BIG NEWS : ‘ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ’ : ರಾಹುಲ್ ಗಾಂಧಿ ಮತಗಳ್ಳತನ ಆರೋಪಕ್ಕೆ H.D ಕುಮಾರಸ್ವಾಮಿ ಕಿಡಿ

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನ ಆರೋಪ ಮಾಡಿ ಬೆಂಗಳೂರಿನಲ್ಲಿ ನಡೆಸುತ್ತಿರುವ ರಾಹುಲ್ ಗಾಂಧಿ ಪ್ರತಿಭಟನೆಗೆ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ. ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ (Benefit of the doubt) ಪಡೆಯುವ ಕಿಡಿಗೇಡಿ ಪಿತೂರಿ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ.

ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read