HomeIndiaBIG NEWS: ತಮಿಳುನಾಡು ಚುನಾವಣೆ: ನಟ ರಜನಿಕಾಂತ್, ಕಮಲ್ ಹಾಸನ್, ವಿಜಯ್ ಸೇರಿದಂತೆ ಘಟಾನುಘಟಿ ಸಿನಿ...

BIG NEWS: ತಮಿಳುನಾಡು ಚುನಾವಣೆ: ನಟ ರಜನಿಕಾಂತ್, ಕಮಲ್ ಹಾಸನ್, ವಿಜಯ್ ಸೇರಿದಂತೆ ಘಟಾನುಘಟಿ ಸಿನಿ ತಾರೆಯರಿಂದ ಮತದಾನ

ಚೆನ್ನೈ: ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಇಂದು ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಮತದಾನ ಚುರುಕುಗೊಂಡಿದೆ. ಬೆಳಿಗ್ಗೆಯಿಂದಲೇ ಮತದಾರರು, ರಾಜಕೀಯ ನಾಯಕರು, ಸಿನಿ ತಾರೆಯರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ತಮಿಳುನಾಡಿನಲ್ಲಿ ಎಲಾ 234 ಕ್ಷೇತ್ರಗಳಿಗೂ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಆಡಳಿತಾರೂಢ ಡಿಎಂಕೆ ಹಾಗೂ ವಿಪಕ್ಷ ಎಐಎಡಿಎಂಕೆ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಒಟ್ಟು 4023 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ನಟ ದಳಪತಿ ವಿಜಯ್ ಅವರ ಪಕ್ಷ ಟಿವಿಕೆ ಈ ಬಾರಿ ತಮಿಳುನಾಡು ಚುನಾವಣೆಯಲ್ಲಿ ಮಾತ್ವ ಪಡೆದಿದ್ದು, ಮತಹಂಚಿಕೆ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆ ಇದೆ.

ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಮುಖ್ಯಂತ್ರಿ ಎಂ.ಕೆ.ಸ್ಟಾಲಿನ್, ಡಿಸಿಎಂ ಉದಯನಿಧಿ ಸ್ಟಾಲಿನ್, ಸೂಪರ್ ಸ್ಟಾರ್ ರಜನಿಕಾಂತ್, ನಟ ಕಮಲ್ ಹಾಸನ್, ಪುತ್ರಿ ಶೃತಿ ಹಾಸನ್, ನಟಿ ಖುಷ್ಬು, ನಟ, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಸೇರಿದಂತೆ ಘಟನಾನುಘಟಿ ನಾಯಕರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟ ರಜನಿಕಾಂತ್ ಪತ್ನಿ ಹಾಗೂ ಮಗಳು ಸೌಂದರ್ಯಾ ಜೊತೆ ಕುಟುಂಬ ಸಮೇತರಾಗಿ ಮತಗಟ್ಟೆಗೆ ಬಂದು ಸರತಿ ಸಾಲಿನಲ್ಲಿ ನಿಂತು ಮುಂಜಾನೆಯೇ ಮತದಾನ ಮಾಡಿದ್ದಾರೆ. ನಟ ಕಮಲ್ ಹಾಸನ್ ಪುತ್ರಿ ಶೃತಿ ಹಾಸನ್ ಜೊತೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ನಟ ಅಜಯ್ ಇಂದು ಮುಂಜಾನೆಯೇ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು. ನಟ ವಿಜಯ್ ಕೂಡ ಮತಗಟ್ಟೆಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಅತ್ತ ಪಶ್ಚಿಮ ಬಂಗಾಳದಲ್ಲಿಯೂ ಮತದಾನ ಚುರುಕುಗೊಂಡಿದೆ. ಬಿಸಲ ನಡುವೆಯೂ ಮತದಾರರು ಮತಗಟ್ಟೆಗಳಿಗೆ ಉತ್ಸಾಹದಿಂದ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular