BIG NEWS: ಅಧಿಕಾರದಿಂದ ಡಿಎಂಕೆ ಕಿತ್ತೊಗೆಯುವವರೆಗೂ ಚಪ್ಪಲಿ ಧರಿಸಲ್ಲ: ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಪ್ರತಿಜ್ಞೆ

ಚೆನ್ನೈ: ರಾಜ್ಯದಲ್ಲಿ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಅಧಿಕಾರದಿಂದ ಕೆಳಗಿಳಿಯುವವರೆಗೆ ಯಾವುದೇ ರೀತಿಯ ಪಾದರಕ್ಷೆಗಳನ್ನು ಧರಿಸುವುದಿಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಗುರುವಾರ ಸವಾಲಿನ ಪ್ರತಿಜ್ಞೆ ಮಾಡಿದ್ದಾರೆ.

ಅಣ್ಣಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯ ಲೈಂಗಿಕ ಕಿರುಕುಳ ಪ್ರಕರಣವನ್ನು ಸರ್ಕಾರ ಹೇಗೆ ನಿರ್ವಹಿಸಿದೆ ಎಂಬುದನ್ನು ವಿರೋಧಿಸಿ ಚಾಟಿಯೇಟು ಪ್ರತಿಭಟನೆ ಮಾಡುವುದಾಗಿ ಅವರು ಹೇಳಿದ್ದಾರೆ.

ಈ ಪ್ರಕರಣದಲ್ಲಿ ತಮಿಳುನಾಡು ಪೊಲೀಸರು ಸಂತ್ರಸ್ತೆಯ ಹೆಸರು, ಫೋನ್ ಸಂಖ್ಯೆ ಮತ್ತು ಇತರ ವೈಯಕ್ತಿಕ ವಿವರಗಳನ್ನು ಸಾರ್ವಜನಿಕಗೊಳಿಸಿದ್ದಾರೆ ಎಂದು ಅಣ್ಣಾಮಲೈ ಆರೋಪಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದರೆ ಪೊಲೀಸರು ಅವರನ್ನು ಬಂಧಿಸುತ್ತಾರೆ, ಅದಕ್ಕಾಗಿಯೇ ಈಗ ಬಿಜೆಪಿ ಸದಸ್ಯರು ತಮ್ಮ ಮನೆಗಳ ಹೊರಗೆ ಪ್ರತಿಭಟನೆ ನಡೆಸುತ್ತಾರೆ ಎಂದು ಅವರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read