HomeLatest Newsಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ತಮಿಳುನಾಡು ಅರಣ್ಯ ಸಚಿವ..! ಚರ್ಚಿಸಿದ್ದೇನು..?

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ತಮಿಳುನಾಡು ಅರಣ್ಯ ಸಚಿವ..! ಚರ್ಚಿಸಿದ್ದೇನು..?

ಬೆಂಗಳೂರು : ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಇಂದು ಸಿಎಂ ಸಿದ್ದರಾಮಯನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಇಂದು ನನ್ನನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಚರ್ಚಿಸಿದರು.

ಸಚಿವರ ನಿಯೋಗದ ಭೇಟಿಗೂ ಮೊದಲು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿ, ಹೋರಾಟದ ಬಗ್ಗೆ ಚರ್ಚಿಸಿದೆ. ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ನನ್ನ ಬೆಂಬಲ ಸದಾ ಇರಲಿದೆ. ರಾಜ್ಯಗಳ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ನಾವು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ತಮಿಳುನಾಡಿನಂತೆ ಕರ್ನಾಟಕ ಕೂಡ ಸಮಾನ ಅಭಿಪ್ರಾಯ ಹೊಂದಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular