ನವದೆಹಲಿ : ತಮಿಳುನಾಡಿನ ವಿಳವಂಕೋಡ್ ಅನ್ನು ಪ್ರತಿನಿಧಿಸುವ ಕಾಂಗ್ರೆಸ್ ಶಾಸಕ ಎಸ್ ವಿಜಯಧರಣಿ ಶನಿವಾರ ನವದೆಹಲಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದರು.
ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ, ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್.ಸಿ.ಮುರುಗನ್, ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಅರವಿಂದ್ ಮೆನನ್ ಮತ್ತು ತಮಿಳುನಾಡು ರಾಜ್ಯ ಬಿಜೆಪಿ ರಾಷ್ಟ್ರೀಯ ಸಹ ಉಸ್ತುವಾರಿ ಪೊಂಗುಲೇಟಿ ಸುಧಾಕರ್ ರೆಡ್ಡಿ ಅವರ ಸಮ್ಮುಖದಲ್ಲಿ ಅವರು ಬಿಜೆಪಿ ಪಕ್ಷಕ್ಕೆ ಸೇರಿದರು.
ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯವರಾದ ವಿಜಯಧರಣಿ ಸಾಂಪ್ರದಾಯಿಕ ಕಾಂಗ್ರೆಸ್ ಕುಟುಂಬಕ್ಕೆ ಸೇರಿದವರಾಗಿದ್ದು, ಅವರ ಕುಟುಂಬದ ಮೂರು ತಲೆಮಾರುಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಸ್ಥಾನಗಳನ್ನು ಅಲಂಕರಿಸಿವೆ.
https://twitter.com/annamalai_k/status/1761309439402160365?ref_src=twsrc%5Etfw%7Ctwcamp%5Etweetembed%7Ctwterm%5E1761309439402160365%7Ctwgr%5Ef335a6a8b553844c85ea308e3969daf1c3d8572d%7Ctwcon%5Es1_&ref_url=https%3A%2F%2Fwww.news9live.com%2Fstate%2Ftamil-nadu%2Fbreaking-congress-mla-s-vijayadharani-from-tamil-nadu-joins-bjp-in-new-delhi-2448357