ವಲಸಿಗರ ಮೇಲಿನ ದಾಳಿ ಬಗ್ಗೆ ‘ಸುಳ್ಳು’ ಸುದ್ದಿ: ಬಿಜೆಪಿ ನಾಯಕ, ಇಬ್ಬರು ಪತ್ರಕರ್ತರ ವಿರುದ್ಧ ಕೇಸ್ ದಾಖಲಿಸಿದ ತಮಿಳುನಾಡು ಪೊಲೀಸರು

ತಮಿಳುನಾಡಿನಲ್ಲಿ ಉತ್ತರ ಭಾರತೀಯ ಕಾರ್ಮಿಕರ ಮೇಲೆ ಹಲ್ಲೆಗಳ ಕುರಿತು ಆನ್‌ಲೈನ್‌ನಲ್ಲಿ “ಸುಳ್ಳು ಮತ್ತು ಆಧಾರರಹಿತ” ವರದಿ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಬಿಜೆಪಿ ನಾಯಕ ಮತ್ತು ದೈನಿಕ್ ಭಾಸ್ಕರ್ ಪತ್ರಿಕೆಯ ಸಂಪಾದಕ ಸೇರಿದಂತೆ ಇಬ್ಬರು ಪತ್ರಕರ್ತರ ವಿರುದ್ಧ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವರದಿಗಳ ನಂತರ ಬಿಜೆಪಿ ಈ ವಿಷಯವನ್ನು ಎತ್ತುತ್ತಿದ್ದಂತೆ, ಬಿಹಾರ ಸರ್ಕಾರ ಶನಿವಾರ ತಮಿಳುನಾಡಿಗೆ ತಂಡವನ್ನು ಕಳುಹಿಸಿದ್ದು, ಅದನ್ನು ಪರಿಶೀಲಿಸುವುದಾಗಿ ಜಾರ್ಖಂಡ್ ಹೇಳಿದೆ.

ಗೋವಾ ಸರ್ಕಾರದ ಪರ ಸುಪ್ರೀಂ ಕೋರ್ಟ್‌ನಲ್ಲಿ ಸ್ಥಾಯಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಬಿಜೆಪಿ ವಕ್ತಾರ ಪ್ರಶಾಂತ್ ಉಮ್ರಾವ್, ದೈನಿಕ್ ಭಾಸ್ಕರ್ ಸಂಪಾದಕ ಮತ್ತು ಬಿಹಾರದ ಮೊಹಮ್ಮದ್ ತನ್ವೀರ್ ಎಂಬ ಪತ್ರಕರ್ತರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಅವರ ಬಂಧನಕ್ಕೆ ಮೂರು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಲ್ಲಾ ಉತ್ತರ ಭಾರತೀಯ ಕಾರ್ಮಿಕರು ತಮಿಳುನಾಡಿನಲ್ಲಿ ಶಾಂತಿಯುತವಾಗಿ ಬದುಕುತ್ತಿದ್ದಾರೆ ಎಂದು ತಮಿಳುನಾಡು ಸರ್ಕಾರ ಶನಿವಾರ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ.

ಟ್ವಿಟ್ಟರ್‌ನಲ್ಲಿ ಹೆಚ್ಚಿನ ಅನುಯಾಯಿಗಳನ್ನು ಹೊಂದಿರುವ ಉಮ್ರಾವ್, ಹಿಂದಿ ಮಾತನಾಡಿದ್ದಕ್ಕಾಗಿ ತಮಿಳುನಾಡಿನಲ್ಲಿ 12 ಬಿಹಾರ ಕಾರ್ಮಿಕರನ್ನು “ಗಲ್ಲಿಗೇರಿಸಲಾಯಿತು” ಎಂದು ಟ್ವೀಟ್ ಮಾಡಿದ್ದಾರೆ ಮತ್ತು ತೇಜಸ್ವಿ ಯಾದವ್, ತಮಿಳುನಾಡು ಸಿಎಂ ಸ್ಟಾಲಿನ್ ಜೊತೆಗಿನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಅದೇ ದಿನ ಪತ್ರಕರ್ತರು ವದಂತಿಗಳನ್ನು ಹಬ್ಬಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮೂವರ ವಿರುದ್ಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವ ಅಪರಾಧಗಳಿಗೆ ಸಂಬಂಧಿಸಿದಂತೆ ಕೇಸ್ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read