ರೈಲಿನಲ್ಲಿ ಹಿಂದಿಯಲ್ಲಿ ಮಾತನಾಡುತ್ತಿದ್ದ ಉತ್ತರ ಭಾರತದ ಯುವಕರ ಮೇಲೆ ತಮಿಳುನಾಡಿನ ವ್ಯಕ್ತಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆತನ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರೈಲ್ವೆ ಪೊಲೀಸರು ಘೋಷಿಸಿದ್ದಾರೆ.
ಗುರುವಾರದಂದು ಈ ಘಟನೆ ನಡೆದಿದ್ದು, ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವಕರು ಹಿಂದಿಯಲ್ಲಿ ಮಾತನಾಡುತ್ತಿದ್ದುದ್ದನ್ನು ಈ ವ್ಯಕ್ತಿ ಗಮನಿಸಿದ್ದಾನೆ. ಬಳಿಕ ಅವರಿಗೆ ಹಿಂದಿ ಅಥವಾ ತಮಿಳು ಎಂದು ಪ್ರಶ್ನಿಸಿದ್ದು, ಹಿಂದಿ ಎಂದು ಹೇಳುತ್ತಲೇ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ.
ಈ ದೃಶ್ಯವನ್ನು ಇತರೆ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋ ವೈರಲ್ ಆಗುತ್ತಲೇ, ರೈಲ್ವೆ ಪೊಲೀಸರು ಆರೋಪಿಯ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಆರೋಪಿ ಈ ಮೊದಲೂ ಸಹ ಕ್ರಿಮಿನಲ್ ಪ್ರಕರಣಗಳಲ್ಲಿ ಪಾಲ್ಗೊಂಡಿದ್ದ ಎನ್ನಲಾಗಿದ್ದು, ತಮಿಳುನಾಡು ಪೊಲೀಸರು ಕೂಡ ಆತನ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಆರೋಪಿ ಈಗ ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.
https://twitter.com/grpchennai/status/1626546630219665412?ref_src=twsrc%5Etfw%7Ctwcamp%5Etweetembed%7Ctwterm%5E1626546630219665412%7Ctwgr%5E5f1d81350bd6a4fee65776239ae117170f6ccf3d%7Ctwcon%5Es1_&ref_url=https%3A%2F%2Fwww.timesnownews.com%2Findia%2Ftamil-nadu-man-thrashes-abuses-north-indian-youths-in-crowded-train-for-speaking-hindi-railway-police-registers-case-article-98018398