HomeIndiaELECTION BREAKING: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಗೆ ಸೋಲು: ವಿಜಯ್ ಅವರ ಟಿವಿಕೆ ಅಲೆಯಲ್ಲಿ ಕೊಚ್ಚಿ...

ELECTION BREAKING: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಗೆ ಸೋಲು: ವಿಜಯ್ ಅವರ ಟಿವಿಕೆ ಅಲೆಯಲ್ಲಿ ಕೊಚ್ಚಿ ಹೋದ ಮುಖ್ಯಮಂತ್ರಿ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನೂತನ ಪಕ್ಷ ನಟ ದಳಪತಿ ವಿಜಯ್ ಅವರ ಟಿವಿಕೆ ಪಕ್ಷ ಭಾರಿ ಮುನ್ನಡೆ ಸಾಧಿಸಿದ್ದು, ಆಡಳಿತಾರೂಢ ಡಿಎಂಕೆ ಧೂಳಿಪಟವಾಗಿದೆ. ಸ್ವತಃ ಮುಖ್ಯಮಂತ್ರಿ ಸ್ಟಾಲಿನ್ ಸ್ವಕ್ಷೇತ್ರದಲ್ಲೇ ಸೋಲನುಭವಿಸಿದ್ದಾರೆ.

ತಮಿಳುನಾಡಿನಲ್ಲಿ ದಳಪತಿ ವಿಜಯ್ ಯುಗಾರಂಭವಾಗಿದೆ. ವಿಜಯ್ ಆವರ ಟಿವಿಕೆ ಪಕ್ಷ 105 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ವಿಜಯ್ ಅವರು ತಾವು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿಯೂ ಭರ್ಜರಿ ಗೆಲುವು ಸಾಧಿಸಿದ್ದಾರೆ. ದಳಪತಿಯ ಟಿವಿಕೆ ಪಕ್ಷದ ಅಲೆಗಳ ಹೊಡೆತಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೊಚ್ಚಿ ಹೋಗಿದ್ದಾರೆ.

ಸಿಎಂ ಎಂ.ಕೆ.ಸ್ಟಾಲಿನ್ ಕೊಳತ್ತೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಆದರೆ ತಮ್ಮದೇ ಕ್ಷೇತ್ರದಲ್ಲಿ .ಸ್ಟಾಲಿನ್ ​ಗೆ ಸೋಲಾಗಿದೆ. ಟಿವಿಕೆ ಪಕ್ಷದ ಅಭ್ಯರ್ಥಿ ವಿ.ಎಸ್​.ಬಾಬು ಭಾರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಸಿಎಂ ಸ್ಟಾಲಿನ್ ಅವರಿಗೆ ತೀವ್ರ ಮುಖಭಂಗ ಅನುಭವಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಲವು ವರ್ಷಗಳಿಂದ ಕೊಳತ್ತೂರು ಕ್ಷೇತ್ರ ಡಿಎಂಕೆಯ ಭದ್ರ ಕೋಟೆಯಾಗಿತ್ತು. ಎಂ.ಕೆ. ಸ್ಟಾಲಿನ್ 2011ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಆದರೆ ಈ ಬಾರಿ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ ಪಕ್ಷ ಡಿಎಂಕೆ ಭದ್ರಕೋಟೆಯನ್ನು ಛಿದ್ರಗೊಳಿಸಿದೆ.

ತಮಿಳುನಾಡಿನಲ್ಲಿ ಡಿಎಂಕೆ 68 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ವಿಜಯ್ ಅವರ ಟಿವಿಕೆ 105 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಎಐಎಡಿಎಂಕೆ 59 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular