HomeBusinessಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್: ಮುಂಜಾಗ್ರತೆ ಕ್ರಮಕ್ಕೆ ವಿದ್ಯುತ್ ಕಂಪನಿಗಳಿಗೆ ಕೇಂದ್ರ ಸೂಚನೆ

ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್: ಮುಂಜಾಗ್ರತೆ ಕ್ರಮಕ್ಕೆ ವಿದ್ಯುತ್ ಕಂಪನಿಗಳಿಗೆ ಕೇಂದ್ರ ಸೂಚನೆ

ನವದೆಹಲಿ: ಬೇಸಿಗೆಯಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಿರಲು ಮುಂಜಾಗ್ರತೆ ಕ್ರಮ ಕೈಗೊಳ್ಳಲು ವಿದ್ಯುತ್ ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಕೇಂದ್ರ ವಿದ್ಯುತ್ ಸಚಿವ ಆರ್.ಕೆ. ಸಿಂಗ್ ಅವರು ಬೇಸಿಗೆ ಅವಧಿಯಲ್ಲಿ ವಿದ್ಯುತ್ ಬೇಡಿಕೆ ಪೂರೈಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಕಲ್ಲಿದ್ದಲು, ರೈಲ್ವೆ, ವಿದ್ಯುತ್ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಲ್ಲಿದ್ದಲು ಹಂಚಿಕೆ ಮಾಡಲು ಪಾರದರ್ಶಕ ಮತ್ತು ನ್ಯಾಯಯುತ ವಿಧಾನ ಅನುಸರಿಸಲು ಸೂಚನೆ ನೀಡಿದ್ದಾರೆ.

ವಾರ್ಷಿಕ ವಿದ್ಯುತ್ ಬಳಕೆಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಹೆಚ್ಚಿನ ಪಾಲು ಹೊಂದಿದೆ. ಗೃಹಬಳಕೆ ವಿದ್ಯುತ್ ಬೇಡಿಕೆ ನಾಲ್ಕನೇ ಸ್ಥಾನದಲ್ಲಿದ್ದು, ಕೃಷಿ ಕ್ಷೇತ್ರ ಆರನೇ ಸ್ಥಾನದಲ್ಲಿದೆ. ವಿದ್ಯುತ್ ಉತ್ಪಾದನೆ ಮತ್ತು ಬೇಡಿಕೆ ನಡುವೆ ಅಂತರ ಉಂಟಾದಾಗ ಅದನ್ನು ಸರಿದೂಗಿಸಲು ಲೋಡ್ ಶೆಡ್ಡಿಂಗ್ ಮಾಡಲಾಗುತ್ತದೆ.

ಬೇಸಿಗೆಯಲ್ಲಿ ವಿದ್ಯುತ್ ಕಡಿತವಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಏಪ್ರಿಲ್ ನಲ್ಲಿ ಗರಿಷ್ಠ ವಿದ್ಯುತ್ ಬೇಡಿಕೆ 299 ಗಿಗಾ ವ್ಯಾಟ್ ತಲುಪುವ ನೀರಿಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಲೋಡ್ ಶೆಡ್ಡಿಂಗ್ ಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಲ್ಲಿ ಸಾಕಷ್ಟು ಪ್ರಮಾಣದ ಕಲ್ಲಿದ್ದಲು ದಾಸ್ತಾನು ಮಾಡಿಕೊಳ್ಳಬೇಕು. ಗರಿಷ್ಠ ಬೇಡಿಕೆ ಪೂರೈಸಲು ಅನಿಲ ಆಧಾರಿತ ಶಕ್ತಿ ಬಳಕೆಗೆ ಸೂಚನೆ ನೀಡಲಾಗಿದೆ. ಮಾರ್ಚ್ 16 ರಿಂದ ಸಂಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಎಲ್ಲಾ ವಿದ್ಯುತ್ ಸ್ಥಾವರಗಳಿಗೆ ನಿರ್ದೇಶನ ನೀಡಿರುವುದು ಸೇರಿದಂತೆ ಲೋಡ್ ಶೆಡ್ಡಿಂಗ್ ತಡೆಗೆ ಬಹುಮುಖಿ ಕಾರ್ಯತಂತ್ರ ರೂಪಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular