಗಳೂರು ದಕ್ಷಿಣ ತಾಲ್ಲೂಕಿನ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಾನ್ಯ ಉಚ್ಚ ನ್ಯಾಯಾಲಯದ ಪ್ರಕರಣಗಳು ಅಂತಿಮ ಆದೇಶದ ಅನುಪಾಲನೆಗೆ ಹಾಗೂ ನ್ಯಾಯಾಂಗ ನಿಂದನಾ ಪ್ರಕರಣಗಳು ಬಾಕಿಯಿರುವುದನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರು ಗಂಭೀರವಾಗಿ ಪರಿಗಣಿಸಿದ್ದು, ಸದರಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸಭೆ ಕರೆದರೂ ಸಹ ಈ ಪ್ರಕರಣಗಳನ್ನು ನಿರ್ವಹಿಸುವ ಜವಾಬ್ದಾರಿಯುಳ್ಳ ಅಧಿಕಾರಿಗಳಾದ ವರ್ಷಾ ವಡೆಯರ್, ಸಭೆಗೆ ಗೈರು ಹಾಜರಾಗಿರುತ್ತಾರೆ.

ಅಶ್ವಿನಿ.ಜಿ, ತಹಶೀಲ್ದಾರ್ ಗ್ರೇಡ್-1 ಬೆಂಗಳೂರು ದಕ್ಷಿಣ ತಾಲ್ಲೂಕು ಇವರು ಸಭೆಗೆ ವಿಳಂಭವಾಗಿ ಹಾಜರಾಗಿರುತ್ತಾರೆ ಹಾಗೂ ಪುನ: ಸಭೆಗೆ ಹಾಜರಾಗುವಂತೆ ಸೂಚಿಸಿದ ಮೇರೆಗೆ ಅಪೂರ್ಣ ಮಾಹಿತಿಯೊಂದಿಗೆ ಹಾಜರಾಗಿದ್ದು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪ್ರಕರಣಗಳ ಕುರಿತು ಮಾಹಿತಿಯನ್ನು ಒದಗಿಸಲು ವಿಫಲರಾಗಿರುತ್ತಾರೆ.

ಮುಂದುವರೆದು, ಹಲವು ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯದ ಆದೇಶಗಳ ವಿರುದ್ಧ ಮೇಲ್ಮನವಿ ಸಲ್ಲಿಸಲು ಸದರಿಯವರುಗಳನ್ನು ಸರ್ಕಾರದಿಂದ ವ್ಯಾಜ್ಯ ನಿರ್ವಹಣಾಧಿಕಾರಿಯನ್ನಾಗಿ ನೇಮಿಸಿದರೂ ಸಹ ಮೇಲ್ಮನವಿ ಸಲ್ಲಿಸಲು ಅಗತ್ಯ ಕ್ರಮ ಕೈಗೊಂಡಿರುವುದಿಲ್ಲ ಹಾಗೂ ವಿಳಂಭ ನೀತಿ ಅನುಸರಿಸಿರುವುದರಿಂದ, ಸರ್ಕಾರದ ವಿರುದ್ಧ ನಿಂದನಾ ಅರ್ಜಿಗಳು ದಾಖಲಾಗಲು ಕಾರಣರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular