HomeKarnatakaಕಸದ ತೊಟ್ಟಿಯಲ್ಲಿ ಕಂದಾಯ ಇಲಾಖೆ ದಾಖಲೆಗಳು ಪತ್ತೆ

ಕಸದ ತೊಟ್ಟಿಯಲ್ಲಿ ಕಂದಾಯ ಇಲಾಖೆ ದಾಖಲೆಗಳು ಪತ್ತೆ

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಕಚೇರಿಯ ಭೂ ದಾಖಲೆಗಳು ಕಸದ ತೊಟ್ಟಿಯಲ್ಲಿ ಪತ್ತೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ.

ತಾಲ್ಲೂಕು. ಕಚೇರಿಯ ಸಮೀಪದಲ್ಲಿದ್ದ ಕಸದ ತೊಟ್ಟಿಯಲ್ಲಿ ಕಂಡುಬಂದಿವೆ. ಭೂ ಅಕ್ರಮ ಬಯಲಾದ ಬೆನ್ನೆಲ್ಲೇ ಕಸದ ತೊಟ್ಟಿಯಲ್ಲಿ ದಾಖಲೆಗಳು ಪತ್ತೆಯಾಗಿದ್ದು, ಅಕ್ರಮ ಮುಚ್ಚಿ ಹಾಕಲು ಅಧಿಕಾರಿಗಳು ಮತ್ತು ಸಿಬ್ಬಂದಿ ಯತ್ನಿಸಿದ ಆರೋಪ ಕೇಳಿ ಬಂದಿದೆ. ಅಕ್ರಮ ದಂಧೆಕೋರರಿಂದಲೇ ನಾಶಪಡಿಸುವ ಕಾರ್ಯ ನಡೆದಿದೆ ಎಂದು ಹೇಳಲಾಗಿದೆ.

ಅಭಿಲೇಖ ವಿಭಾಗದಲ್ಲಿ ಇರಬೇಕಿದ್ದ ದಾಖಲೆಗಳು ಕಸದತೊಟ್ಟಿ ಸೇರಿದ್ದು ಹೇಗೆ ಎನ್ನುವ ಪ್ರಶ್ನೆ ಮೂಡಿದೆ. ಕಸದ ತೊಟ್ಟಿಯಲ್ಲಿ ರಾಶಿ ರಾಶಿ ದಾಖಲೆ ಕಂಡು ಬಂದಿವೆ. ಕೆಲವು ತಿಂಗಳ ಹಿಂದೆ ತಾಲೂಕು ಕಚೇರಿ ಮೇಲೆ ಉಪ ಲೋಕಾಯುಕ್ತರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಖಾತೆ ಮಾಡಿದ್ದು ಬಯಲಾಗಿತ್ತು. ಅದರ ನಡುವೆ ಕಸದ ಬುಟ್ಟಿಗೆ ತಾಲೂಕು ಕಚೇರಿ ದಾಖಲೆ ಸುರಿದಿರುವುದು ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾಲೂಕು ಕಚೇರಿಯ ಅಭಿಲೇಖ ವಿಭಾಗದಲ್ಲಿ ಇರಬೇಕಿದ್ದ ಕಂದಾಯ ಇಲಾಖೆ ಹಲವು ದಾಖಲೆಗಳು ಮತ್ತು ಸಾರ್ವಜನಿಕರ ಅರ್ಜಿಗಳು ತಾಲೂಕು ಆಡಳಿತ ಸೌಧ ಆವರಣದಲ್ಲಿರುವ ಕಸದ ತೊಟ್ಟಿಯಲ್ಲಿ ಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಕಳೆದ ವಾರ ಸೆಪ್ಟಂಬರ್ 10ರಂದು ಉಪಲೋಕಾಯುಕ್ತ ಬಿ. ವೀರಪ್ಪ ನೇತೃತ್ವದ ತಂಡ ತಾಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಸಾರ್ವಜನಿಕರು ನೀಡಿದ ಸಾವಿರಾರು ಅರ್ಜಿಗಳನ್ನು ವರ್ಷಗಳಿಂದ ವಿಲೇವಾರಿ ಮಾಡದೆ ಕಡತಗಳಲ್ಲಿ ಹಾಗೆಯೇ ಉಳಿಸಿಕೊಳ್ಳಲಾಗಿದೆ. ಈ ಬಗ್ಗೆ ಅಧಿಕಾರಿಗಳನ್ನು ಉಪಲೋಕಾಯುಕ್ತರು ತರಾಟೆಗೆ ತೆಗೆದುಕೊಂಡಿದ್ದರು.

ಈಗ ತಾಲೂಕು ಕಚೇರಿ ರೆಕಾರ್ಡ್ ರೂಂನಲ್ಲಿ ಇರಬೇಕಿದ್ದ ಕಂದಾಯ ಇಲಾಖೆ ದಾಖಲೆಗಳು ಕಸದ ತೊಟ್ಟಿಯಲ್ಲಿ ಪತ್ತೆಯಾಗಿದ್ದು ಹಿರಿಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ತಹಸಿಲ್ದಾರ್ ಯು.ಎಸ್. ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರೊಂದಿಗೆ ಸ್ಥಳಕ್ಕೆ ತೆರಳಿ ಕಸದ ತೊಟ್ಟಿಯಲ್ಲಿದ್ದ ಎರಡು ಬಾಕ್ಸ್ ನಷ್ಟು ದಾಖಲೆಗಳನ್ನು ಸಂರಕ್ಷಿಸಲಾಗಿದೆ. ಸಂಬಂಧಿಸಿದವರ ವಿರುದ್ಧ ದೂರು ದಾಖಲಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಅಧಿಕಾರಿಗಳ ತಂಡ ರಚಿಸಿ ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದ್ದಾರೆ. (ಚಿತ್ರಕೃಪೆ:ಎಐ)

ಗೃಹಜ್ಯೋತಿ ಅಕ್ರಮ ತಡೆಗೆ ಮರುಪರಿಶೀಲನೆ

ಕೊಪ್ಪಳ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲೊಂದಾದ ‘ಗೃಹಜ್ಯೋತಿ’ ಯೋಜನೆಯಲ್ಲಿನ ಅಕ್ರಮಗಳನ್ನು ತಡೆಗಟ್ಟಿ, ಕೇವಲ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ನೈಜ ಲಾಭ ತಲುಪಿಸುವ ನಿಟ್ಟಿನಲ್ಲಿ ಕೊಪ್ಪಳ ನಗರದಾದ್ಯಂತ ಮನೆ-ಮನೆ ಭೇಟಿ ಮರುಪರಿಶೀಲನಾ ಪ್ರಕ್ರಿಯೆ ಚುರುಕುಗೊಂಡಿದೆ.

ನಗರದ ಕುವೆಂಪು ನಗರ ಸೇರಿದಂತೆ ವಿವಿಧ ವಾರ್ಡ್ ಗಳಲ್ಲಿ ಪರಿಶೀಲನೆ ಕಾರ್ಯ ಸ್ವಲ್ಪ ವಿಳಂಬವಾಗುತ್ತಿರುವ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ಅವರು ಸ್ವತಃ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಮಂಜುನಾಥ ಅವರು, “ಕಾಂಗ್ರೆಸ್ ಸರ್ಕಾರವು ಬಡವರ ಹಾಗೂ ಸಮಾಜದ ಎಲ್ಲಾ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿದೆ. ಪ್ರತಿವರ್ಷ ಸುಮಾರು 56,000 ಕೋಟಿ ರೂ. ಅನುದಾನವನ್ನು ಈ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟು ಜಾರಿಗೆ ತರುತ್ತಿರುವುದು ಅತ್ಯಂತ ಜನಪರ ಹಾಗೂ ಪ್ರಗತಿಪರ ಹೆಜ್ಜೆಯಾಗಿದೆ. ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಅರ್ಹರಿಗೆ ತೊಂದರೆಯಾಗಬಾರದು. ಅದಕ್ಕಾಗಿ ಜೆಸ್ಕಾಂ ಸಿಬ್ಬಂದಿ ನಡೆಸುತಿರುವ ಮರುಪರಿಶೀಲನೆಗೆ ಸಾರ್ವಜನಿಕರು ಹಾಗೂ ಫಲಾನುಭವಿಗಳು ಪೂರ್ಣ ಸಹಕಾರ ನೀಡಬೇಕು” ಎಂದು ವಿನಂತಿಸಿದರು.

ಇದೇ ವೇಳೆ, ಬಾಗಿಲು ಮುಚ್ಚಿರುವ (ಡೋರ್ ಲಾಕ್) ಮನೆಗಳ ಕುರಿತು ಗಮನ ಸೆಳೆದ ಅವರು, ಅಂತಹ ಮನೆಗಳಿಗೆ ಕಡ್ಡಾಯವಾಗಿ ನೋಟಿಸ್ ಅಂಟಿಸಬೇಕು. ಆ ನೋಟಿಸ್‌ನಲ್ಲಿ ಸಂಬಂಧಿಸಿದ ಏರಿಯಾದ ಮೀಟರ್ ರೀಡರ್ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಈ ಭೇಟಿಯ ಸಂದರ್ಭದಲ್ಲಿ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಮೊಟ್ಲಾ ನಾಯ್ಕ, ಎಇಇ ಸೈಯದ್ ಯುನೂಸ್, ಇಲಾಖೆಯ ಸಿಬ್ಬಂದಿಯಾದ ಎಸ್. ಒ. ಹನುಮಂತ ಕಟಗಿ, ಸೀನಿಯರ್ ಲೈನ್‌ಮನ್ ಹನುಮಂತ ಹಳ್ಳಿ, ಮೀಟರ್ ರೀಡರ್ ಹುಲಗೇಶ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular