HomeLatest Newsತಮಿಳುನಾಡು ಚುನಾವಣೆ : ಮಧ್ಯರಾತ್ರಿ ಕಳ್ಳ ಮತದಾನದ ಆರೋಪ, DMK-TVK ಕಾರ್ಯಕರ್ತರ ನಡುವೆ ಸಂಘರ್ಷ |WATCH...

ತಮಿಳುನಾಡು ಚುನಾವಣೆ : ಮಧ್ಯರಾತ್ರಿ ಕಳ್ಳ ಮತದಾನದ ಆರೋಪ, DMK-TVK ಕಾರ್ಯಕರ್ತರ ನಡುವೆ ಸಂಘರ್ಷ |WATCH VIDEO

ತಿರುಚಿನಾಪಳ್ಳಿ: ತಮಿಳುನಾಡು ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿರುವ ಬೆನ್ನಲ್ಲೇ, ತಿರುಚಿ ಪೂರ್ವ (Trichy East) ಮತಕ್ಷೇತ್ರದಲ್ಲಿ ಮಧ್ಯರಾತ್ರಿ ಭಾರಿ ಹೈಡ್ರಾಮಾ ನಡೆದಿದೆ. ಬೂತ್ ಅಧಿಕಾರಿಗಳಿಗೆ ಲಂಚ ನೀಡಿ ಡಿಎಂಕೆ (DMK) ಕಾರ್ಯಕರ್ತರು ಕಳ್ಳ ಮತಗಳನ್ನು ಚಲಾಯಿಸುತ್ತಿದ್ದಾರೆ ಎಂದು ಆರೋಪಿಸಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಕಾರ್ಯಕರ್ತರು ಬೂತ್‌ಗಳ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ-ನೂಕಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ತಿರುಚಿ ಪೂರ್ವ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಗುರುವಾರ ಮಧ್ಯರಾತ್ರಿ ಸುಮಾರು 1:00 ಗಂಟೆಯ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಡಿಎಂಕೆ ಸದಸ್ಯರು ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಿಗೆ ಆಮಿಷ ಒಡ್ಡಿ, ಪೊಲೀಸರ ಬೆಂಬಲದೊಂದಿಗೆ ಮತಗಟ್ಟೆ ವಶಪಡಿಸಿಕೊಳ್ಳಲು (Booth Capturing) ಪ್ರಯತ್ನಿಸುತ್ತಿದ್ದಾರೆ ಎಂದು ಟಿವಿಕೆ ಕಾರ್ಯಕರ್ತರು ಗಂಭೀರ ಆರೋಪ ಮಾಡಿದ್ದಾರೆ.

ಈ ಅಕ್ರಮವನ್ನು ತಡೆಯಲು ಮುಂದಾದ ಟಿವಿಕೆ ಸದಸ್ಯರನ್ನು ಪೊಲೀಸರು ಸ್ಥಳದಿಂದ ಬಲವಂತವಾಗಿ ತೆರವುಗೊಳಿಸಿದ್ದಾರೆ ಎನ್ನಲಾಗಿದೆ. “ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ ಆಡಳಿತ ಪಕ್ಷ ಅಕ್ರಮ ಎಸಗುತ್ತಿದೆ, ಇದಕ್ಕೆ ಪೊಲೀಸರೇ ಸಾಥ್ ನೀಡುತ್ತಿರುವುದು ದುರಂತ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಚುನಾವಣಾ ಆಯೋಗವು ಈ ಕೂಡಲೇ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular