HomeIndiaBig News: ಅಣ್ಣಾಮಲೈ ಗರಂ, ಸೀಟು ಬೇಡ ಎಂದ ಮಾಜಿ ಐಪಿಎಸ್ ಅಧಿಕಾರಿ!

Big News: ಅಣ್ಣಾಮಲೈ ಗರಂ, ಸೀಟು ಬೇಡ ಎಂದ ಮಾಜಿ ಐಪಿಎಸ್ ಅಧಿಕಾರಿ!

ತಮಿಳುನಾಡು ವಿಧಾನಸಭಾ ಚುನಾವಣೆ 2026ರ ವೇಳಾಪಟ್ಟಿ ಘೋಷಣೆಯಾಗಿದೆ. ರಾಜ್ಯದ 234 ಸ್ಥಾನಗಳಿಗೆ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆ ಸಂದರ್ಭದಲ್ಲಿಯೇ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ತೀವ್ರವಾಗಿ ಅಸಮಾಧಾನಗೊಂಡಿದ್ದಾರೆ.

ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟದ ಕ್ಷೇತ್ರಗಳ ಹಂಚಿಕೆ ಕುರಿತು ಗಂಭೀರ ಕಳವಳವನ್ನು ವ್ಯಕ್ತಪಡಿಸಿರುವ ಅಣ್ಣಾಮಲೈ, ಈ ಬಾರಿಯ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ. ಕಾರ್ಯಕರ್ತನಾಗಿಯೇ ಉಳಿಯುತ್ತೇನೆ ಎಂದು ಹೈಕಮಾಂಡ್ ನಾಯಕರಿಗೆ ಸಂದೇಶ ಕಳಿಸಿದ್ದಾರೆ.

ಮಾಹಿತಿಗಳ ಪ್ರಕಾರ ಕೆ. ಅಣ್ಣಾಮಲೈ ಕೇಂದ್ರ ನಾಯಕರಿಗೆ ಪತ್ರವನ್ನು ಬರೆದಿದ್ದು, ಕ್ಷೇತ್ರಗಳ ಹಂಚಿಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಐಎಡಿಎಂಕೆ ಕ್ಷೇತ್ರಗಳ ಹಂಚಿಕೆ ಹಠದ ಕಾರಣ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಸಹ ಕ್ಷೇತ್ರ ಬದಲಾವಣೆ ಮಾಡುವ ಪರಿಸ್ಥಿತಿ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಗೆಲ್ಲಲಿದೆ ಎಂದು ಅಂದಾಜಿಸಲಾಗಿದ್ದ ಕೆಲವು ಕ್ಷೇತ್ರಗಳನ್ನು ಸಹ ಎಐಎಡಿಎಂಕೆಗೆ ಬಿಟ್ಟುಕೊಡಲಾಗಿದೆ. ಬಿಜೆಪಿಗೆ 27 ಸೀಟುಗಳನ್ನು ಎಐಎಡಿಎಂಕೆ ನೀಡಿದ್ದು, ಆದರೆ ಗೆಲ್ಲುವ ಕ್ಷೇತ್ರಗಳನ್ನು ನೀಡಿಲ್ಲ ಎಂಬುದು ಬಿಜೆಪಿಯ ಆರೋಪವಾಗಿದೆ.

ಎಐಎಡಿಎಂಕೆ ಬೇಡಿಕೆಯ ಕಾರಣಕ್ಕೆ ಬಿಜೆಪಿ ಕೆ.ಅಣ್ಣಾಮಲೈ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಿ ನೈನಾರ್ ನಾಗೇಂದ್ರನ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿತ್ತು. ಆದರೆ ಈಗ ಮೈತ್ರಿ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಅಣ್ಣಾಮಲೈ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಪಕ್ಷದ ನಾಯಕರಿಗೆ ಹೇಳಿದ್ದಾರೆ.

“ನಾನು ಎಲ್ಲಾ ಬಿಜೆಪಿ ಅಭ್ಯರ್ಥಿಗಳಿಗೆ, ಎನ್‌ಡಿಎ ಮೈತ್ರಿಕೂಟ ಅಭ್ಯರ್ಥಿಗಳಿಗೆ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ” ಎಂದು ಕೆ.ಅಣ್ಣಾಮಲೈ ಹೇಳಿದ್ದು, ತಮಿಳುನಾಡು ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಸಂದೇಶವನ್ನು ಚುನಾವಣೆಗೂ ಮೊದಲೇ ಸಾರಿಗೆ.

ಬಿಜೆಪಿ ಈ ಕ್ಷೇತ್ರಗಳು ಬೇಕು ಎಂದು ಪಟ್ಟು ಹಿಡಿಯಬೇಕಿತ್ತು. ಎಐಎಡಿಎಂಕೆ ಪಕ್ಷ ಮೈತ್ರಿಕೂಟದ ಇತರ ಪಕ್ಷಗಳಿಗೆ ಅವರಿಗೆ ಬೇಕಾದ ಕ್ಷೇತ್ರಗಳನ್ನು ನೀಡಿದೆ. ಆದರೆ ಬಿಜೆಪಿಗೆ ಮಾತ್ರ ನೀಡಿಲ್ಲ ಎಂದು ಅಣ್ಣಾಮಲೈ ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

“ನನ್ನ ಅಭಿಪ್ರಾಯವನ್ನು ನಾನು ಹೈಕಮಾಂಡ್‌ ನಾಯಕರಿಗೆ ತಿಳಿಸಿದ್ದೇನೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಮತ್ತು ಬಿಜೆಪಿ ಪಕ್ಷಕ್ಕೆ ನಾನು ನಿಷ್ಠನಾಗಿ ಇರುತ್ತೇನೆ” ಎಂದು ಕೆ.ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಇನ್ನೂ ಸಹ ಕೆ.ಅಣ್ಣಾಮಲೈ ಸ್ಪರ್ಧೆ ಬಗ್ಗೆ ಅಂತಿಮ ತೀರ್ಮಾನವನ್ನು ಕೈಗೊಂಡಿಲ್ಲ.  2021ರ ವಿಧಾನಸಭೆ ಚುನವಣೆಯಲ್ಲಿ ಕೆ.ಅಣ್ಣಾಮಲೈ ಅರಾವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು.

ತಮಿಳುನಾಡಿನ 234 ಸೀಟುಗಳ ಪೈಕಿ ಎಐಎಡಿಎಂಕೆ 169, ಬಿಜೆಪಿ 27, ಪಿಎಂಕೆ 18 ಮತ್ತು ಎಎಂಎಂಕೆ 11 ಸೀಟುಗಳಲ್ಲಿ ಕಣಕ್ಕಿಳಿಯಲಿವೆ. ಎಎಂಎಂಕೆ ಈ ಬಾರಿ ಹೊಸದಾಗ ಮೈತ್ರಿಕೂಟಕ್ಕೆ ಸೇರಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular