HomeKarnatakaತಮಿಳುನಾಡು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ರಾಜ್ಯದ ನಾಯಕರ ದಂಡು

ತಮಿಳುನಾಡು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ರಾಜ್ಯದ ನಾಯಕರ ದಂಡು

ಬೆಂಗಳೂರು: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ರಾಜ್ಯದ ಸಚಿವರು, ಶಾಸಕರು ಸೇರಿದಂತೆ 19 ಪ್ರಮುಖರನ್ನು ಎಐಸಿಸಿ ವೀಕ್ಷಕರಾಗಿ ನೇಮಕ ಮಾಡಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ 19 ಪ್ರಮುಖರನ್ನು ತಮಿಳುನಾಡು ಚುನಾವಣೆಗೆ ಎಐಸಿಸಿ ವೀಕ್ಷಕರಾಗಿ ನೇಮಕ ಮಾಡಿದ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಎಚ್. ಮುನಿಯಪ್ಪ, ಈಶ್ವರ್ ಖಂಡ್ರೆ, ಎಂ.ಸಿ. ಸುಧಾಕರ್, ಸಂತೋಷ್ ಲಾಡ್, ಲಕ್ಷ್ಮಿ ಹೆಬ್ಬಾಳ್ಕರ್, ಬೈರತಿ ಸುರೇಶ್, ಸಂಸದ ಜಿ. ಕುಮಾರನಾಯಕ್, ಮಾಜಿ ಸಂಸದ ಡಿ.ಕೆ. ಸುರೇಶ್, ಶಾಸಕರಾದ ಮಂಥರ್ ಗೌಡ, ಪ್ರಿಯ ಕೃಷ್ಣ, ಎ.ಸಿ. ಶ್ರೀನಿವಾಸ್, ಶ್ರೀನಿವಾಸ ಮಾನೆ, ಟಿ.ಡಿ. ರಾಜೇಗೌಡ, ಡಾ. ಅಜಯ್ ಸಿಂಗ್, ವಿಜಯ್ ಸಿಂಗ್, ಮುಖಂಡರಾದ ಎಸ್.ಎ. ಹುಸೇನ್, ಆರ್.ವಿ. ವೆಂಕಟೇಶ್ ಮತ್ತು ಸೌಮ್ಯಾ ರೆಡ್ಡಿ ಅವರನ್ನು ಎಐಸಿಸಿ ವೀಕ್ಷಕರಾಗಿ ನೇಮಕ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular