HomeIndiaತಮಿಳುನಾಡು ಚುನಾವಣೆ: ಹೊಸ ಪಕ್ಷದ ಹೆಸರು ಘೋಷಿಸಿದ ವಿಕೆ ಶಶಿಕಲಾ

ತಮಿಳುನಾಡು ಚುನಾವಣೆ: ಹೊಸ ಪಕ್ಷದ ಹೆಸರು ಘೋಷಿಸಿದ ವಿಕೆ ಶಶಿಕಲಾ

ತಮಿಳುನಾಡು ವಿಧಾನಸಭಾ ಚುನಾವಣೆ 2026ರ ದಿನಾಂಕ ಘೋಷಣೆಗೆ ದಿನಗಣನೆ ಆರಂಭವಾಗಿದೆ. ರಾಜ್ಯ ರಾಜಕೀಯ ಕಾವೇರಿದ್ದು, 234 ಸ್ಥಾನಗಳಿಗೆ ಮಾರ್ಚ್ ಅಂತ್ಯ ಅಥವ ಏಪ್ರಿಲ್‌ನಲ್ಲಿ ಚುನಾವಣೆ ನಡೆಯಲಿದೆ.

ರಾಜ್ಯದ ಹಾಲಿ ಆಡಳಿತ ಪಕ್ಷ ಡಿಎಂಕೆ. ಎಂ.ಕೆ.ಸ್ಟಾಲಿನ್ ಮುಖ್ಯಮಂತ್ರಿ. ದ್ರಾವಿಡ ಮುನ್ನೇಟ್ರಾ ಕಳಗಂ (ಡಿಎಂಕೆ) ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ (ಎಸ್‌ಪಿಎ) ಮತ್ತೆ ಅಧಿಕಾರಕ್ಕೆ ಬರುವ ಊತ್ಸಾಹದಲ್ಲಿದೆ.

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಆಪ್ತೆ ವಿ.ಕೆ.ಶಶಿಕಲಾ ಚುನಾವಣೆ ಸಮಯದಲ್ಲಿಯೇ ಹೊಸ ಪಕ್ಷ ಸ್ಥಾಪನೆ ಮಾಡಿದ್ದಾರೆ. ಎಐಎಡಿಎಂಕೆ ಪಕ್ಷ ಮೂರು ಹೋಳಾಗಿದ್ದು, ಕೆಲವು ದಿನಗಳ ಹಿಂದೆ ಪನ್ನೀರ್ ಸೆಲ್ವಂ ಡಿಎಂಕೆ ಸೇರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೊಸ ಪಕ್ಷದ ಹೆಸರು: ಫೆಬ್ರವರಿ 24ರಂದು ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಹೇಳಿದ್ದ ವಿ.ಕೆ.ಶಶಿಕಲಾ ಪಕ್ಷದ ಧ್ವಜವನ್ನು ಬಿಡುಗಡೆ ಮಾಡಿದ್ದರು. ಶುಕ್ರವಾರ ಅವರು ಅಖಿಲ ಭಾರತ ಪುರಚ್ಚಿ ತಲೈವರ್ ಮಕ್ಕಳ ಮುನ್ನೇತ್ರ ಕಳಗಂ (AIPTMMK) ಎಂಬ ಪಕ್ಷದ ಹೆಸರನ್ನು ಘೋಷಣೆ ಮಾಡಿದರು.

ಎಂಜಿಆರ್ ಮತ್ತು ಜಯಲಲಿತಾ ಅವರ ಕನಸಿನಂತೆ ಪಕ್ಷ ಕಾರ್ಯ ನಿರ್ವಹಣೆ ಮಾಡಲಿದೆ. ಸಮಾನ ಮನಸ್ಕ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳಲು ಎಐಪಿಟಿಎಂಎಂಕೆ ಸಿದ್ಧವಿದೆ ಎಂದು ವಿ.ಕೆ.ಶಶಿಕಲಾ ಘೋಷಣೆ ಮಾಡಿದ್ದಾರೆ.

ಎಐಪಿಟಿಎಂಎಂಕೆ ಪಕ್ಷದ ಚಿಹ್ನೆ ‘ತೆಂಗಿನ ತೋಟ’. ಇದು ಏಕತೆಯನ್ನು ಸೂಚಿಸುತ್ತದೆ. ಈ ಉದ್ದೇಶದ ಸಾಧನೆಗಾಗಿ ನಾನು ಯಾವಾಗಲೂ ಶ್ರಮಿಸುತ್ತೇನೆ ಎಂದು ವಿ.ಕೆ.ಶಶಿಕಲಾ ಘೋಷಿಸಿದರು.

ತಮಿಳುನಾಡು ಜನರ ಏಳಿಗೆಗಾಗಿ ನಾವು ಒಳ್ಳೆಯ ಕೆಲಸ ಮಾಡಬೇಕಿದೆ. ಇದಕ್ಕಾಗಿ ನಮ್ಮ ಆಲೋಚನೆ ಮತ್ತು ಸಿದ್ಧಾಂತಗಳಿಗೆ ಹೊಂದಿಕೆಯಾಗುವ ಪಕ್ಷಗಳ ಜೊತೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಾಗುತ್ತದೆ ಎಂದು ವಿ.ಕೆ.ಶಶಿಕಲಾ ಹೇಳಿದರು.

ಈ ಬಾರಿಯ ತಮಿಳುನಾಡು ಚುನಾವಣೆಯಲ್ಲಿ ಡಿಎಂಕೆ, ಎಐಎಡಿಎಂಕೆ, ವಿವಿಕೆ ಪಕ್ಷಗಳ ನಡುವೆ ಜಿದ್ದಾಜಿದ್ದಿನ ಹೋರಾಟ ನಿರೀಕ್ಷೆ ಮಾಡಲಾಗಿದೆ. ಈಗ ಎಐಪಿಟಿಎಂಎಂಕೆ ಪಕ್ಷದ ಮೂಲಕ ಶಶಿಕಲಾ ಅವರು ಸಹ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ನಿರೀಕ್ಷೆ ಇದೆ.

ಜೈಲಿನಿಂದ ಬಿಡುಗಡೆಯಾದ ಬಳಿಕ ವಿ.ಕೆ.ಶಶಿಕಲಾ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಆದರೆ ಅವರನ್ನು ಮತ್ತು ಮಾಜಿ ಸಿಎಂ ಪನ್ನೀರ್ ಸೆಲ್ವಂ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು.

ಬಳಿಕ ಮತ್ತೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿತ್ತು. ಆದರೆ ಎಐಎಡಿಎಂಕೆ ಎನ್‌ಡಿಎ ಮೈತ್ರಿಕೂಟ ಸೇರುವುದನ್ನು ಇಬ್ಬರು ವಿರೋಧಿಸಿದ್ದರು. ಆದ್ದರಿಂದ ಇಬ್ಬರು ಪಕ್ಷದಿಂದ ಹೊರ ಬಂದಿದ್ದರು.

ಈಗ ಎಐಎಡಿಎಂಕೆ ಪಕ್ಷವನ್ನು ಮಾಜಿ ಸಿಎಂ ಎಡಪ್ಪಾಡಿ ಕೆ. ಪಳನಿಸ್ವಾಮಿ ಮುನ್ನಡೆಸುತ್ತಿದ್ದಾರೆ. ಪಕ್ಷ ಎನ್‌ಡಿಎ ಮೈತ್ರಿಕೂಟ ಸೇರಿದ್ದು, ಬಿಜೆಪಿ ಜೊತೆ ಸೀಟು ಹಂಚಿಕೆ ಮಾಡಿಕೊಂಡು ಚುನಾವಣೆಯನ್ನು ಎದುರಿಸಲಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular