HomeIndiaಉಪ ಚುನಾವಣೆ ಬಹಿಷ್ಕರಿಸುವುದಾಗಿ ಘೋಷಿಸಿದ ಎಐಎಡಿಎಂಕೆ

ಉಪ ಚುನಾವಣೆ ಬಹಿಷ್ಕರಿಸುವುದಾಗಿ ಘೋಷಿಸಿದ ಎಐಎಡಿಎಂಕೆ

ಚೆನ್ನೈ: ತಮಿಳುನಾಡಿನ ವಿಕ್ರವಾಂಡಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಐಎಡಿಎಂಕೆ ಘೋಷಿಸಿದೆ.

ವಿಕ್ರವಾಂಡಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಜುಲೈ 10(ಬುಧವಾರ) ರಂದು ನಿಗದಿಯಾಗಿದೆ. ಏಪ್ರಿಲ್‌ನಲ್ಲಿ ಡಿಎಂಕೆ ಶಾಸಕ ಪುಗಳೆಂದಿ ಅವರ ಅಕಾಲಿಕ ನಿಧನದಿಂದ ಇದು ತೆರವಾಗಿತ್ತು. ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಜುಲೈ 10 ರಂದು ನಡೆಯಲಿರುವ ವಿಕ್ರವಾಂಡಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದೆ.

ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಡಿಎಂಕೆ ಹಿಂಸಾಚಾರ, ಹಣಬಲದಲ್ಲಿ ಚುನಾವಣೆಗಳನ್ನು ನಡೆಸುತ್ತದೆ. ಚುನಾವಣೆ ಮುಕ್ತ ಮತ್ತು ನ್ಯಾಯಯುತವಾಗಿ ನಡೆಸಲಾಗುವುದಿಲ್ಲ. ಜನರಿಗೆ ಮತ ಚಲಾಯಿಸಲು ಸ್ವಾತಂತ್ರ್ಯ ನೀಡುವುದಿಲ್ಲ. ಆದ್ದರಿಂದ ಎಐಎಡಿಎಂಕೆ ಈ ಚುನಾವಣೆಯನ್ನು ಬಹಿಷ್ಕರಿಸುತ್ತಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular